ಭಾರತೀಯ ಷೇರುಪೇಟೆಯು ಶುಕ್ರವಾರ ಸಾಕಷ್ಟು ಏರಿಳಿತಗಳ ನಡುವೆ ಸಕಾರಾತ್ಮಕವಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 226 ಪಾಯಿಂಟ್ಸ್ ಏರಿಕೆಗೊಂಡಿದ್ದು, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 70 ಪಾಯಿಂಟ್ಸ್ ಹೆಚ್ಚಳಗೊಂಡಿದೆ.
ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 226.04 ಪಾಯಿಂಟ್ಸ್ ಅಥವಾ ಶೇಕಡಾ 0.43ರಷ್ಟು ಏರಿಕೆಗೊಂಡು 52925.04ರಷ್ಟು ತಲುಪಿದೆ. ಎನ್‌ಎಸ್‌ಇ ಸೂಚ್ಯಂಕ 70 ಪಾಯಿಂಟ್ಸ್ ಅಥವಾ ಶೇ. 0.44ರಷ್ಟು ಹೆಚ್ಚಾಗಿ 15860.40 ಪಾಯಿಂಟ್ಸ್ ಮುಟ್ಟಿದೆ.

ಟಾಟಾ ಸ್ಟೀಲ್, ಆಕ್ಸಿಸ್ ಬ್ಯಾಂಕ್, ಎಸ್‌ಬಿಐ, ಐಸಿಐಸಿಐ ಬ್ಯಾಂಕ್ ಮತ್ತು ಹಿಂಡಾಲ್ಕೊ ಇಂಡಸ್ಟ್ರೀಸ್ ನಿಫ್ಟಿಯಲ್ಲಿ ಪ್ರಮುಖ ಲಾಭ ಗಳಿಸಿದ ಷೇರುಗಳಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್, ಟೈಟಾನ್ ಕಂಪನಿ, ಎನ್‌ಟಿಪಿಸಿ, ಎಚ್‌ಯುಎಲ್ ಮತ್ತು ಏಷ್ಯನ್ ಪೇಂಟ್ಸ್ ಹೆಚ್ಚು ನಷ್ಟ ಅನುಭವಿಸಿವೆ.
ನಿಫ್ಟಿ ಬ್ಯಾಂಕ್, ಮೆಟಲ್ ಮತ್ತು ಪಿಎಸ್‌ಯು ಬ್ಯಾಂಕ್ ಸೂಚ್ಯಂಕಗಳು ಶೇಕಡಾ 1 ರಿಂದ 2.5ರಷ್ಟು ಏರಿಕೆಗೊಂಡರೆ, ಬಿಎಸ್‌ಇ ಮಿಡ್‌ಕ್ಯಾಪ್ ಸೂಚ್ಯಂಕವು ಶೇಕಡಾ 1ರಷ್ಟು ಮತ್ತು ಸ್ಮಾಲ್‌ಕ್ಯಾಪ್ ಸೂಚ್ಯಂಕವು ಶೇಕಡಾ 0.4ರಷ್ಟು ಏರಿಕೆಯಾಗಿದೆ.


Click it and Unblock the Notifications