ಭಾರತೀಯ ಷೇರುಪೇಟೆಯು ವಾರದ ಸತತ ಗಳಿಕೆಯ ಬಳಿಕ ಶುಕ್ರವಾರ ಭಾರೀ ಕುಸಿತಕ್ಕೆ ಸಾಕ್ಷಿಯಾಗಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 983 ಪಾಯಿಂಟ್ಸ್ ಕುಸಿತಗೊಂಡಿದ್ದು, ರಾಷ್ಟ್ರೀಯ ಷೇರುಪೇಟೆ 263 ಪಾಯಿಂಟ್ಸ್ ಇಳಿಕೆಗೊಂಡಿದೆ.
ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 983.58 ಪಾಯಿಂಟ್ಸ್ ಅಥವಾ ಶೇಕಡಾ 1.98ರಷ್ಟು ಇಳಿಕೆಗೊಂಡು 48,782.36 ಪಾಯಿಂಟ್ಸ್ ತಲುಪಿದೆ. ಎನ್‌ಎಸ್‌ಇ ಸೂಚ್ಯಂಕ ನಿಫ್ಟಿ 263.80 ಪಾಯಿಂಟ್ಸ್ ಅಥವಾ ಶೇಕಡಾ 1.77ರಷ್ಟು ಕುಸಿದು 14,631.10 ಪಾಯಿಂಟ್ಸ್ ಮುಟ್ಟಿದೆ.

ದಿನದ ವಹಿವಾಟು ಅಂತ್ಯಕ್ಕೆ 1,332 ಷೇರುಗಳು ಏರಿಕೆಗೊಂಡರೆ, 1,554 ಷೇರುಗಳು ಕುಸಿದಿವೆ ಮತ್ತು 166 ಷೇರುಗಳ ಮೌಲ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
ಎಚ್‌ಡಿಎಫ್‌ಸಿ, ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಕೊಟಕ್ ಮಹೀಂದ್ರಾ ಬ್ಯಾಂಕ್ ಮತ್ತು ಏಷ್ಯನ್ ಪೇಂಟ್ಸ್ ನಿಫ್ಟಿಯಲ್ಲಿ ಹೆಚ್ಚು ನಷ್ಟ ಅನುಭವಿಸದ ಷೇರುಗಳಾಗಿವೆ. ಒಎನ್‌ಜಿಸಿ, ಕೋಲ್ ಇಂಡಿಯಾ, ಡಿವಿಸ್ ಲ್ಯಾಬ್ಸ್, ಗ್ರೇಸಿಮ್ ಮತ್ತು ಐಒಸಿ ಏರಿಕೆಗೊಂಡಿವೆ.
ಇನ್ನು ದೇಶೀಯ ಇಕ್ವಿಟಿ ಮಾರುಕಟ್ಟೆಯಲ್ಲಿ ಮಾರಾಟದ ಮಧ್ಯೆ ಭಾರತೀಯ ರೂಪಾಯಿ ಮೌಲ್ಯ ಪ್ರತಿ ಡಾಲರ್‌ಗೆ 74.07 ರೂಪಾಯಿಗೆ ತಲುಪಿದೆ.


Click it and Unblock the Notifications