2025 -26ನೇ ಸಾಲಿನ ರಾಜ್ಯ ಬಜೆಟ್‌ಗೆ( Karnataka budget 2025) ದಿನಾಂಕ ಫಿಕ್ಸ್ ಆಗಿದ್ದು,ದಿನಗಣನೆ ಆರಂಭವಾಗಿದೆ.16ನೇಯ ದಾಖಲೆಯ ಬಜೆಟ್ ಮಂಡನೆ ಮಾಡಲು ಸಿಎಂ ಸಿದ್ದರಾಮಯ್ಯ( CM Siddaramaiah) ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ.ಈ ಬಾರಿಯ ಬಜೆಟ್ ಮೇಲೆ ಸಾಮಾನ್ಯ ವರ್ಗದ ಜನರು ಭಾರೀ ನಿರೀಕ್ಷೆಗಳನ್ನು ಇಟ್ಟಕೊಂಡಿದ್ದಾರೆ. ಅದರಲ್ಲೂ ಈ ಭಾರೀ ಕರಾವಳಿ ಭಾಗದ ಜನರು ನಮ್ಮ ಭಾಗಕ್ಕೆ ಹೆಚ್ಚಿನ ಅನುದಾನವನ್ನು ನೀಡಬೇಕು ಎಂದು ಸರ್ಕಾರಕ್ಕೆ ಬೇಡಿಕೆಗಳನ್ನು ಇಟ್ಟಿದ್ದಾರೆ. ಹಾಗಿದ್ರೆ ಏನೆಲ್ಲಾ ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ...
ಹೌದು,ಕರಾವಳಿಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕರ್ನಾಟಕ ಬಜೆಟ್‌ನಲ್ಲಿ 3000 ಕೋಟಿ ರೂ.ಗಳನ್ನು ಮೀಸಲಿಡುವಂತೆ ಸರ್ಕಾರ ಮುಂದೆ ಬೇಡಿಕೆಯನ್ನು ಇಟ್ಟಿದ್ದಾರೆ.

ಸರ್ಕಾರಿ ವೈದ್ಯಕೀಯ ಕಾಲೇಜು, ಹೈಕೋರ್ಟ್ ಪೀಠ, ಐಟಿ ಪಾರ್ಕ್, ಅಡಿಕೆಗೆ ಕನಿಷ್ಠ ಬೆಂಬಲ ಬೆಲೆ ಮತ್ತು ಅಡಿಕೆ ಸಂಶೋಧನಾ ಕೇಂದ್ರ ಸ್ಥಾಪನೆಯನ್ನು ಘೋಷಿಸಬೇಕೆಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ದಕ್ಷಿಣ ಕನ್ನಡ ಜಿಲ್ಲಾ ಘಟಕವು ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಎಸ್, ಬಜೆಟ್ ಮಂಡಿಸುವಾಗ, ಹೊಸ ಕಲ್ಯಾಣ ಯೋಜನೆಗಳು, ಉದ್ಯೋಗ ಸೃಷ್ಟಿ, ಶಿಕ್ಷಣ, ಆರೋಗ್ಯ ರಕ್ಷಣೆ ಮತ್ತು ಸಮಾಜ ಕಲ್ಯಾಣ ಸೇರಿದಂತೆ ಎಲ್ಲಾ ಇಲಾಖೆಗಳಿಗೆ ಸಾಕಷ್ಟು ಹಣವನ್ನು ಮೀಸಲು ಇಡಬೇಕು ಎಂದು ಹೇಳಿದ್ದಾರೆ.
ಎಲ್ಲಾ ಜಿಲ್ಲೆಗಳಲ್ಲಿ ಸಮತೋಲಿತ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ಪ್ರಾದೇಶಿಕ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಆದರೆ ಸತತವಾಗಿ ಸರ್ಕಾರಗಳು ದಕ್ಷಿಣ ಕನ್ನಡಕ್ಕೆ ಹೊಸ ಯೋಜನೆಗಳನ್ನು ಪರಿಚಯಿಸಲು ಹಿಂಜರಿಯುತ್ತಿವೆ ಎಂದು ಆರೋಪ ಮಾಡಿದ್ದರು.
ದಕ್ಕಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಮತ್ತು ಕಂಪನಿಗಳು ಖಾಸಗಿ ಒಡೆತನದಲ್ಲಿವೆ.ರಾಜ್ಯದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ಜಿಲ್ಲೆಗಳಲ್ಲಿ ಒಂದಾಗಿದ್ದರೂ, ಇಲ್ಲಿ ಸಾಕಷ್ಟು ಸಾರ್ವಜನಿಕ ಸೌಲಭ್ಯಗಳು ಮತ್ತು ಯೋಜನೆಗಳನ್ನು ಒದಗಿಸಲು ಸರ್ಕಾರ ಹಿಂಜರಿಯುತ್ತಿರುವುದು ಸ್ವೀಕಾರಾರ್ಹವಾಗಿಲ್ಲ ಎಂದರು.
ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪನೆ ಮಾಡಬೇಕು.ಇದರ ಜೊತೆಗೆ ಮಂಗಳೂರಿನಲ್ಲಿ ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಶಾಖೆಯನ್ನು ಸ್ಥಾಪಿಸಬೇಕು. ಕಾನೂನು ಶಿಕ್ಷಣದ ಅವಕಾಶಗಳನ್ನು ಹೆಚ್ಚಿಸಲು ಸರ್ಕಾರಿ ಕಾನೂನು ಕಾಲೇಜು ಸ್ಥಾಪಿಸಬೇಕು. ಮಸೀದಿಗಳು ಮತ್ತು ಮದರಸಾಗಳಲ್ಲಿ ಸೇವೆ ಸಲ್ಲಿಸುವ ಮೌಲ್ವಿಗಳು ಮತ್ತು ಉಸ್ತಾದ್‌ಗಳಿಗೆ ವಸತಿ ವಿನ್ಯಾಸವನ್ನು ಸ್ಥಾಪಿಸಬೇಕು ಎಂದು ಸರ್ಕಾರಕ್ಕೆ ಬೇಡಿಕೆಯನ್ನು ಇಟ್ಟಿದ್ದಾರೆ.
ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಿ
ಪ್ರವಾಸೋದ್ಯಮಕ್ಕೆ ಅಗತ್ಯವನ್ನು ಒತ್ತಿ ಹೇಳಿದ ಸದಾತ್ ಇಡ್ಯಾ, ಬೆಂಗ್ರೆ, ತಣ್ಣೀರುಬಾವಿ, ಪಣಂಬೂರು, ಸೋಮೇಶ್ವರ ಮತ್ತು ಉಳ್ಳಾಲ ಕಡಲತೀರಗಳನ್ನು ವಾಕಿಂಗ್ ಟ್ರ್ಯಾಕ್‌ಗಳು, ಮನೋರಂಜನಾ ಉದ್ಯಾನವನಗಳು ಮತ್ತು ಮನರಂಜನಾ ವಲಯಗಳಂತಹ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಬೇಕು ಎಂದು ರಾಜ್ಯ ಸರ್ಕಾರವನ್ನು ಕೇಳಿಕೊಂಡಿದ್ದಾರೆ.
ಪ್ರವಾಸೋದ್ಯಮ ಅಭಿವೃದ್ಧಿಗೆ 3,000 ಕೋಟಿ ಮೀಸಲು
ಪ್ರವಾಸಿಗರನ್ನು ಆಕರ್ಷಿಸಲು ಪ್ರವಾಸೋದ್ಯಮ ಇಲಾಖೆಯು ಕೈಗೆಟುಕುವ ಅತಿಥಿಗೃಹಗಳನ್ನು ನಿರ್ಮಾಣ ಮಾಡಬೇಕು. ಕರಾವಳಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಕನಿಷ್ಠ 3,000 ಕೋಟಿ ರೂ.ಗಳ ಬಜೆಟ್‌ನಲ್ಲಿ ಮೀಸಲು ಇಡಬೇಕು ಎಂದು ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.
ಪುತ್ತೂರನ್ನು ಜಿಲ್ಲೆಯಾಗಿ ಘೋಷಿಸಿಸಬೇಕು
ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಪುತ್ತೂರನ್ನು ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದರು.
ಭತ್ತದ ಕೃಷಿಗೆ ಉತ್ತೇಜನ ನೀಡಿ
ಭತ್ತದ ಕೃಷಿಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ಎಕರೆಗೆ ಎರಡು ಲಕ್ಷ ರೂಪಾಯಿಗಳ ಆರ್ಥಿಕ ನೆರವಿನ ವಿಶೇಷ ಹಣಕಾಸು ಪ್ಯಾಕೇಜ್ ಅನ್ನು ಘೋಷಿಸಬೇಕು. ಬಜೆಟ್‌ನಲ್ಲಿ ಹೈಕೋರ್ಟ್ ಪೀಠದ ರಚನೆಯನ್ನೂ ಘೋಷಿಸಬೇಕು. ಈ ಪ್ರದೇಶದಲ್ಲಿ ಅಡಿಕೆ ಕೃಷಿಯು ಹಳದಿ ಎಲೆ ರೋಗ ಮತ್ತು ಇತರ ಸಮಸ್ಯೆಗಳಿಂದ ತೀವ್ರವಾಗಿ ಪರಿಣಾಮ ಬೀರಿರುವುದರಿಂದ, ಸರ್ಕಾರವು ಅಡಿಕೆಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕು ಮತ್ತು ಈ ಸವಾಲುಗಳನ್ನು ನಿಭಾಯಿಸಲು ರೈತರಿಗೆ ಸಹಾಯ ಮಾಡಲು ಕರಾವಳಿ ಪ್ರದೇಶದಲ್ಲಿ ಮೀಸಲಾದ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಸರ್ಕಾರದ ಮುಂದೆ ಬೇಡಿಕೆಯನ್ನು ಇಟ್ಟಿದ್ದಾರೆ.


Click it and Unblock the Notifications