ಬೆಳಕಿನ ಹಬ್ಬ ದೀಪಾವಳಿಗೆ (Deepavali) ಇನ್ನೇನು ನಾಲ್ಕು ದಿನ ಮಾತ್ರ ಬಾಕಿ ಉಳಿದಿದೆ. ದೇಶದಾದ್ಯಂತ ಈಗಾಗಲೇ ದೀಪಾವಳಿ ಹಬ್ಬಕ್ಕೆ ತಯಾರಿ ನಡೆಸುತ್ತಿದ್ದಾರೆ. ಅದೆಷ್ಟೋ ಜನ ದೂರದ ಊರುಗಳಿಂದ ಈಗಾಗಲೇ ಊರಿಗೆ ಬರಲು ಪ್ಲಾನ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಭಾರತೀಯ ರೈಲ್ವೇ (Indian Railways) ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ.

ಹೌದು, ದೀಪಾವಳಿ ಸಂದರ್ಭದಲ್ಲಿ, ಭಾರತೀಯ ರೈಲ್ವೇಯು 15 ಪ್ರಮುಖ ರೈಲು ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್ ಮಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹಬ್ಬದ ದಿನಗಳಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸುವ ಉದ್ದೇಶದಿಂದ ಮತ್ತು ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ರೈಲ್ವೇ ಇಲಾಖೆ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗಿದೆ.
ಈ ನಿಲ್ದಾಣಗಳಲ್ಲಿ "ನೋ ಟಿಕೆಟ್ ಸೇಲ್"
ರೈಲ್ವೇ ಇಲಾಖೆಯ ಈ ನಿರ್ಧಾರವು ದೆಹಲಿ ಮತ್ತು ಮುಂಬೈ ನಿಲ್ದಾಣಗಳನ್ನು ಒಳಗೊಂಡಿದೆ. ರೈಲ್ವೇ ನಿಲ್ದಾಣಗಳಲ್ಲಿ ದೀಪಾವಳಿ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾಗಿರುತ್ತದೆ. ಆದ್ದರಿಂದ ಪ್ರಯಾಣಿಕರ ಸುರಕ್ಷಿತ ಸಂಚಾರ ಮತ್ತು ರೈಲು ಹತ್ತುವುದು-ಇಳಿಯುವುದನ್ನು ಸುಲಭಗೊಳಿಸುವುದೇ ಈ ಕ್ರಮದ ಮುಖ್ಯ ಉದ್ದೇಶವಾಗಿದೆ. ರೈಲ್ವೇ ಮಂಡಳಿಯ ಮಾರ್ಗಸೂಚಿಗಳ ಪ್ರಕಾರ, ಕೆಳಗೆ ಕೊಟ್ಟಿರುವ ನಿಲ್ದಾಣಗಳಲ್ಲಿ ಅಕ್ಟೋಬರ್ 28, 2025 ರವರೆಗೆ ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ಮಾರಾಟದ ಮೇಲೆ ನಿರ್ಬಂಧ ಜಾರಿಯಲ್ಲಿರುತ್ತದೆ.
ಆದರೆ, ಹಿರಿಯ ನಾಗರಿಕರು, ಅನಾರೋಗ್ಯ ಪೀಡಿತ ಪ್ರಯಾಣಿಕರು, ಮಕ್ಕಳು ಮತ್ತು ಸಹಾಯದ ಅಗತ್ಯವಿರುವ ಮಹಿಳಾ ಪ್ರಯಾಣಿಕರಿಗೆ ಪ್ಲಾಟ್‌ಫಾರ್ಮ್ ಟಿಕೆಟ್‌ಗಳನ್ನು ನೀಡಲಾಗುವುದು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ. ಈ ವಿನಾಯಿತಿಗಳು ತೀರಾ ಅಗತ್ಯವಿರುವವರಿಗೆ ಮಾತ್ರ ಅನ್ವಯವಾಗುತ್ತದೆ.
ಪ್ಲಾಟ್‌ಫಾರ್ಮ್ ಟಿಕೆಟ್ ಮಾರಾಟ ನಿಷೇಧಿಸಲಾಗಿರುವ 15 ನಿಲ್ದಾಣಗಳ ಪಟ್ಟಿ:
ನವದೆಹಲಿ ರೈಲು ನಿಲ್ದಾಣ, ದೆಹಲಿ ರೈಲು ನಿಲ್ದಾಣ, ಹಜರತ್ ನಿಜಾಮುದ್ದೀನ್, ಸೂರತ್, ಉಧನಾ, ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT), ಆನಂದ್ ವಿಹಾರ್ ಟರ್ಮಿನಲ್, ಗಾಜಿಯಾಬಾದ್, ಬಾಂದ್ರಾ ಟರ್ಮಿನಸ್, ವಾಪಿ, ದಾದರ್, ಲೋಕಮಾನ್ಯ ತಿಲಕ್ ಟರ್ಮಿನಸ್ (LTT), ಥಾಣೆ, ಕಲ್ಯಾಣ್ ಮತ್ತು ಪನ್ವೇಲ್.
