ಚಿನ್ನದ ಬೆಲೆಯಂತೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಮಧ್ಯೆ ಬೆಳ್ಳಿ ಕೂಡಾ ಇದೇ ರೇಸ್‌ನಲ್ಲಿರುವಂತೆ ಕಾಣುತ್ತಿದೆ. ಭಾರತದಲ್ಲಿ ಬೆಳ್ಳಿ ಬೆಲೆಯಂತೂ (Silver Rate India) ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಕಮ್ಮಿ ಬೆಲೆಯಲ್ಲಿ ಸಿಗುತ್ತಿದ್ದ ಬೆಳ್ಳಿ ದರ ಇಂದು ದಿಢೀರ್ ಏರಿಕೆ ಕಂಡಿದೆ. ಹಾಗಿದ್ರೆ ಭಾರತದಲ್ಲಿ ಇಂದು ಬೆಳ್ಳಿ ದರ ಎಷ್ಟಿದೆ ಗೊತ್ತಾ?

ಜನವರಿ 27, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳಿಗ್ಗೆ 11:45 ರ ವೇಳೆಗೆ ಬೆಳ್ಳಿ ದರ 3,55,200 ಕ್ಕೆ ತಲುಪಿದೆ. ಅಂದರೆ ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಇಂದು 6.29% ಏರಿಕೆಯಾಗಿದೆ.
ಭಾರತದಲ್ಲಿ ಬೆಳ್ಳಿ ದರ:
ಭಾರತದಲ್ಲಿ ಬೆಳ್ಳಿ ದರದಲ್ಲಿ ಇಂದು ಭಾರೀ ಹೆಚ್ಚಳವಾಗಿದೆ. ಚಿನ್ನದ ಬೆಲೆ ಸ್ಥಿರವಾಗಿದ್ದರೂ, ಬೆಳ್ಳಿ ದರ ಮಾತ್ರ ಏರಿಕೆಯ ಹಾದಿ ಹಿಡಿದಿದೆ. 1 ಗ್ರಾಂ ಬೆಳ್ಳಿ ಬೆಲೆ ₹370 ರೂ. ಆಗಿದ್ದು, ನಿನ್ನೆ ₹360 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್ ₹10 ರೂ. ಹೆಚ್ಚಳವಾಗಿದೆ. ಅದೇ ರೀತಿ 8 ಗ್ರಾಂ ಬೆಳ್ಳಿ ದರ ಇಂದು ₹2,960 ರೂ. ಆಗಿದ್ದು, ನಿನ್ನೆ ₹2,880 ರೂ. ಇತ್ತು. ನಿನ್ನೆಗಿಂತ ಇಂದು ₹80 ರೂ. ಏರಿಕೆಯಾಗಿದೆ. 10 ಗ್ರಾಂ ಬೆಳ್ಳಿ ಬೆಲೆ ಇಂದು ₹3,700 ರೂ. ಆಗಿದ್ದು, ನಿನ್ನೆ ₹3,600 ರೂ. ಇತ್ತು. ನಿನ್ನೆಗಿಂತ ಇಂದು ₹100 ರೂ. ಹೆಚ್ಚಳವಾಗಿದೆ. 100 ಗ್ರಾಂ ಬೆಳ್ಳಿ ದರ ಇಂದು ₹37,000 ರೂ. ಆಗಿದ್ದು, ನಿನ್ನೆ ₹36,000 ರೂ. ಇತ್ತು. ನಿನ್ನೆಗಿಂತ ಇಂದು ₹1,000 ರೂ. ಹೆಚ್ಚಳವಾಗಿದೆ. ಇನ್ನು 1000 ಗ್ರಾಂ ಬೆಳ್ಳಿ ಬೆಲೆ ₹3,70,000 ರೂ. ಆಗಿದ್ದು, ನಿನ್ನೆ ₹3,60,000 ರೂ. ಆಗಿದೆ. ನಿನ್ನೆಗೆ ಹೋಲಿಸಿದ್ರೆ ಇಂದು ₹10,000 ರೂ. ಹೆಚ್ಚಳವಾಗಿದೆ.
ಭಾರತದಲ್ಲಿ ಚಿನ್ನದ ಬೆಲೆ ಹೇಗಿದೆ?
ಭಾರತದಲ್ಲಿ ಇಂದು ಚಿನ್ನದ ಬೆಲೆ ನಿಂತ ನೀರಿನಂತೆ ಸ್ಥಿರವಾಗಿದೆ. 24K ಚಿನ್ನದ ಬೆಲೆ ಇಂದು 16,195 ರೂ. ಆಗಿದೆ. ಇನ್ನು 22K ಚಿನ್ನದ ಬೆಲೆ 14,845 ರೂ., 18K ಚಿನ್ನದ ಬೆಲೆ 12,146 ರೂ. ಏರಿಕೆ ಕಂಡಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರ ಹೇಗಿದೆ?
ಬೆಂಗಳೂರಿನಲ್ಲಿ ಇಂದು ಬೆಳ್ಳಿ ದರ ಭಾರೀ ಏರಿಕೆ ಕಂಡಿದೆ. ಇಂದು 10 ಗ್ರಾಂ ಬೆಳ್ಳಿ ಬೆಲೆ ₹3,700 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹37,000 ರೂ., 1 ಕೆಜಿ ಬೆಳ್ಳಿ ದರ ₹3,70,000 ರೂ. ಆಗಿದೆ. ಪ್ರತೀ ಬೆಳ್ಳಿ ದರದಲ್ಲಿ 10 ರೂ. ಹೆಚ್ಚಳವಾಗಿದೆ.
ಚೆನ್ನೈ ಬೆಳ್ಳಿ ದರ:
ಸಾಮಾನ್ಯವಾಗಿ ಚೆನ್ನೈನಲ್ಲಿ ಬೆಳ್ಳಿ ದರ ಏರಿಕೆಯೇ ಇರುತ್ತದೆ. ಇಂದು 10 ಗ್ರಾಂ ಬೆಳ್ಳಿ ಬೆಲೆ ಇಂದು 3,870 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 38,700 ರೂ. ಇದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ದರ ಇಂದು 3,87,000 ರೂ. ಆಗಿದೆ.
ಮುಂಬೈ ಬೆಳ್ಳಿ ದರ ಎಷ್ಟಿದೆ?
ಮಾಯಾನಗರಿ ಮುಂಬೈನಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 3,700 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 37,000 ರೂ., 1 ಕೆಜಿ ಬೆಳ್ಳಿ ಬೆಲೆ 3,70,000 ರೂ. ಆಗಿದೆ.
ಹೈದರಾಬಾದ್ ಬೆಳ್ಳಿ ಬೆಲೆ:
ಹೈದರಾಬಾದ್‌ನಲ್ಲೂ ಚೆನ್ನೈನಂತೆ ಬೆಳ್ಳಿ ಬೆಲೆ ಹೆಚ್ಚಳವಾಗಿದೆ. 10 ಗ್ರಾಂ ಬೆಳ್ಳಿ ಬೆಲೆ ಇಂದು 3,870 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 38,700 ರೂ. ಆಗಿದೆ. ಅಲ್ಲದೇ 1 ಕೆಜಿ ಬೆಳ್ಳಿ ಬೆಲೆ ಇಂದು 3,87,000 ರೂ. ಆಗಿದೆ.
ದೆಹಲಿ ಬೆಳ್ಳಿ ದರ:
ರಾಜಧಾನಿ ದೆಹಲಿಯಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 3,700 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ಬೆಲೆ 37,000 ರೂ. ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ದರ ₹3,70,000 ರೂ. ಆಗಿದೆ.
MCX ಬೆಳ್ಳಿ ದರ ಹೇಗಿದೆ?
ಜನವರಿ 27, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳಿಗ್ಗೆ 11:45 ರ ವೇಳೆಗೆ ಬೆಳ್ಳಿ ದರ 3,55,200 ಕ್ಕೆ ತಲುಪಿದೆ. ಅಂದರೆ ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಇಂದು 6.29% ಏರಿಕೆಯಾಗಿದೆ.
ಸ್ಪಾಟ್ ಬೆಳ್ಳಿ ದರ:
ಜನವರಿ 27ರ GOLDPROCE.org ವರದಿ ಪ್ರಕಾರ, ಬೆಳಿಗ್ಗೆ 11:59 ರ ವೇಳೆಗೆ ಬೆಳ್ಳಿ ದರ ಪ್ರತೀ ಔನ್ಸ್‌ಗೆ $109.98 ಕ್ಕೆ ತಲುಪಿದೆ. ಹಿಂದಿನ ವಹಿವಾಟಿಗೆ ಹೋಲಿಕೆ ಮಾಡಿದ್ರೆ ಇಂದು 4.78% ಇಳಿಕೆಯಾಗಿದೆ.


Click it and Unblock the Notifications