ಕಳೆದ ತಿಂಗಳು ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದ ಭಾರತದಲ್ಲಿ ಬೆಳ್ಳಿ ದರ, ಇದೀಗ ಫೆಬ್ರವರಿ ಆರಂಭದಿಂದಲೇ ಭಾರೀ ಕುಸಿತ ಕಂಡಿದೆ. ಅದರಲ್ಲೂ ಕೇಂದ್ರ ಬಜೆಟ್ ಮಂಡನೆ ನಂತರವಂತೂ ಷೇರು ಮಾರುಕಟ್ಟೆಯಿಂದ ಹಿಡಿದು, ಚಿನ್ನದ ಬೆಲೆವರೆಗೂ ಎಲ್ಲವೂ ಕುಸಿತ ಕಾಣುತ್ತಿದೆ. ಇಂದು (ಫೆ.06) ಬೆಳ್ಳಿ ದರ ಭಾರೀ ಇಳಿಕೆ ಕಂಡಿದೆ. ಹಾಗಿದ್ರೆ ದೇಶದ ಬೇರೆ ಬೇರೆ ಪ್ರದೇಶಗಳಲ್ಲಿ ಬೆಳ್ಳಿ ದರ ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತದಲ್ಲಿ ಬೆಳ್ಳಿ ದರ:
ಭಾರತದಲ್ಲಿ ಇತ್ತೀಚೆಗೆ ಚಿನ್ನ, ಬೆಳ್ಳಿ ದರಗಳು ಭಾರೀ ಇಳಿಕೆಯಾಗಿದೆ. ಪ್ರತೀ ಗ್ರಾಂ ಬೆಳ್ಳಿಯಲ್ಲಿ 25 ರೂ. ಇಂದು ಇಳಿಕೆಯಾಗಿದ್ದು, ಒಟ್ಟು ಬೆಲೆ ₹275 ರೂ. ತಲುಪಿದೆ. ಇನ್ನು 8 ಗ್ರಾಂ ಬೆಳ್ಳಿ ದರ ಇಂದು ₹2,200 ರೂ. ಆಗಿದ್ದು, ನಿನ್ನೆ ₹2,400 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್ ₹200 ರೂ. ಕಡಿಮೆಯಾಗಿದೆ. 10 ಗ್ರಾಂ ಬೆಳ್ಳಿ ಬೆಲೆ ₹2,750 ರೂ. ಆಗಿದ್ದು, ನಿನ್ನೆ ₹3,000 ರೂ. ಇತ್ತು. ಒಂದೇ ದಿನದಲ್ಲಿ ಬರೋಬ್ಬರಿ ₹250 ರೂ. ಕುಸಿದಿದೆ. 100 ಗ್ರಾಂ ಬೆಳ್ಳಿ ದರ ಇಂದು ₹27,500 ರೂ. ಆಗಿದ್ದು, ನಿನ್ನೆ ₹30,000 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ದಿಢೀರ್ ₹2,500 ರೂ. ಇಳಿಕೆಯಾಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ಬೆಲೆ ₹2,75,000 ರೂ. ಆಗಿದ್ದು, ನಿನ್ನೆ ₹3,00,000 ರೂ. ಇತ್ತು. ಒಂದೇ ದಿನ ಒಂದು ಕೆಜಿ ಬೆಳ್ಳಿ ದರ ಒಟ್ಟು ₹25,000 ರೂ. ಕುಸಿತ ಕಂಡಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರ
ಬೆಂಗಳೂರಿನಲ್ಲಿ ಶುಕ್ರವಾರ ಮನೆಗೆ ಲಕ್ಷ್ಮೀ ಬಂದಂತಾಗಿದೆ. ಏಕೆಂದರೆ ಇಂದು ಬೆಳ್ಳಿ ದರ ಭಾರೀ ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿ ದರ ಬೆಂಗಳೂರಿನಲ್ಲಿ ₹2,750 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹27,500 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ಬೆಲೆ ₹2,75,000 ರೂ. ಆಗಿದೆ.
ಹೈದರಾಬಾದ್ ಬೆಳ್ಳಿ ದರ:
ಹೈದರಾಬಾದ್‌ನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹2,800 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹28,000 ರೂ. ಆಗಿದೆ. ಅಲ್ಲದೇ 1 ಕೆಜಿ ಬೆಳ್ಳಿ ಬೆಲೆ ಇಂದು 2,80,000 ರೂ. ಆಗಿದೆ.
ದೆಹಲಿ ಬೆಳ್ಳಿ ದರ:
ದೆಹಲಿಯಲ್ಲಿ 10 ಗ್ರಾಂ ಬೆಳ್ಳಿ ದರ 2,750 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ಬೆಲೆ ₹27,500 ರೂ. ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ದರ ₹2,75,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ 2,800 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹28,000 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ದರ ಇಂದು 2,80,000 ರೂ. ತಲುಪಿದೆ. ಬೇರೆ ಪ್ರದೇಶಗಳಿಗೆ ಹೋಲಿಸಿದ್ರೆ ಚೆನ್ನೈನಲ್ಲಿ ಬೆಳ್ಳಿ ಬೆಲೆ 50 ರೂ. ಜಾಸ್ತಿಯಿದೆ.
ಮುಂಬೈ ಬೆಳ್ಳಿ ದರ:
ಮುಂಬೈನಲ್ಲಿ ಬೆಳ್ಳಿ ದರ ಭಾರೀ ಇಳಿಕೆ ಕಂಡಿದೆ. ಆ ಪ್ರಕಾರ ಇಂದು 10 ಗ್ರಾಂ ಬೆಳ್ಳಿ ದರ ₹2,750 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹27,500 ರೂ., 1 ಕೆಜಿ ಬೆಳ್ಳಿ ಬೆಲೆ 2,75,000 ರೂ. ಆಗಿದೆ.
MCX ಬೆಳ್ಳಿ ದರ ಎಷ್ಟಿದೆ?
ಫೆಬ್ರವರಿ 6, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಶುಕ್ರವಾರ, ಬೆಳಿಗ್ಗೆ 11:43ರ ಹೊತ್ತಿಗೆ ಬೆಳ್ಳಿ ದರ 2,40,750 ಕ್ಕೆ ತಲುಪಿದೆ. ಹಿಂದಿನ ವಹಿವಾಟಿಗಿಂತಲೂ ಇಂದು 1.36% ಕುಸಿತ ಕಂಡಿದೆ.
ಸ್ಪಾಟ್ ಬೆಳ್ಳಿ ದರ:
ಫೆಬ್ರವರಿ 6ರ GOLDPRICE.ORG ವರದಿ ಪ್ರಕಾರ, ಬೆಳ್ಳಿ ದರ ಶುಕ್ರವಾರ $74.3 ಡಾಲರ್ ತಲುಪಿದೆ. ಹಿಂದಿನ ವಹಿವಾಟಿಗಿಂತ ಇಂದು 4.00% ಕುಸಿತ ಕಂಡಿದೆ.


Click it and Unblock the Notifications