ಭಾರತದಲ್ಲಿ ಚಿನ್ನಕ್ಕೆ (Gold) ಎಷ್ಟು ಮಹತ್ವ ನೀಡಲಾಗುತ್ತದೆಯೋ, ಅಷ್ಟೇ ಬೆಳ್ಳಿಗೂ ನೀಡಲಾಗುತ್ತದೆ. ಇತ್ತೀಚೆಗಂತೂ ಬೆಳ್ಳಿ ದರ ದಿನೇ ದಿನೇ ಏರಿಕೆ ಕಾಣುತ್ತಲೇ ಇದೆ. ಜನವರಿ 19 ರಂದು ಮಾತ್ರ ಬೆಳ್ಳಿ ಬೆಲೆಯಲ್ಲಿ ಇತಿಹಾಸ ಸೃಷ್ಟಿಸಿದೆ. ಇಂದೂ ಕೂಡಾ ಭಾರತದಲ್ಲಿ ಬೆಳ್ಳಿ ಬೆಲೆ (India Silver Rate) ಭಾರೀ ಏರಿಕೆ ಕಂಡಿದೆ.

ಅತ್ತ ಭಾರತದ ವಿವಿಧ ರಾಜ್ಯಗಳಲ್ಲೂ ಇಂದು (ಜನವರಿ 20) ಬೆಳ್ಳಿ ದರ ಭಾರೀ ಹೆಚ್ಚಳವಾಗಿದೆ. ಬೆಂಗಳೂರು, ದೆಹಲಿ, ಹೈದರಾಬಾದ್, ಮುಂಬೈ ರಾಜ್ಯಗಳಲ್ಲಿ ಬೆಳ್ಳಿ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದು, ಗ್ರಾಹಕರಂತೂ ಶಾಕ್ ಆಗಿದ್ದಾರೆ. ಹಾಗಿದ್ರೆ ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟಿದೆ ಗೊತ್ತಾ?
ಜನವರಿ 20, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳಿಗ್ಗೆ 11:00 ಗಂಟೆಯ ವೇಳೆಗೆ ಬೆಳ್ಳಿ ದರ 3,15,513 ಕ್ಕೆ ತಲುಪಿದೆ. ಅಂದರೆ ಹಿಂದಿನ ವಹಿವಾಟಿಗಿಂತ ಇಂದು 1.79% ಹೆಚ್ಚಳ ಕಂಡಿದೆ.
ಭಾರತದಲ್ಲಿ ಬೆಳ್ಳಿ ದರ:
ಭಾರತದಲ್ಲಿ 1 ಗ್ರಾಂ ಬೆಳ್ಳಿ ಬೆಲೆ ಇಂದು ₹320 ರೂ. ಆಗಿದ್ದು, ನಿನ್ನೆ ₹305 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹15 ರೂ. ಏರಿಕೆ ಕಂಡಿದೆ. ಹಾಗೆಯೇ 8 ಗ್ರಾಂ ಬೆಳ್ಳಿ ಬೆಲೆ ₹2,560 ರೂ. ಆಗಿದ್ದು, ನಿನ್ನೆ ₹2,440 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹120 ರೂ. ಹೆಚ್ಚಳವಾಗಿದೆ. 10 ಗ್ರಾಂ ಬೆಳ್ಳಿ ದರ ₹3,200 ರೂ. ಆಗಿದ್ದು, ನಿನ್ನೆ ₹3,050 ರೂ. ಇತ್ತು. ನಿನ್ನೆಗಿಂತ ಇಂದು ₹150 ರೂ. ಹೆಚ್ಚಳ ಕಂಡಿದೆ. ಹಾಗೆಯೇ 100 ಗ್ರಾ ಬೆಳ್ಳಿ ಬೆಲೆ ₹32,000 ರೂ. ಆಗಿದ್ದು, ನಿನ್ನೆ ₹30,500 ರೂ. ಇತ್ತು. ಒಟ್ಟು ₹1,500 ರೂ. ಏರಿಕೆಯಾಗಿದೆ. 1000 ಗ್ರಾಂ ಬೆಳ್ಳಿ ದರ ₹3,20,000 ರೂ. ಆಗಿದೆ.
ಭಾರತದಲ್ಲಿ ಚಿನ್ನದ ಬೆಲೆ:
ನಿನ್ನೆಗಿಂತಲೂ ಇಂದು ಚಿನ್ನದ ಬೆಲೆ ಭಾರತದಲ್ಲಿ ಏರಿಕೆ ಕಂಡಿದೆ. ಅದೇ ಪ್ರಕಾರ 24K ಚಿನ್ನದ ಬೆಲೆ ಇಂದು 14,837 ರೂ. ಆಗಿದ್ದು, 22K ಚಿನ್ನದ ಬೆಲೆ 13,600 ರೂ., 18K ಚಿನ್ನದ ಬೆಲೆ 11,128 ರೂ. ಆಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರ:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಿ ಪ್ರಿಯರು ಹೆಚ್ಚು. ಅದೇ ರೀತಿ ಇಂದು ಬೆಳ್ಳಿ ದರ ಏರಿಕೆ ಕಂಡಿದೆ. ಇಂದು 10 ಗ್ರಾಂ ಬೆಳ್ಳಿ ಬೆಲೆ ₹3,200 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹32,000 ರೂ., 1 ಕೆಜಿ ಬೆಳ್ಳಿ ದರ ₹3,20,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ ಇಂದು 3,300 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 33,000 ರೂ. ಇದೆ. ಅದೇ ರೀತಿ 1 ಕೆಜಿ ಬೆಳ್ಳಿ ದರ ಇಂದು 3,30,000 ರೂ. ಆಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ, ಚೆನ್ನೈನಲ್ಲಿ ಬೆಳ್ಳಿ ದರ ಸಾಮಾನ್ಯವಾಗಿ ಹೆಚ್ಚೇ ಇರುತ್ತದೆ. ಅದೇ ರೀತಿ ಇಂದೂ ಕೂಡಾ ಮುಂದುವರೆದಿದೆ.
ಮುಂಬೈ ಬೆಳ್ಳಿ ದರ:
ಮುಂಬೈನಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 3,200 ರೂ. ತಲುಪಿದೆ. 100 ಗ್ರಾಂ ಬೆಳ್ಳಿ ಬೆಲೆ 32,000 ರೂ. ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ಬೆಲೆ 3,20,000 ರೂ. ಆಗಿದೆ. ನಿನ್ನೆಗೆ ಹೋಲಿಸಿದ್ರೆ ಇಂದು ಪ್ರತೀ ಗ್ರಾಂನಲ್ಲಿ 10 ರೂ. ಹೆಚ್ಚಳವಾಗಿದೆ.
ಹೈದರಾಬಾದ್ ಬೆಳ್ಳಿ ಬೆಲೆ:
ಚೆನ್ನೈನಂತೆ ಹೈದರಾಬಾದ್‌ನಲ್ಲೂ ಇಂದು 10 ಗ್ರಾಂ ಬೆಳ್ಳಿ ಬೆಲೆ ಇಂದು 3,300 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 33,000 ರೂ. ಆಗಿದೆ. ಅಲ್ಲದೇ 1 ಕೆಜಿ ಬೆಳ್ಳಿ ಬೆಲೆ ಇಂದು 3,30,000 ರೂ. ಆಗಿದೆ.
ದೆಹಲಿ ಬೆಳ್ಳಿ ದರ:
ರಾಜಧಾನಿ ದೆಹಲಿಯಲ್ಲೂ ಇಂದು ಬೆಳ್ಳಿ ದರ ಗಗನಕ್ಕೇರಿದೆ. ಅದೇ ರೀತಿ ಇಂದು 10 ಗ್ರಾಂ ಬೆಳ್ಳಿ ದರ 3,200 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ಬೆಲೆ 32,000 ರೂ. ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ದರ ₹3,20,000 ರೂ. ಆಗಿದೆ.
MCX ಬೆಳ್ಳಿ ದರ:
ಜನವರಿ 20, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳಿಗ್ಗೆ 11:00 ಗಂಟೆಯ ವೇಳೆಗೆ ಬೆಳ್ಳಿ ದರ 3,15,513 ಕ್ಕೆ ತಲುಪಿದೆ. ಅಂದರೆ ಹಿಂದಿನ ವಹಿವಾಟಿಗಿಂತ ಇಂದು 1.79% ಹೆಚ್ಚಳ ಕಂಡಿದೆ.
ಸ್ಪಾಟ್ ಬೆಳ್ಳಿ ದರ:
ಜನವರಿ 20ರ GOLDPROCE.org ವರದಿ ಪ್ರಕಾರ, ಬೆಳಿಗ್ಗೆ 11:15 ರ ವೇಳೆಗೆ ಬೆಳ್ಳಿ ದರ ಪ್ರತೀ ಔನ್ಸ್‌ಗೆ $94.54 ಕ್ಕೆ ತಲುಪಿದೆ. ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಬರೀ 0.03% ಏರಿಕೆಯಾಗಿದೆ.


Click it and Unblock the Notifications