ದೇಶದಲ್ಲಿ ಜಿಎಸ್ಟಿ ಸೇರಿದಂತೆ ವಿವಿಧ ರೀತಿಯ ತೆರಿಗೆ ಸಂಗ್ರಹಗಳನ್ನು ಏಪ್ರಿಲ್ 6ರವರೆಗೆ ಮುಂದೂಡಲು ಕೇರಳ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಂ. ಖನ್ವಿಲ್ಕರ್ ನೇತೃತ್ವದಲ್ಲಿನ ಪೀಠವು ಕೇರಳ ಹೈಕೋರ್ಟ್ ನೀಡಿದ್ದ ಆದೇಶ ಮತ್ತು ಅಲಹಾಬಾದ್ ಹೈಕೋರ್ಟ್ ಆರಂಭಿಸಿದ್ದ ಪ್ರಕ್ರಿಯೆಗೆ ತಡೆ ನೀಡಿದೆ.

ದೇಶದಲ್ಲಿ ಕೊರೊನಾವೈರಸ್ ಹರಡುವಿಕೆಯಿಂದಾಗಿ ರಾಜ್ಯಗಳು ಆರ್ಥಿಕ ನಷ್ಟವನ್ನು ಎದುರಿಸುವಂತಾಗಿದೆ. ಈ ಪರಿಸ್ಥಿತಿಯಲ್ಲಿ ತೆರಿಗೆ ವಸೂಲಿ ಮತ್ತಷ್ಟು ಹೊರೆಯಾಗಬಹುದು ಎಂದು ಕೇರಳ ಸರ್ಕಾರ ವಾದಿಸಿತ್ತು. ಆದರೆ ತೆರಿಗೆ ಸಂಗ್ರಹ ಮುಂದೂಡಿಕೆಯಿಂದ ಕೇಂದ್ರ ಸರ್ಕಾರದ ಹಣಕಾಸು ಪರಿಸ್ಥಿತಿ ಮೇಲೆ ತೀವ್ರ ಪ್ರತಿಕೂಲ ಪರಿಣಾಮ ಬೀರಲಿದೆ.
ಪ್ರತಿ ತಿಂಗಳು 80 ಸಾವಿರ ಕೋಟಿ ಮೊತ್ತದ ಜಿಎಸ್ಟಿ ಸೇರಿದಂತೆ ವಿವಿಧ ತೆರಿಗೆಗಳು ಸೇರಿ 2 ಲಕ್ಷ ಕೋಟಿ ವರಮಾನ ಸೇರ್ಪಡೆಯಾಗುತ್ತದೆ. ನೌಕರರ ವೇತನ ಪಾವತಿ ಸೇರಿದಂತೆ ಹಲವಾರು ಅಭಿವೃದ್ಧಿ ವೆಚ್ಚಗಳಿಗೆ ಕೇಂದ್ರವು ಹಣ ಹೊಂದಿಸಬೇಕಾಗುತ್ತದೆ' ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರತಿಪಾದಿಸಿದರು.
ಕೇರಳ ಹೈಕೋರ್ಟ್ ಆದಾಯ ತೆರಿಗೆ, ವ್ಯಾಟ್, ಜಿಎಸ್ಟಿ, ಕಟ್ಟಡ ತೆರಿಗೆ, ವಾಹನ ತೆರಿಗೆ ಮುಂತಾದವುಗಳನ್ನು ಏಪ್ರಿಲ್ 6ರವರೆಗೆ ಸಂಗ್ರಹಿಸಲು ನಿರ್ಬಂಧಿಸಿತ್ತು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications