ಸೆಕ್ಯೂರಿಟೀಸ್ ಮತ್ತು ಎಕ್ಸ್‌ಚೇಂಜ್ ಬ್ಯೂರೋ (ಸೆಬಿ) ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ತನಿಖೆಯ ಬಗ್ಗೆ ಕೇಂದ್ರ ಹಣಕಾಸು ಸಚಿವಾಲಯಕ್ಕೆ ಮಾಹಿತಿ ನೀಡಲು ಮುಂದಾಗಿದೆ ಎಂದು ವರದಿಯಾಗಿದೆ. ಅದಾನಿ ಗ್ರೂಪ್ 2.5 ಬಿಲಿಯನ್ ಡಾಲರ್ ಎಫ್‌ಪಿಒ ಅನ್ನು ವಿತ್‌ಡ್ರಾ ಮಾಡಿಕೊಂಡ ವಿಚಾರದಲ್ಲಿ ಸೆಬಿ ತನಿಖೆಯನ್ನು ನಡೆಸುತ್ತಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರನ್ನು ಫೆಬ್ರವರಿ 15ರಂದು ಸೆಬಿ ಬೋರ್ಡ್ ಭೇಟಿಯಾಗಲಿದೆ ಎಂದು ವರದಿ ಉಲ್ಲೇಖಿಸಿದೆ. ಅದಾನಿ ಗ್ರೂಪ್ ಸ್ಟಾಕ್ ವಿಚಾರದಲ್ಲಿನ ಕ್ರಮಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆಗೆ ಸೆಬಿ ವಿವರಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಎಲ್ಲ ಬೆಳವಣಿಗೆಯು ಹಿಂಡನ್‌ಬರ್ಗ್ ವರದಿಯ ಬಳಿಕ ನಡೆದಿದೆ. ಅದಾನಿ ಗ್ರೂಪ್ ಸ್ಟಾಕ್ ಮಾರುಕಟ್ಟೆಯಲ್ಲಿ ವಂಚನೆ ನಡೆಸಿದೆ ಎಂದು ಹಿಂಡನ್‌ಬರ್ಗ್ ವರದಿ ಮಾಡಿದೆ. ಇದಾದ ಬಳಿಕ ಅದಾನಿ ಗ್ರೂಪ್ ಮೌಲ್ಯ ಬರೋಬ್ಬರಿ 100 ಬಿಲಿಯನ್ ಡಾಲರ್‌ನಷ್ಟು ಕುಸಿದಿದೆ. ಅಂದರೆ ಅದಾನಿ ಗ್ರೂಪ್ ಮೌಲ್ಯ ಅರ್ಧ ಭಾಗದಷ್ಟು ಕುಸಿದಿದೆ.

ಅದಾನಿ ಗ್ರೂಪ್‌ನ ಫಂಡ್‌ಗಳ ಬಗ್ಗೆ ತನಿಖೆಯಲ್ಲಿ ಅಪ್‌ಡೇಟ್ ಲಭ್ಯವಾಗಿದೆ ಎಂದು ಕೂಡಾ ವರದಿಯಾಗಿದೆ. ಅದಾನಿ ಗ್ರೂಪ್‌ನ ಸ್ಟಾಕ್ ಮಾರುಕಟ್ಟೆ ಬೆಳವಣಿಗೆ ಬಗ್ಗೆ ಸೆಬಿ ತನಿಖೆ ನಡೆಸುತ್ತಿದೆ ಎಂದು ಮೊದಲ ಬಾರಿಗೆ ರಾಯಿಸ್ಟರ್ ವರದಿ ಮಾಡಿದೆ. ಇನ್ನು ಈ ಆರೋಪದ ಬಗ್ಗೆ ಸೆಬಿ ಸರಿಯಾದ ರೀತಿಯಲ್ಲಿ ತನಿಖೆ ನಡೆಸಲಿದೆ ಎಂದು ವರದಿಯಾಗಿದೆ.
ಏನಿದು ಹಿಂಡನ್‌ಬರ್ಗ್ ವರದಿ?
ತನಿಖಾ ಸಂಸ್ಥೆ ಹಿಂಡೆನ್‌ಬರ್ಗ್ ಅದಾನಿ ಗ್ರೂಪ್ ವಿರುದ್ಧ ಭಾರೀ ವಂಚನೆ ಆರೋಪ ಮಾಡಿದೆ. ಲೆಕ್ಕಪತ್ರ ವಂಚನೆಯಲ್ಲಿ ಹಾಗೂ ಸ್ಟಾಕ್ ಮ್ಯಾನಿಪ್ಯುಲೇಷನ್‌ನಲ್ಲಿ ಅದಾನಿ ಗ್ರೂಪ್ ಭಾಗವಹಿಸಿದೆ ಎಂದು ಹಿಂಡೆನ್‌ಬರ್ಗ್ ತನಿಖಾ ವರದಿ ಹೇಳಿದೆ. ಅದಾನಿ ಗ್ರೂಪ್ ವಿರುದ್ಧ ಮನಿ ಲಾಂಡರಿಂಗ್, ತೆರಿಗೆ ಡಾಲರ್ ಕಳ್ಳತನ ಮತ್ತು ಭ್ರಷ್ಟಾಚಾರದ ಆರೋಪಗಳನ್ನು ಕೂಡ ಹಿಂಡನ್‌ಬರ್ಗ್ ತನಿಖಾ ವರದಿ ಮಾಡಿದೆ. ಅದಾನಿ ಕುಟುಂಬದ ಸದಸ್ಯರು ಹಾಗೂ ಕಂಪನಿಗೆ ಸಂಬಂಧಿಸಿದ ಅಧಿಕಾರಿಗಳು ಮಾರಿಷಸ್, ಯುಎಇ ಮತ್ತು ಕೆರಿಬಿಯನ್ ದ್ವೀಪಗಳಲ್ಲಿ ಕಡಲಾಚೆಯ ಶೆಲ್ ಘಟಕಗಳನ್ನು ರಚಿಸಲು ಸಹಕರಿಸಿದ್ದಾರೆ. ನಕಲಿ ಅಥವಾ ಕಾನೂನುಬಾಹಿರ ವಹಿವಾಟು ಮತ್ತು ಲಿಸ್ಟೆಡ್ ಕಂಪನಿಗಳಿಂದ ಹಣವನ್ನು ಪಡೆಯುವ ಪ್ರಯತ್ನ ಮಾಡಿದ್ದಾರೆ. ನಕಲಿ ಆಮದು/ರಫ್ತು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಹಿಂಡೆನ್‌ಬರ್ಗ್ ತನ್ನ ತನಿಖಾ ವರದಿಯಲ್ಲಿ ತಿಳಿಸಿದೆ. ಷೇರು ಮಾರುಕಟ್ಟೆಯಲ್ಲಿ ನಕಲಿ ಷೇರುಗಳ ಸೃಷ್ಟಿ ಮಾಡಲಾಗಿದೆ ಎಂದು ಹೇಳಲಾಗಿದೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಪ್ರಾಪ್ಶೇರ್ ಸೆಲೆಸ್ಟಿಯಾ ಐಪಿಒ: ಹೂಡಿಕೆಗೆ ಇಂದು ಕೊನೆಯ ಅವಕಾಶ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications