ಬೆಂಗಳೂರು, ಅಕ್ಟೋಬರ್ 21: ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆಯಲ್ಲಿ 5675 ಹೊಸ ಬಸ್ ಖರೀದಿಯ ಗುರಿ ಹೊಂದಲಾಗಿದ್ದು, ಈ ಕುರಿತು ಶೀಘ್ರವೇ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.
ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್‌ಗಳ ಖರೀದಿಗೆ 500 ಕೋಟಿ ರೂ. ಒದಗಿಸಲಾಗಿದ್ದು, ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲು ಸೂಚಿಸಿದರು. ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಪ್ರಯಾಣಿಕರ ಸಂಖ್ಯೆ ಶೇ. 15 ರಷ್ಟು ಹೆಚ್ಚಾಗಿದೆ.

ಇದರೊಂದಿಗೆ ಹೆಚ್ಚುವರಿ ಶೆಡ್ಯೂಲ್ ಗಳನ್ನು ಸೇರಿಸಲು ಅನುವಾಗುವಂತೆ ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಅನುವಾಗುವಂತೆ ಬಸ್‌ಗಳನ್ನು ಸೇರ್ಪಡೆಗೊಳಿಸುವಂತೆ ತಿಳಿಸಿದರು.
ಸಾರಿಗೆ ಇಲಾಖೆಯ ರಾಜಸ್ವ ಗುರಿ ಸಂಗ್ರಹ ಹಾಗೂ ಸಾರಿಗೆ ನಿಗಮಗಳ ಹಣಕಾಸು ನಿರ್ವಹಣೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ವಾಹನ ತನಿಖೆಯಿಂದ 83 ಕೋಟಿ ರೂ. ದಂಡ ಸಂಗ್ರಹ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.
ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಜಿಯಾವುಲ್ಲಾ, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ. ಪ್ರಸಾದ್, ಎಲ್ಲ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಚುನಾವಣೆಗೆ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ ಕೂಡಾ ಒಂದಾಗಿದೆ. ಮೊದಲಿನಿಂದಲೂ ಈ ಯೋಜನೆಗೆ ಮಹಿಳಾ ವಲಯದಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಧಾರ್ಮಿಕ ಕೇಂದ್ರಗಳು ತುಂಬಿ ತುಳುಕಲಾರಂಭಿಸಿದ್ದವು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Vande Bharat: ಸುಂದರ ನೋಟ, ವೇಗದ ಸೇವೆ; ವಂದೇ ಭಾರತ್ ರೈಲಿನ ವಿಶೇಷ ಮಾರ್ಗಗಳಿವು!



Click it and Unblock the Notifications