For Quick Alerts
ALLOW NOTIFICATIONS  
For Daily Alerts

Closing Bell: ಸೆನ್ಸೆಕ್ಸ್ 273 ಪಾಯಿಂಟ್ಸ್‌ ಕುಸಿತ, ನಿಫ್ಟಿ 78 ಪಾಯಿಂಟ್ಸ್ ಇಳಿಕೆ

|

ಭಾರತೀಯ ಷೇರುಪೇಟೆ ಮಂಗಳವಾರ ಸಕಾರಾತ್ಮಕ ಆರಂಭ ಪಡೆದರೂ, ದಿನದ ವಹಿವಾಟು ಅಂತ್ಯಕ್ಕೆ ಕುಸಿತದೊಂದಿಗೆ ಮುಕ್ತಾಯಗೊಂಡಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 273 ಪಾಯಿಂಟ್ಸ್‌ ಕುಸಿತಗೊಂಡರೆ, ನಿಫ್ಟಿ 78 ಪಾಯಿಂಟ್ಸ್ ಇಳಿಕೆಯಾಗಿದೆ.

 

ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 273.51 ಪಾಯಿಂಟ್ಸ್‌ ಅಥವಾ ಶೇಕಡಾ 0.52ರಷ್ಟು ಇಳಿಕೆಗೊಂಡು 52578.76 ಪಾಯಿಂಟ್ಸ್ ತಲುಪಿದೆ. ಎನ್‌ಎಸ್‌ಇ ಸೂಚ್ಯಂಕ ನಿಫ್ಟಿ 78 ಪಾಯಿಂಟ್ಸ್ ಅಥವಾ ಶೇಕಡಾ 0.49ರಷ್ಟು ಕುಸಿದು 15746.50 ಪಾಯಿಂಟ್ಸ್‌ ಮುಟ್ಟಿದೆ.

ದಿನದ ವಹಿವಾಟು ಅಂತ್ಯಕ್ಕೆ 1563 ಷೇರುಗಳು ಏರಿಕೆಗೊಂಡರೆ, 1630 ಷೇರುಗಳು ಕುಸಿದವು ಮತ್ತು 107 ಷೇರುಗಳ ಮೌಲ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

Closing Bell: ಸೆನ್ಸೆಕ್ಸ್ 273 ಪಾಯಿಂಟ್ಸ್‌ ಕುಸಿತ

ಡಾ. ರೆಡ್ಡೀಸ್ ಲ್ಯಾಬ್ಸ್, ಸಿಪ್ಲಾ, ಆಕ್ಸಿಸ್ ಬ್ಯಾಂಕ್, ಅದಾನಿ ಪೋರ್ಟ್ಸ್ ಮತ್ತು ಡಿವಿಸ್ ಲ್ಯಾಬ್ಸ್ ನಿಫ್ಟಿಯಲ್ಲಿ ನಷ್ಟ ಅನುಭವಿಸಿದ ಪ್ರಮುಖ ಷೇರುಗಳಾಗಿದ್ದು, ಹಿಂಡಾಲ್ಕೊ ಇಂಡಸ್ಟ್ರೀಸ್, ಎಸ್‌ಬಿಐ ಲೈಫ್ ಇನ್ಶುರೆನ್ಸ್, ಟಾಟಾ ಸ್ಟೀಲ್, ಬಜಾಜ್ ಫಿನ್‌ಸರ್ವ್ ಮತ್ತು ಎಸ್‌ಬಿಐ ಹೆಚ್ಚು ಲಾಭ ಗಳಿಸಿದ ಷೇರುಗಳಾಗಿವೆ.

ಲೋಹ ಮತ್ತು ಪಿಎಸ್‌ಯು ಬ್ಯಾಂಕ್ ಹೊರತುಪಡಿಸಿ ಇತರ ಎಲ್ಲಾ ಸೂಚ್ಯಂಕವು, ನಿಫ್ಟಿ ಫಾರ್ಮಾ ಸೂಚ್ಯಂಕವು ಶೇಕಡಾ 4ಕ್ಕಿಂತಲೂ ಕಡಿಮೆಯಾಗಿದೆ. ಬಿಎಸ್‌ಇ ಮಿಡ್‌ಕ್ಯಾಪ್ ಮತ್ತು ಸ್ಮಾಲ್‌ಕ್ಯಾಪ್ ಸೂಚ್ಯಂಕಗಳು ಕೆಂಪು ಬಣ್ಣದಲ್ಲಿ ಕೊನೆಗೊಂಡಿವೆ.

ದೇಶೀಯ ಇಕ್ವಿಟಿ ಮಾರುಕಟ್ಟೆಯಲ್ಲಿ ಮಾರಾಟದ ಮಧ್ಯೆ ಭಾರತೀಯ ರೂಪಾಯಿ ಮೌಲ್ಯ ಪ್ರತಿ ಡಾಲರ್‌ಗೆ 74.46 ಕ್ಕೆ ತಲುಪಿದೆ. ಇದು ಹಿಂದಿನ 74.42 ರೂಪಾಯಿಗೆ ಹೋಲಿಸಿದರೆ ಪ್ರತಿ ಡಾಲರ್‌ಗೆ 74.36ಕ್ಕಿಂತ ಸ್ವಲ್ಪ ಹೆಚ್ಚಾಗಿದೆ ಮತ್ತು 74.35 ರಿಂದ 74.54 ರ ವ್ಯಾಪ್ತಿಯಲ್ಲಿ ವಹಿವಾಟು ನಡೆಸಿದೆ.

English summary

Sensex Down 273 Points: Nifty Ends Below 15750

Sensex was down 273.51 points or 0.52% at 52578.76, and the Nifty was down 78 points or 0.49% at 15746.50.
Story first published: Tuesday, July 27, 2021, 16:55 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X