ಕರ್ನಾಟಕ ಕಾಂಗ್ರೆಸ್ ಚುನಾವಣೆಗೂ ಮುನ್ನ ಪ್ರಮುಖವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ನಾವು ಅಧಿಕಾರಕ್ಕೆ ಬಂದರೆ ಜಾರಿ ಮಾಡಲಾಗುವುದು ಎಂದು ಹೇಳಿತ್ತು. ಅದರಂತೆಯೇ ಅಧಿಕಾರವನ್ನು ಪಡೆದ ಬಳಿಕ ಕಾಂಗ್ರೆಸ್ ಸರ್ಕಾರವು ಪ್ರಮುಖವಾಗಿ ಐದು ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಅನ್ನ ಭಾಗ್ಯ, ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಯುವ ನಿಧಿ ಅನ್ನು ಜಾರಿಗೆ ತರುತ್ತಿದೆ.
ಈ ಪೈಕಿ ಈಗಾಗಲೇ ಗೃಹ ಜ್ಯೋತಿ, ಅನ್ನ ಭಾಗ್ಯ, ಶಕ್ತಿ ಯೋಜನೆ, ಗೃಹ ಲಕ್ಷ್ಮೀ ಜಾರಿಗೆ ಬರುತ್ತಿದೆ. ಯುವನಿಧಿ ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಸರ್ಕಾರ ಹೇಳಿದೆ. ಈ ಐದು ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆಯನ್ನು ಮೊದಲು ಜಾರಿಗೊಳಿಸಲಾಗಿದೆ. ಆದರೆ ಈ ಯೋಜನೆ ಈಗ ಅಂತ್ಯವಾಗುತ್ತಿದೆ ಎಂದು ಸುದ್ದಿಗಳು ಹರಿದಾಡುತ್ತಿದೆ.

ಶಕ್ತಿ ಯೋಜನೆ ಅಂತ್ಯವಾಗುತ್ತಾ, ಸರ್ಕಾರ ಹೇಳುವುದೇನು?
ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಮಾಡಲು ಅವಕಾಶ ನೀಡುವ ಯೋಜನೆಯಾದ ಶಕ್ತಿ ಯೋಜನೆಯು ಜೂನ್ 11 ರಂದು ಜಾರಿಗೆ ಬಂದಿದೆ. ಅಂದರೆ ಈ ಯೋಜನೆ ಜಾರಿಗೆ ಬಂದು ಈಗಾಗಲೇ 2 ತಿಂಗಳು ಆಗಿದೆ. ಈ ಎರಡು ತಿಂಗಳಲ್ಲೇ ಯೋಜನೆಯನ್ನು ಕೊನೆ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಡುತ್ತಿದೆ.
ಈ ಬಗ್ಗೆ ಸರ್ಕಾರವು ಸ್ಪಷ್ಟಣೆಯನ್ನು ನೀಡಿದೆ. "ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ," ಎಂದು ಕೆಎಸ್‌ಆರ್‌ಟಿಸಿ ಟ್ವೀಟ್ ಮೂಲಕ ಮಾಹಿತಿ ನೀಡಿದೆ.
"ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ. ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯು ಎಂದಿನಂತೆ ಮುಂದುವರೆಯಲಿದೆ ಎಂಬುದನ್ನು ಸ್ಪಷ್ಟಪಡಿಸಲಾಗಿದೆ," ಎಂದು ಟ್ವೀಟ್‌ನಲ್ಲಿ ಸೇರಿಸಲಾಗಿದೆ.
ಇನ್ನು ಆಗಸ್ಟ್ 15 ರಂದು ಕೆಸ್‌ಆರ್‌ಟಿಸಿ ಅಥವಾ ಶಕ್ತಿ ಯೋಜನೆಗೆ ಒಳಪಡುವ ಬಸ್‌ಗಳಲ್ಲಿ ಒಟ್ಟಾಗಿ 99,37,598 ಮಂದಿ ಪ್ರಯಾಣ ಮಾಡಿದ್ದಾರೆ. ಈ ಪೈಕಿ 65,39,073 ಪ್ರಯಾಣಿಕರು ಮಹಿಳೆಯರು ಆಗಿದ್ದಾರೆ. ಮಹಿಳಾ ಪ್ರಯಾಣಿಕರ ಒಟ್ಟು ಟಿಕೆಟ್ ಮೌಲ್ಯವು, 14,15,99,271 ರೂಪಾಯಿ ಆಗಿದೆ.
ಈ ಯೋಜನೆ ಆರಂಭವಾದ ದಿನ ಅಂದರೆ ಜೂನ್ 11 ರಿಂದ ಆಗಸ್ಟ್ 15 ರವರೆಗೆ ಸರ್ಕಾರಿ ಬಸ್‌ಗಳಲ್ಲಿ ಒಟ್ಟಾಗಿ 72,74,30,051 ಮಂದಿ ಪ್ರಯಾಣವನ್ನು ಮಾಡಿದ್ದಾರೆ. ಈ ಪೈಕಿ 40,02,29,256 ಮಹಿಳಾ ಪ್ರಯಾಣಿಕರು ಆಗಿದ್ದಾರೆ. ಇನ್ನು ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ 930,34,82,844 ರೂಪಾಯಿ ಆಗಿದೆ. ಈವರೆಗೆ ಒಟ್ಟು 10,54,45,047 ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದು, 248,30,13,266 ರೂಪಾಯಿ ಮಹಿಳಾ ಪ್ರಯಾಣಿಕರ ಒಟ್ಟು ಟಿಕೆಟ್ ಮೌಲ್ಯವಾಗಿದೆ.
ಶಕ್ತಿ ಯೋಜನೆಯ ಪ್ರಮುಖ ಮಾಹಿತಿ
ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದುಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಈ ಯೋಜನೆಯಡಿಯಲ್ಲಿ ಮಹಿಳೆಯರು ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. 'ಶಕ್ತಿ' ಸ್ಮಾರ್ಟ್‌ಕಾರ್ಡ್ ವಿತರಣೆ ಮಾಡಲು ಇನ್ನೂ ಸರ್ಕಾರ ಆರಂಭಿಸಿಲ್ಲ. ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಅಥವಾ ಡ್ರೈವಿಂಗ್ ಲೈಸೆನ್ಸ್ ತೋರಿಸಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.


Click it and Unblock the Notifications