CSMT, ದಾದರ್, LTT, ಥಾಣೆ, ಕಲ್ಯಾಣ್ ಮತ್ತು ಪನ್ವೇಲ್ ಸೇರಿದಂತೆ ಆರು ನಿಲ್ದಾಣಗಳಲ್ಲಿ ಇಂದಿನಿಂದ ಅಂದರೆ ಅಕ್ಟೋಬರ್ 16, 2025 ರಿಂದ ಪ್ಲಾಟ್‌ಫಾರ್ಮ್ ಟಿಕೆಟ್ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗುವುದು ಎನ್ನಲಾಗಿದೆ. ಆದ್ದರಿಂದ ಪ್ರಯಾಣಿಕರು ಪ್ರಯಾಣದ ಸಂದರ್ಭದಲ್ಲಿ ಈ ಅಪ್ಡೇಟ್ ಗಮನದಲ್ಲಿಟ್ಟುಕೊಂಡರೆ ಒಳ್ಳೆಯದು ಎಂದು ರೈಲ್ವೇ ಇಲಾಖೆ ಮನವಿ ಮಾಡಿದೆ.
ರೈಲಿನಲ್ಲಿ ತಪ್ಪಿಯೂ ಈ ವಸ್ತುಗಳನ್ನು ಕೊಂಡೊಯ್ಯಬೇಡಿ!
ಭಾರತೀಯ ರೈಲ್ವೆ ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಕೆಲವೊಂದು ಪ್ರಮುಖ ನಿಯಮಗಳನ್ನು ಇಲಾಖೆ ಕೈಗೊಂಡಿದೆ. ಪ್ರಯಾಣದ ಸಮಯದಲ್ಲಿ ರೈಲಿನಲ್ಲಿ ಕೆಲವು ವಸ್ತುಗಳನ್ನು ಕೊಂಡೊಯ್ಯಬಾರದು ಎಂದು ಖಡಕ್ ಸೂಚನೆ ನೀಡಿದೆ.
- ಪಟಾಕಿಗಳು - ದೀಪಾವಳಿ ಟೈಮಲ್ಲಿ ಮಾತ್ರವಲ್ಲ ಇತರ ಸಂದರ್ಭದಲ್ಲೂ ಪಟಾಕಿ ನಿಷೇಧ.
- ಸೀಮೆ ಎಣ್ಣೆ - ಸುಡುವ ವಸ್ತುವಾಗಿದ್ದರಿಂದ, ಚೂರು ಯಾಮಾರಿದ್ರೂ ದೊಡ್ಡ ಅಪಾಯಕ್ಕೆ ಕಾರಣವಾಗಬಹುದು.
- ಗ್ಯಾಸ್ ಸಿಲಿಂಡರ್‌ಗಳು - ಗ್ಯಾಸ್ ಲೀಕೇಜ್ ಮತ್ತು ಸ್ಫೋಟದಂತಹ ಕಾರಣದಿಂದ.
- ಸ್ಟೌವ್‌ಗಳು - ಬೆಂಕಿಯಂತಹ ವಸ್ತುಗಳನ್ನು ರೈಲಿನಲ್ಲಿ ಬಳಸುವಂತಿಲ್ಲ.
- ಮ್ಯಾಚ್‌ಬಾಕ್ಸ್‌ಗಳು ಮತ್ತು ಸಿಗರೇಟುಗಳು - ಇವುಗಳು ಕೂಡಾ ಬೆಂಕಿಯ ಅಪಾಯಗಳನ್ನು ಹೊಂದಿರುವುದರಿಂದ ರೈಲಿನಲ್ಲಿ ಸಂಚರಿಸುವಾಗ ಕೊಂಡೊಯ್ಯುವಂತಿಲ್ಲ.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಓಂ ಪವರ್ ಟ್ರಾನ್ಸ್ಮಿಷನ್ ಐಪಿಒ: ಹೂಡಿಕೆದಾರರ ಪಾಲಿಗೆ ಲಾಭದಾಯಕವೇ?



Click it and Unblock the Notifications