ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ನಿಗದಿಯ ಬಗ್ಗೆ ದೊಡ್ಡ ಅಪ್ಡೇಟ್ ಒಂದು ಸಿಕ್ಕಿದೆ. ಹೌದು, ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಸ್ಥಾಪನೆಗೆ ರಾಜ್ಯ ಸರ್ಕಾರ ಸ್ಥಳ ಗುರುತಿಸಿ ಪ್ರಸ್ತಾವನೆ ಸಲ್ಲಿಸಿದರೆ,ಅನುಮೋದನೆ ನೀಡಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಭರವಸೆಯನ್ನು ನೀಡಿದ್ದಾರೆ.
ಹೌದು, ನಿನ್ನೆ ನಡೆದ ರಾಜ್ಯಸಭೆಯಲ್ಲಿ ಎಚ್.ಡಿ.ದೇವೇಗೌಡ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು,ಬೆಂಗಳೂರು ವಿಮಾನ ನಿಲ್ದಾಣವು ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು,ಜನ ದಟ್ಟಣೆಯ ಸಾವಲುಗಳನ್ನು ಎದುರಿಸುತ್ತಿದೆ.ಇದನ್ನು ನಾವು ಒಪ್ಪುತ್ತೇವೆ ಆದರೆ ಮೊದಲು ರಾಜ್ಯ ಸರ್ಕಾರ ಸ್ಥಳ ಗುರುತಿಸಿ ವಿಮಾನ ನಿಲ್ದಾಣ ಸ್ಥಾಪನೆ ಪ್ರಸ್ತಾವನೆ ಸಲ್ಲಿಸಿದರೆ, ಅದಕ್ಕೆ ಅಗತ್ಯ ಅನುಮೋದನೆ ನೀಡಲಾಲಾಗುತ್ತದೆ ಎಂದು ಹೇಳಿದ್ದರು.

ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನಕ್ಕೆ ಬೆಂಗಳೂರು ನಗರ ಜಾಗತಿಕ ಹಬ್ ಆಗಿದ್ದು, ಸುಲಭ ಸಂಪರ್ಕಕ್ಕೆ ಮತ್ತೊಂದು ವಿಮಾನ ನಿಲ್ದಾಣ ನಗರಕ್ಕೆ ಅಗತ್ಯವಿದೆ ಎಂದು ದೇವೇಗೌಡ ಪ್ರತಿಪಾದಿಸಿದರು.
ನಾಗರಿಕ ವಿಮಾನಯಾನ ಸಚಿವರ ಜೊತೆ ಚರ್ಚೆ
ಕರ್ನಾಟಕ ಸರ್ಕಾರ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ. ಸರ್ಕಾರ ಈಗಾಗಲೇ ನಾಗರಿಕ ವಿಮಾನಯಾನ ಸಚಿವರನ್ನು ಸಂಪರ್ಕಿಸಿ ಈ ಬಗ್ಗೆ ಚರ್ಚೆ ನಡೆಸಿದೆ.
ಮತ್ತೊಂದು ವಿಮಾನ ನಿಲ್ದಾಣ ಅಗತ್ಯ
ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಬೆಂಗಳೂರು ನಗರಕ್ಕೆ, ಮತ್ತೊಂದು ವಿಮಾನ ನಿಲ್ದಾಣ ಅಗತ್ಯ ಹೆಚ್ಚಾಗಿ ಇದೆ ಎಂದು ಹೇಳಿದ್ದರು.
ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ರೋಡ್‌ಷೋಗೆ ದೆಹಲಿಗೆ ಬಂದಿದ್ದ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ. 'ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣಕ್ಕಾಗಿ ತಮ್ಮ ಇಲಾಖೆ ಮೂರು ಸ್ಥಳಗಳನ್ನು ಗುರುತಿಸಿದೆ. ಕೇಂದ್ರ ಸರ್ಕಾರದ ತಜ್ಞರ ತಂಡವು ಈ ಸ್ಥಳಗಳನ್ನು ಪರಿಶೀಲನೆ ನಡೆಸಲಿದೆ. ಮುಖ್ಯಮಂತ್ರಿ ಅವರೊಂದಿಗೆ ಸಮಾಲೋಚಿಸಿ ಸ್ಥಳ ಅಂತಿಮಗೊಳಿಸಲಾಗುವುದು ಎಂದು ಮಾಹಿತಿಯನ್ನು ತಿಳಿಸಿದ್ದರು.
ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಹಾಗೂ ಕೇಂದ್ರ ಸರ್ಕಾರ ಮಾಡಿಕೊಂಡ ಒಪ್ಪಂದದ ಪ್ರಕಾರ, ಕೆಂಪೇಗೌಡ ವಿಮಾನ ನಿಲ್ದಾಣದ 150 ಕಿ.ಮೀ. ವ್ಯಾಪ್ತಿಯಲ್ಲಿ 2033ರ ವರೆಗೆ ಯಾವುದೇ ಹೊಸ ವಿಮಾನ ನಿಲ್ದಾಣ ನಿರ್ಮಿಸುವಂತಿಲ್ಲ. ಆದರೆ, ಹಾಸನ ಹಾಗೂ ಮೈಸೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಬಹುದು ಎಂಬ ಅಂಶ ಒಪ್ಪಂದದಲ್ಲಿದೆ.
ಈ ಒಪ್ಪಂದದ ಪ್ರಕಾರ, 2033ರ ವರೆಗೆ ಎರಡನೇ ವಿಮಾನ ನಿಲ್ದಾಣದ ಕಾರ್ಯಾಚರಣೆ ಆರಂಭಿಸುವಂತಿಲ್ಲ. ಆದರೆ, ಭೂಸ್ವಾಧೀನ ಪ್ರಕ್ರಿಯೆ, ಅನುಮತಿ, ವಿಮಾನ ನಿಲ್ದಾಣ ಕಾಮಗಾರಿಗೆ ಸಾಕಷ್ಟು ಸಮಯ ಬೇಕಾಗುತ್ತದೆ. ಈಗಲೇ ಪ್ರಕ್ರಿಯೆ ಆರಂಭಿಸಿದರೆ 2033ರ ವೇಳೆಗೆ ವಿಮಾನ ನಿಲ್ದಾಣದ ಕಾರ್ಯಾಚರಣೆ ಆರಂಭಿಸಬಹುದು ಎಂದು ಮಾಹಿತಿಯನ್ನು ತಿಳಿಸಿದ್ದಾರೆ.
ಮೂರು ಸಾವಿರ ಎಕರೆ ಭೂಮಿ ನಿಗದಿ
ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜಾಗ ನಿಗದಿಯನ್ನು ಕೈಗಾರಿಕಾ ಪ್ರದೇಶ ವಸಂತನರಸಾಪುರದ ರಾಷ್ಟ್ರೀಯ ಹೆದ್ದಾರಿ 48ಕ್ಕೆ ಇರುವ ಮೂರು ಸಾವಿರ ಎಕರೆಯ ಭೂಮಿಯನ್ನು ಗುರುತು ಮಾಡಲಾಗಿದೆ. ಇನ್ನೂ ತುಮಕೂರಿನ ಬಳಿ ಇರುವ ಸೀಬಿ ಹತ್ತಿರ ಐದು ಸಾವಿರ ಎಕರೆ ಭೂಮಿಯನ್ನು ನಕ್ಷೆ ಮೂಲಕ ಗುರುತಿಸಲಾಗಿದೆ. ಎರಡು ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ತುಮಕೂರು ಜಿಲ್ಲೆಯಲ್ಲಿಯೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮನವಿ ಮಾಡಲಾಗಿದೆ. ವಿಮಾನ ನಿಲ್ದಾಣಕ್ಕೆ ಗ್ರೀನ್ ಸಿಗ್ನೇಲ್ ಸಿಗುವುದೊಂದು ಮಾತ್ರ ಬಾಕಿ ಇರುವುದು.
ಎರಡನೇ ವಿಮಾನ ನಿಲ್ದಾಣ ತುಮಕೂರಿನಲ್ಲಿ ಆಗಬೇಕು ಎಂದು ಗೃಹ ಸಚಿವ ಪರಮೇಶ್ವರ್ ಸರ್ಕಾಟಕ್ಕೆ ಬೇಡಿಕೆ ಇಟ್ಟರೆ ಮತ್ತೊಂದು ಕಡೆ ಡಿಸಿಎಂ ಡಿ.ಕೆ ಶಿವಕುಮಾರ್ ಕನಕಪುರದಲ್ಲಿ ನಿರ್ಮಾಣ ಮಾಡಬೇಕು ಎಂದು ಪಣ ತೋಟ್ಟಿದ್ದಾರೆ ಆದರೆ ಕೇಂದ್ರ ಯಾವ ಸ್ಥಳಕ್ಕೆ ಅನುಮೋದನೆ ಕೊಡಬೇಕು ಎಂಬುವುದನ್ನು ಕಾದುನೋಡಬೇಕಿದೆ.


Click it and Unblock the Notifications