ಭಾರತೀಯ ಷೇರುಪೇಟೆಯು ಶುಕ್ರವಾರ ಮತ್ತಷ್ಟು ಕುಸಿತಕ್ಕೆ ಸಾಕ್ಷಿಯಾಗಿದ್ದು, ಇಳಿಕೆಯ ಹಾದಿಯನ್ನೇ ಮುಂದುವರಿಸಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 182 ಪಾಯಿಂಟ್ಸ್ ಕುಸಿದರೆ, ನಿಫ್ಟಿ 15700 ಮಟ್ಟಕ್ಕಿಂತ ಕೆಳಗಿಳಿದಿದೆ.
ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 182.75 ಪಾಯಿಂಟ್ಸ್ ಅಥವಾ ಶೇಕಡಾ 0.35ರಷ್ಟು ಇಳಿಕೆಗೊಂಡು 52,386.19 ಪಾಯಿಂಟ್ಸ್ ತಲುಪಿದೆ. ಎನ್‌ಎಸ್‌ಇ ಸೂಚ್ಯಂಕ ನಿಫ್ಟಿ 38.10 ಪಾಯಿಂಟ್ಸ್ ಅಥವಾ ಶೇಕಡಾ 0.24 ಪಾಯಿಂಟ್ಸ್ ಕುಸಿದು 15,689.80 ಪಾಯಿಂಟ್ಸ್ ಮುಟ್ಟಿದೆ.

ದಿನದ ವಹಿವಾಟು ಅಂತ್ಯಕ್ಕೆ 1693 ಷೇರುಗಳು ಏರಿಕೆಗೊಂಡರೆ, 1252 ಷೇರುಗಳು ಕುಸಿದವು ಮತ್ತು 107 ಷೇರುಗಳ ಮೌಲ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
ಬಜಾಜಾ್ ಆಟೋ, ಟಿಸಿಎಸ್, ಹೆಚ್‌ಡಿಎಫ್‌ಸಿ ಬ್ಯಾಂಕ್, ವಿಪ್ರೋ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ನಿಫ್ಟಿಯಲ್ಲಿ ನಷ್ಟ ಅನುಭವಿಸಿದೆ. ಟಾಟಾ ಸ್ಟೀಲ್ , ಬಜಾಜ್ ಫಿನ್‌ಸರ್ವ್ , ಅದಾನಿ ಪೋರ್ಟ್ಸ್, ಭಾರ್ತಿ ಏರ್‌ಟೆಲ್ ಮತ್ತು ಜೆಎಸ್‌ಡಬ್ಲ್ಯೂ ಸ್ಟೀಲ್ ಹಚ್ಚು ಲಾಭಗೊಂಡಿವೆ.
ಲೋಹ ಮತ್ತು ರಿಯಾಲ್ಟಿ ಸೂಚ್ಯಂಕಗಳು ತಲಾ 2 ಪ್ರತಿಶತದಷ್ಟು ಏರಿಕೆಯಾದರೆ, ಆಟೋ, ಐಟಿ, ಇಂಧನ ಮತ್ತು ಬ್ಯಾಂಕ್ ಸೂಚ್ಯಂಕಗಳು ಕೆಂಪು ಬಣ್ಣದಲ್ಲಿ ಕೊನೆಗೊಂಡಿವೆ. ಬಿಎಸ್‌ಇ ಮಿಡ್‌ಕ್ಯಾಪ್ ಮತ್ತು ಸ್ಮಾಲ್‌ಕ್ಯಾಪ್ ಸೂಚ್ಯಂಕಗಳು ಶೇಕಡಾ 0.4 ರಿಂದ 0.6 ರಷ್ಟು ಏರಿಕೆಯಾಗಿದೆ.


Click it and Unblock the Notifications