ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದ (Bengaluru Second Airport)ಬಗ್ಗೆ ರಾಜ್ಯದಲ್ಲಿ ಚರ್ಚೆಗಳು ಭಾರೀ ಜೋರಾಗಿನೇ ನಡೆಯುತ್ತಲೇ ಇದೆ. ಈಗಾಗಲೇ ಎರಡನೇ ವಿಮಾನ ನಿಲ್ದಾಣ(Second Airport) ನಿರ್ಮಾಣಕ್ಕೆ ಬೆಂಗಳೂರು ನಗರದ ಸುತ್ತಮುತ್ತಲೂ ಮೊದಲು 7 ಸ್ಥಳಗಳನ್ನು ಗುರುತಿಸಲಾಗಿತ್ತು. ಆದರೆ ಅದರಲ್ಲಿ 3 ಸ್ಥಳಗಳು ಮಾತ್ರ ಫೈನಲ್ ಮಾಡಲಾಗಿದೆ.ಅದರೆ ವಿಮಾನ ನಿಲ್ದಾಣ(Airport) ಎಲ್ಲಿ ಎಂಬುವುದು ಕುತೂಹಲಕರ ಸಂಗತಿ.ಆದರೆ ಅಧಿಕೃತ ಸ್ಥಳ ಯಾವುದು? ಎಂಬುದು ಇನ್ನೂ ಬಹಿರಂಗವಾಗಿಲ್ಲ... 2ನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಸ್ವತಃ ರಾಜ್ಯಪಾಲರೇ ದೊಡ್ಡ ಅಪ್ಡೇಟ್ಸ್‌ವೊಂದನ್ನು ನೀಡಿದ್ದಾರೆ.
ಹೌದು, ನಿನ್ನೆ (ಮಾ.4)ರಂದು ವಿಧಾನಮಂಡಲದ ಉಭಯಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು ನಗರದ ಬಳಿಯಲ್ಲಿ ಎರಡನೇ ವಿಮಾನ ನಿಲ್ದಾಣವನ್ನು ಸ್ಥಾಪಿಸಲು ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾಹಿತಿಯನ್ನು ತಿಳಿಸಿದ್ದಾರೆ.

ಡಿ.ಕೆ ಶಿವಕುಮಾರ್ ತಮ್ಮ ಹುಟ್ಟೂರು ಕನಕಪುರದ ಬಳಿಯ ಬಿಡದಿ ಮತ್ತು ಹಾರೋಹಳ್ಳಿ ನಡುವೆ ಒಂದು ಸ್ಥಳವನ್ನು ಪ್ರಸ್ತಾಪಿಸಿದ್ದಾರೆ.ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ)ಅದಕ್ಕೆ ಅನುಮೋದನೆ ನೀಡುವ ಬಗ್ಗೆ ಪರಮೇಶ್ವರ ಅನುಮಾನನ್ನು ಕೂಡ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಮತ್ತು ಪುಣೆ NH-40 ರ ಹೊರಗಿರುವ ತುಮಕೂರಿನಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡಬೇಕೆಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ವಿಮಾನ ನಿಲ್ದಾಣದ ನಿರ್ಮಾಣದ ಬಗ್ಗೆ ಸರ್ಕಾರವು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ.ಇದು ತಾಂತ್ರಿಕ ವಿಷಯವಾಗಿದೆ. ನಿರ್ಧಾರ ತೆಗೆದುಕೊಳ್ಳುವ ಮೊದಲು ಸಾಧಕ-ಬಾಧಕಗಳನ್ನು ಚರ್ಚಿಸಲಾಗುವುದು ಆದರೆ ಅಷ್ಟೊಂದು ಚರ್ಚೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಮ್ಮ ಊರಿಗೆ ವಿಮಾನ ನಿಲ್ದಾಣ ಬರಬೇಕೆಂದು ಇಬ್ಬರು ಸಚಿವರ ನಡುವೆ ಹಗ್ಗಾ-ಜಗ್ಗಾಟ ನಡೆಯುತ್ತಿದೆ.ಬೆಂಗಳೂರಿಗೆ ಸಮೀಪವಿರುವ ತುಮಕೂರಿಗೆ ವಿಮಾನ ನಿಲ್ದಾಣ (Airport) ಬರಬೇಕು ಎಂದು ಗೃಹ ಸಚಿವ ಪರಮೇಶ್ವರ್ ಪಟ್ಟು ಹಿಡಿದ್ದಾರೆ ಮತ್ತೊಂದು ಕಡೆ ಕನಕಪುರದಲ್ಲಿ ವಿಮಾನ ನಿಲ್ದಾಣವಾಗಬೇಕು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದಾರೆ ಆದರೆ ಎಲ್ಲಿ ವಿಮಾನ ನಿಲ್ದಾಣವಾಗುತ್ತದೆ ಎಂಬುದು ಮಾತ್ರ ನಿಗೂಢವಾಗಿಯೇ ಉಳಿದಿದೆ.
