ಜನವರಿ ತಿಂಗಳಲ್ಲಿ ದಾಖಲೆ ಬೆಲೆಯಲ್ಲಿ ಏರಿಕೆ ಕಂಡಿದ್ದ ಬೆಳ್ಳಿ ದರ (Silver Rate), ಫೆಬ್ರವರಿ ಬರುತ್ತಿದ್ದಂತೆ, ದಿಢೀರ್ ಕುಸಿತ ಕಂಡಿತು. ಕಳೆದೆರಡು ವಾರಗಳಿಂದ ಕುಸಿತದ ಹಾದಿಯಲ್ಲಿದ್ದ ಬೆಳ್ಳಿ ದರ, ಇದೀಗ ಮತ್ತೆ ಮೇಲೆದ್ದಿದೆ. ಭಾರತದಲ್ಲಿ ಬೆಳ್ಳಿ ದರ ಇಂದು ಭಾರೀ ಹೆಚ್ಚಳ ಕಂಡಿದೆ. ಹಾಗಿದ್ರೆ ಬೆಳ್ಳಿ ದರ ಇಂದು ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತದಲ್ಲಿ ಬೆಳ್ಳಿ ದರ:
ಭಾರತದಲ್ಲಿ ಬೆಳ್ಳಿ ಬೆಲೆ ಇಂದು ಭಾರೀ ಏರಿಕೆಯಾಗಿದೆ. 1 ಗ್ರಾಂ ಬೆಳ್ಳಿ ದರ ಇಂದು ₹270 ರೂ. ಆಗಿದ್ದು, ನಿನ್ನೆ ₹255 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ದಿಢೀರ್ ₹15 ರೂ. ಏರಿಕೆ ಕಂಡಿದೆ. ಇನ್ನು 8 ಗ್ರಾಂ ಬೆಳ್ಳಿ ಬೆಲೆ ಇಂದು ₹2,160 ರೂ. ಆಗಿದ್ದು, ನಿನ್ನೆ ₹2,040 ರೂ. ಇತ್ತು. ನಿನ್ನೆಗಿಂತ ಇಂದು ₹120 ರೂ. ಹೆಚ್ಚಳವಾಗಿದೆ. 10 ಗ್ರಾಂ ಬೆಳ್ಳಿ ಬೆಲೆ ಇಂದು ₹2,700 ರೂ. ಆಗಿದ್ದು, ನಿನ್ನೆ ₹2,550 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹150 ರೂ. ಹೆಚ್ಚಳವಾಗಿದೆ. 100 ಗ್ರಾಂ ಬೆಳ್ಳಿ ದರ ಇಂದು ₹27,000 ರೂ. ಆಗಿದ್ದು, ನಿನ್ನೆ ₹25,500 ರೂ. ಇತ್ತು. ಒಂದೇ ದಿನ ₹1,500 ರೂ. ಏರಿಕೆಯಾಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ದರ ₹2,70,000 ರೂ. ಆಗಿದ್ದು, ನಿನ್ನೆ ₹2,55,000 ರೂ. ಇತ್ತು. ನಿನ್ನೆಗಿಂತ ಇಂದು ಬರೋಬ್ಬರಿ ₹15,000 ರೂ. ಏರಿಕೆಯಾಗಿದೆ.
ಭಾರತದಲ್ಲಿ ಚಿನ್ನದ ದರ
ಭಾರತದಲ್ಲಿ ಇಂದು ಚಿನ್ನದ ಭರ್ಜರಿ ಇಳಿಕೆ ಕಂಡಿದೆ. 24K ಚಿನ್ನದ ಬೆಲೆ 15,649 ರೂ. ಆಗಿದೆ. ಇನ್ನು 22K ಚಿನ್ನದ ಬೆಲೆ 14,345 ರೂ., 18K ಚಿನ್ನದ ಬೆಲೆ 11,737 ರೂ. ತಲುಪಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರ ಎಷ್ಟಿದೆ?
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳ್ಳಿ ದರ ಭಾರೀ ಹೆಚ್ಚಳವಾಗಿದೆ. 10 ಗ್ರಾಂ ಬೆಳ್ಳಿ ಬೆಲೆ ಇಂದು 2,700 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹27,000 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ಬೆಲೆ ₹2,70,000 ರೂ. ಆಗಿದೆ.
ಹೈದರಾಬಾದ್ ಬೆಳ್ಳಿ ದರ:
ಹೈದರಾಬಾದ್‌ನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹2,700 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹27,000 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ಬೆಲೆ ಇಂದು 2,70,000 ರೂ. ಆಗಿದೆ.
ದೆಹಲಿ ಬೆಳ್ಳಿ ದರ:
ರಾಜಧಾನಿ ದೆಹಲಿಯಲ್ಲೂ ಇಂದು 10 ಗ್ರಾಂ ಬೆಳ್ಳಿ ದರ 2,700 ರೂ. ಆಗಿದೆ. ಇನ್ನು 100 ಗ್ರಾಂ ಬೆಳ್ಳಿ ಬೆಲೆ ₹27,000 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ದರ 2,70,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲಿಯೂ ಇಂದು 10 ಗ್ರಾಂ ಬೆಳ್ಳಿ ಬೆಲೆ 2,700 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹27,000 ರೂ. ಆಗಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ದರ ಇಂದು 2,70,000 ರೂ. ತಲುಪಿದೆ.
ಮುಂಬೈ ಬೆಳ್ಳಿ ದರ:
ಮುಂಬೈನಲ್ಲಿ 10 ಗ್ರಾಂ ಬೆಳ್ಳಿ ದರ ₹2,700 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹27,000 ರೂ., 1000 ಗ್ರಾಂ ಬೆಳ್ಳಿ ಬೆಲೆ ₹2,70,000 ರೂ. ಆಗಿದೆ.
MCX ಬೆಳ್ಳಿ ದರ ಹೇಗಿದೆ?
ಫೆಬ್ರವರಿ 19, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಗುರುವಾರ 11:00 ಗಂಟೆ ಸುಮಾರಿಗೆ 2,44,750 ಕ್ಕೆ ತಲುಪಿದೆ. ಹಿಂದಿನ ವಹಿವಾಟಿಗಿಂತ ಇಂದು 0.20% ಏರಿಕೆಯಲ್ಲಿ ವಹಿವಾಟು ನಡೆಸುತ್ತಿದೆ.
ಸ್ಪಾಟ್ ಬೆಳ್ಳಿ ದರ:
ಫೆಬ್ರವರಿ 19ರ GOLDPRICE.ORG ವರದಿ ಪ್ರಕಾರ, ಬೆಳ್ಳಿ ದರ ಗುರುವಾರ 11:00 ಗಂಟೆ ವೇಳೆಗೆ $77.94 ಡಾಲರ್ ತಲುಪಿದ್ದು, ಹಿಂದಿನ ವಹಿವಾಟಿಗೆ ಹೋಲಿಸಿದ್ರೆ 0.43% ಏರಿಕೆಯಾಗಿದೆ.


Click it and Unblock the Notifications