ಭಾರತೀಯ ಷೇರುಪೇಟೆಯು ಗುರುವಾರ ಮತ್ತಷ್ಟು ಕುಸಿತಕ್ಕೆ ಸಾಕ್ಷಿಯಾಗಿದ್ದು, ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರುಪೇಟೆ ನಿಫ್ಟಿ ತಲಾ 1% ರಷ್ಟು ಇಳಿಕೆಗೊಂಡಿದೆ.
ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 485.82 ಪಾಯಿಂಟ್ಸ್ ಅಥವಾ ಶೇಕಡಾ 0.92ರಷ್ಟು ಇಳಿಕೆಗೊಂಡು 52568.94 ಪಾಯಿಂಟ್ಸ್‌ಗೆ ತಲುಪಿದೆ. ಎನ್‌ಎಸ್‌ಇ ಸೂಚ್ಯಂಕ ನಿಫ್ಟಿ 151.75 ಪಾಯಿಂಟ್ಸ್ ಅಥವಾ ಶೇಕಡಾ 0.96ರಷ್ಟು ಕುಸಿದು 15727.75 ಪಾಯಿಂಟ್ಸ್ ಮುಟ್ಟಿದೆ.
ದಿನದ ವಹಿವಾಟು ಅಂತ್ಯಕ್ಕೆ 1277 ಷೇರುಗಳು ಏರಿಕೆಗೊಂಡರೆ, 1648 ಷೇರುಗಳು ಕುಸಿದವು ಮತ್ತು 112 ಷೇರುಗಳ ಮೌಲ್ಯದಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ಎನ್‌ಎಸ್‌ಇನಲ್ಲಿ ಟಾಟಾ ಮೋಟಾರ್ಸ್, ಜೆಎಸ್‌ಡಬ್ಲ್ಯೂ ಸ್ಟೀಲ್, ಬಜಾಜ್ ಆಟೋ, ಹಿಂಡಾಲ್ಕೊ ಇಂಡಸ್ಟ್ರೀಸ್ ಮತ್ತು ಒಎನ್‌ಜಿಸಿ ನಿಫ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಟೆಕ್ ಮಹೀಂದ್ರಾ, ಎಸ್‌ಬಿಐ ಲೈಫ್ ಇನ್ಶುರೆನ್ಸ್, ಈಚರ್ ಮೋಟಾರ್ಸ್, ಇಂಡಸ್ಇಂಡ್ ಬ್ಯಾಂಕ್ ಮತ್ತು ಶ್ರೀ ಸಿಮೆಂಟ್ಸ್ ಹೆಚ್ಚು ಲಾಭ ಗಳಿಸಿದ ಷೇರುಗಳಾಗಿವೆ.
ಇಂದು ಬಹುತೇಕ ಎಲ್ಲಾ ವಲಯ ಸೂಚ್ಯಂಕಗಳು ಕೆಂಪು ಬಣ್ಣದಲ್ಲಿ ಕೊನೆಗೊಂಡಿವೆ. ಬಿಎಸ್‌ಇ ಮಿಡ್‌ಕ್ಯಾಪ್ ಸೂಚ್ಯಂಕವು ಶೇಕಡಾ 0.3 ರಷ್ಟು ಕುಸಿದಿದ್ದರೆ, ಸ್ಮಾಲ್‌ಕ್ಯಾಪ್ ಸಮವಾಗಿ ಮುಂದುವರಿದಿದೆ.
ಇನ್ನು ದೇಶೀಯ ಇಕ್ವಿಟಿ ಮಾರುಕಟ್ಟೆಯಲ್ಲಿ ಮಾರಾಟದ ಮಧ್ಯೆ ಭಾರತೀಯ ರೂಪಾಯಿ ಮೌಲ್ಯ 10 ಪೈಸೆ ಇಳಿಕೆಯಾಗಿ ಪ್ರತಿ ಡಾಲರ್‌ಗೆ 74.71 ಕ್ಕೆ ತಲುಪಿದೆ.


Click it and Unblock the Notifications