ಶುಕ್ರವಾರ ವಹಿವಾಟಿನ ಆರಂಭದಲ್ಲಿ 500ಕ್ಕೂ ಹೆಚ್ಚು ಪಾಯಿಂಟ್ಸ್ ಕುಸಿದಿದ್ದ ಮುಂಬೈ ಷೇರುಪೇಟೆ ಸೆನ್ಸೆಕ್ಸ್ 600ಕ್ಕೂ ಅಧಿಕ ಪಾಯಿಂಟ್ಸ್ ಜಿಗಿತಗೊಂಡಿದೆ. ಇನ್ನು ದಿನದ ವಹಿವಾಟು ಅಂತ್ಯಕ್ಕೆ ರಾಷ್ಟ್ರೀಯ ಷೇರುಪೇಟೆ ನಿಫ್ಟಿ 186 ಪಾಯಿಂಟ್ಸ್ ಹೆಚ್ಚಳಗೊಂಡಿದೆ.
ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ ಶೇಕಡಾ 1.30ರಷ್ಟು ಅಥವಾ 641.72 ಪಾಯಿಂಟ್ಸ್ ಹೆಚ್ಚಳಗೊಂಡು 49,858.24 ಪಾಯಿಂಟ್ಸ್‌ಗೆ ತಲುಪಿದೆ. ಎನ್‌ಎಸ್‌ಇ ಸೂಚ್ಯಂಕ ನಿಫ್ಟಿ ಶೇಕಡಾ 1.28ರಷ್ಟು ಅಥವಾ 186.10 ಪಾಯಿಂಟ್ಸ್ ಏರಿಕೆಗೊಂಡು 14,744 ಪಾಯಿಂಟ್ಸ್‌ಗೆ ತಲುಪಿದೆ. ಇಂದು 1,418 ಷೇರುಗಳು ಕುಸಿದರೆ, 1,461 ಷೇರುಗಳು ಏರಿಕೆಗೊಂಡಿವೆ ಮತ್ತು 200 ಷೇರುಗಳ ಮೌಲ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಎನ್‌ಟಿಪಿಸಿ, ಎಚ್‌ಯುಎಲ್, ಜೆಎಸ್‌ಡಬ್ಲ್ಯೂ ಸ್ಟೀಲ್, ಪವರ್ ಗ್ರಿಡ್ ಕಾರ್ಪ್ ಮತ್ತು ಯುಪಿಎಲ್ ನಿಫ್ಟಿಯಲ್ಲಿ ಪ್ರಮುಖ ಲಾಭ ಗಳಿಸಿದ ಷೇರುಗಳಾದರೆ, ಎಲ್ ಅಂಡ್ ಟಿ, ಕೋಲ್ ಇಂಡಿಯಾ, ಟೆಕ್ ಮಹೀಂದ್ರಾ, ಬಜಾಜ್ ಆಟೋ ಮತ್ತು ಟೈಟಾನ್ ಕಂಪನಿಗಳು ಇಳಿಕೆ ಕಂಡಿವೆ.
ಇನ್ನು ದೇಶೀಯ ಇಕ್ವಿಟಿ ಮಾರುಕಟ್ಟೆಯಲ್ಲಿ ಖರೀದಿಯ ಮಧ್ಯೆ ಭಾರತೀಯ ರೂಪಾಯಿ ಪ್ರತಿ ಡಾಲರ್‌ಗೆ 72.51 ರೂ. ತಲುಪಿದೆ. ಇಂದು 72.46-72.58 ರ ವ್ಯಾಪ್ತಿಯಲ್ಲಿ ವಹಿವಾಟು ನಡೆಸಿತು.


Click it and Unblock the Notifications