ದೇಶದ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಟಾಪ್ ಲಿಸ್ಟ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಹೌದು ನಮ್ಮ ಸಿಎಂ ಸ್ವಯಂ ಗಳಿಸಿದ ಆಸ್ತಿ ವಿವರ ಗಳ ಪಟ್ಟಿಯಲ್ಲಿ ಟಾಪ್ ಮೂರರ ಒಳಗೆ ಸಿದ್ದರಾಮಯ್ಯ ಅವರ ಹೆಸರು ಕಾಣಿಸಿಕೊಂಡಿದೆ. ದೇಶದ ಮುಖ್ಯಮಂತ್ರಿಗಳ ಆಸ್ತಿ ವಿವರವನ್ನು ಅಸೋಸಿಯೇಶನ್ ಆಫ್ ಡೆಮಾಕ್ರಾಟಿಕ್ ರಿಫಾಮ್ಸ್ (ಎಡಿಆರ್) ಬಿಡುಗಡೆ ಮಾಡಿದ್ದು ಅದರಲ್ಲಿ ಈ ವಿಚಾರ ಬಹಿರಂಗವಾಗಿದೆ.
ಟಾಪ್ 5 ಸ್ಥಾನ ಪಡೆದ ಸಿರಿವಂತ ಮುಖ್ಯಮಂತ್ರಿಗಳು
ಆಂಧ್ರಪ್ರದೇಶದ ಸಿಎಂ ಎನ್ ಚಂದ್ರಬಾಬು ನಾಯ್ಡು ಅವರು 931 ಕೋಟಿ ರೂ. ಆಸ್ತಿ ಹೊಂದಿದ್ದು, ದೇಶದ ಅತ್ಯಂತ ಸಿರಿವಂತ ಮುಖ್ಯಮಂತ್ರಿ ಎನಿಸಿಕೊಂಡಿದ್ದು ನಂ.1 ಸ್ಥಾನದಲ್ಲಿದ್ದಾರೆ. ಅರುಣಾಚಲ ಪ್ರದೇಶದ ಪೆಮಾ ಖಂಡ 332 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದು 2ನೇ ಸ್ಥಾನದಲ್ಲಿದ್ದಾರೆ.

ಇನ್ನು 76ರ ಹರೆಯದ ಸಿಎಂ ಸಿದ್ದರಾಮಯ್ಯ 51 ಕೋಟಿ ರೂ. ಆಸ್ತಿ ಹೊಂದಿದ್ದು ಧನಿಕ ಮುಖ್ಯಮಂತ್ರಿಗಳ ಲಿಸ್ಟ್ ನಲ್ಲಿ ಮೂರನೇ ಸ್ಥಾನಪಡೆದುಕೊಂಡಿದ್ದಾರೆ.
ಅತ್ಯಧಿಕ ಸಾಲ ಹೊಂದಿರುವ ಸಿಎಂಗಳ ಪಟ್ಟಿಯಲ್ಲೂಅರುಣಾಚಲ ಪ್ರದೇಶದ ಪೆಮಾ ಖಂಡ ಮೊದಲ ಸ್ಥಾನದಲ್ಲಿದ್ದು, ಒಟ್ಟು 180 ಕೋಟಿ ರೂ. ಸಾಲ ಹೊಂದಿದ್ದಾರೆ. ಸಿದ್ದರಾಮಯ್ಯ ಅವರು 23 ಕೋಟಿ ರೂ. ಸಾಲ ಹೊಂದಿದ್ದಾರೆ. ಚಂದ್ರಬಾಬು ನಾಯ್ಡು ಹತ್ತು ಕೋಟಿ. ಸಾಲವನ್ನು ಹೊಂದಿದ್ದಾರೆ. ಚುನಾವಣೆಯ ಸಮಯದಲ್ಲಿ ಸಲ್ಲಿಸಲಾದ ಅಫಿದವಿತ್‌ಗಳನ್ನು ಆಧಾರವಾಗಿಟ್ಟುಕೊಂಡು ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯನ್ನು ತಯಾರಿಸಲಾಗಿದೆ.
ಬಡ ಮುಖ್ಯಮಂತ್ರಿಗಳಿವರು.!
ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅತ್ಯಂತ ಬಡವ ಮುಖ್ಯಮಂತ್ರಿಯಾಗಿದ್ದು ಕೇವಲ ಕೇವಲ 15 ಲಕ್ಷ ರೂ. ಆಸ್ತಿ ಹೊಂದಿದ್ದಾರೆ. ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ 55 ಲಕ್ಷ ರೂ. ಆಸ್ತಿಯ ಒಡೆಯರಾಗಿದ್ದಾರೆ, ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು 1 ಕೋಟಿ ರೂ. ಆಸ್ತಿ ಹೊಂದಿ ಕೊನೆಯ 3 ಸ್ಥಾನದಲ್ಲಿದ್ದಾರೆ.
ಒಟ್ಟಾರೆಯಾಗಿ ನೋಡುವುದಾದರೆ ರಾಜ್ಯ ವಿಧಾನಸಭೆಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿ ಸಿಎಂ ಸರಾಸರಿ ಆಸ್ತಿ ನೋಡುವುದಾದರೆ 52.59 ಕೋಟಿ ರೂ. ಎಂದು ವರದಿ ತಿಳಿಸಿದೆ, ದೇಶದ 31ಮುಖ್ಯಮಂತ್ರಿಗಳ ಒಟ್ಟು ಆಸ್ತಿಯು 1630 ಕೋಟಿ ರೂ. ಆಗಿದೆ.
ಭಾರತದ ತಲಾ ನಿವ್ವಳ ರಾಷ್ಟ್ರೀಯ ಆದಾಯವು 2023-2024ರ ಆರ್ಥಿಕ ವರ್ಷಕ್ಕೆ ಸರಿಸುಮಾರು 1,85,854 ರೂ. ಎಂದು ಅಂದಾಜಿಸಲಾಗಿದೆ. ಒಬ್ಬ ಮುಖ್ಯಮಂತ್ರಿಯ ಸರಾಸರಿ ಆದಾಯವು 13,64,310 ರೂ.ಗಳಾಗಿದ್ದು , ಇದು ಭಾರತದ ನಾಗರಿಕರ ತಲಾಆದಾಯಕ್ಕಿಂ ತ 7.3 ಪಟ್ಟು ಹೆಚ್ಚು ಎಂದು ತನ್ನ ವರದಿಯಲ್ಲಿ ತಿಳಿಸಿದೆ.
ಸಿದ್ದರಾಮಯ್ಯ ವಿರುದ್ದ 13 ಕ್ರಿಮಿನಲ್ ಪ್ರಕರಣ
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಅತ್ಯಂತ ಹೆಚ್ಚು ಅಂದರೆ 89 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿರುದ್ಧ 47 ಕೇಸುಗಳು ದಾಖಲಾಗಿವೆ. ಇನ್ನು ಕರ್ನಾಟಕದ ಸಿಎಂ ಸಿದ್ದರಾಮಯ್ಯ ವಿರುದ್ದ 13 ಪ್ರಕರಣಗಳಿವೆ. ಆಂದ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ವಿರುದ್ದ 19 ಪ್ರಕರಣಗಳಿವೆ ಎಂದು ಸಮೀಕ್ಷೆಯಲ್ಲಿ ಗೊತ್ತಾಗಿದೆ.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?



Click it and Unblock the Notifications