ಬೆಂಗಳೂರು ಸಿಗ್ನೆಚರ್ ಬ್ಯುಸಿನೆಸ್ ಪಾರ್ಕ್
ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 407 ಎಕರೆ ವಿಸ್ತೀರ್ಣದ ಪ್ರದೇಶದಲ್ಲಿ ಬ್ಯುಸಿನೆಸ್ ಪಾರ್ಕ್ ಅನ್ನು ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಹೇಳಿದ್ದರು.
ಕ್ಲೀನ್ ಸಿಟಿ ಅಭಿವೃದ್ಧಿ
ನಗರದ ಹೊರವಲಯದಲ್ಲಿ ನಾಲವತ್ತು ಸಾವಿರ ಕೋಟಿ ಬಂಡವಾಳ ಹೂಡಿಕೆಯೊಂದಿಗೆ ಕ್ಲೀನ್ ಸಿಟಿ ಅಭಿವೃದ್ಧಿಪಡಿಸಲು ಉದ್ದೇಶಿಸಿದ್ದು,ಇದರಿಂದಾಗಿ ಸುಮಾರು ೮೦ ಸಾವಿರ ಉದ್ಯೋಗಾವಕಾಶಗಳು ಸೃಷ್ಟಿಯಾಗಬಹುದೆಂದು ಅಂದಾಜಿಸಲಾಗಿದೆ ಎಂದು ಹೇಳಿದರು.
ರಿಯಲ್ ಎಸ್ಟೇಟ್‌ಗೆ ಚಿನ್ನದ ಬೆಲೆ
ಉತ್ತರ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಅಭಿವೃದ್ಧಿಗೆ ನಾಂದಿ ಹಾಡಿದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಂತೆಯೇ, ಎರಡನೇ ವಿಮಾನ ನಿಲ್ದಾಣದ ಸ್ಥಳವು ರಿಯಲ್ ಎಸ್ಟೇಟ್ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ವಸತಿ, ವಾಣಿಜ್ಯ ಸಂಸ್ಥೆಗಳು ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ ಎಂದು ತಜ್ಞರು ಹೇಳಿದ್ದಾರೆ.
ಕೇಂದ್ರ ಅನುಮೋದನೆ ಬೇಕು
ಈಗಾಗಲೇ ಮೂಲಸೌಕರ್ಯ ಸಚಿವ ಎಂಬಿ ಪಾಟೀಲ್ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಸಂಬಂಧಿಸಿದ ಇಲಾಖೆಗಳು ಇದರ ಕಾರ್ಯಸಾಧ್ಯತೆ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಎಂಬಿ ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ , ಡಿಕೆ ಶಿವಕುಮಾರ್ ಚರ್ಚೆ ಮಾಡಿದ್ದಾರೆ. ಈಗಗಲೇ ವಿಮಾನ ನಿಲ್ದಾಣದ ಪ್ರಸ್ತಾವನೆಯನ್ನು ಸಂಪುಟಕ್ಕೆ ಕಳಹಿಸಲಾಗಿದೆ ನಂತರ ಕೇಂದ್ರದಿಂದ ಅನುಮೋದನೆ ಪಡೆದು ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳವನ್ನು ನಿರ್ಧರಿಸುತ್ತೇವೆ ಎಂದು ಮಾಹಿತಿಯನ್ನು ತಿಳಿಸಿದ್ದರು.
ಎರಡನೇ ವಿಮಾನ ನಿಲ್ದಾಣಕ್ಕೆ ಅನುಮತಿ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳ ಅಂತಿಮಗೊಂಡ ನಂತರ ಅನುಮತಿ ನೀಡಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಫೆಬ್ರವರಿ 3 ರಂದು ರಾಜ್ಯಸಭೆಗೆ ಭರವಸೆ ನೀಡಿದ್ದಾರೆ. ಆದರೆ ಎಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣವಾಗುತ್ತೆ ಎಂದು ರಾಜ್ಯಪಾಲರ ಭಾಷಣದಲ್ಲಿಯೂ ಬಹಿರಂಗಪಡಿಸಿಲ್ಲ ಎಲ್ಲಿ ನಿರ್ಮಾಣವಾಗಬಹುದು ಎಂಬುವುದನ್ನು ಕಾದುನೋಡಬೇಕಿದೆ.


Click it and Unblock the Notifications