ಭಾರತದಲ್ಲಿ ಚಿನ್ನದಷ್ಟೇ, ಬೆಳ್ಳಿಯ ಮೇಲೂ ವ್ಯಾಮೋಹ ಹೊಂದಿದ್ದಾರೆ. ಅದೇ ಕಾರಣದಿಂದ ಹೆಚ್ಚಿನವರು ದಿನನಿತ್ಯ ಚಿನ್ನ, ಬೆಳ್ಳಿ ಬೆಲೆ ಎಷ್ಟಾಗಿದೆ ಎಂದು ಚೆಕ್ ಮಾಡುತ್ತಲೇ ಇರುತ್ತದೆ. ಇನ್ನು ಚಿನ್ನ, ಬೆಳ್ಳಿಯಲ್ಲಿ ಸುರಕ್ಷಿತ ಆಸ್ತಿಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಆದ್ದರಿಂದ ಹೆಚ್ಚಿನವರು ಚಿನ್ನದ ಜೊತೆ ಜೊತೆಗೆ ಬೆಳ್ಳಿ ಮೇಲೂ ಹೂಡಿಕೆ ಮಾಡುತ್ತಾರೆ. ಆದರೆ ಇಂದು ಬೆಳ್ಳಿ ಪ್ರಿಯರಿಗೆ ಶಾಕಿಂಗ್ ಸುದ್ದಿಯೊಂದಿದೆ. ಚಿನ್ನದ ಬೆಲೆ ಇಳಿಕೆ ಕಂಡರೂ, ಭಾರತದಲ್ಲಿ ಬೆಳ್ಳಿಯ ದರ ಏರಿಕೆ (Silver Rate India) ಕಂಡಿದೆ. ಹಾಗಿದ್ರೆ ಇಂದು ಬೆಳ್ಳಿ ದರ ಎಷ್ಟಿದೆ ಗೊತ್ತಾ?

ಭಾರತದಲ್ಲಿ ಬೆಳ್ಳಿ ದರ ಎಷ್ಟಿದೆ?
ಭಾರತದಲ್ಲಿ ಇಂದು ಬೆಳ್ಳಿ ದರ ಭಾರೀ ಏರಿಕೆ ಕಂಡಿದೆ. ಚಿನ್ನದ ಬೆಲೆ ಇಳಿಕೆ ಕಂಡರೂ, ಬೆಳ್ಳಿ ದರ ಏರಿಕೆಯ ಹಾದಿ ಹಿಡಿದಿದೆ. 1 ಗ್ರಾಂ ಬೆಳ್ಳಿದರದಲ್ಲಿ 5 ರೂ. ಏರಿಕೆ ಕಂಡಿದ್ದು, ಒಟ್ಟು ಬೆಲೆ ₹295 ರೂ. ಏರಿಕೆ ಕಂಡಿದೆ. 8 ಗ್ರಾಂ ಬೆಳ್ಳಿ ದರ ಇಂದು ₹2,360 ರೂ. ಆಗಿದ್ದು, ನಿನ್ನೆ ₹2,320 ರೂ. ಇತ್ತು. ನಿನ್ನೆಗಿಂತ ಇಂದು ದಿಢೀರ್ ₹40 ರೂ. ಹೆಚ್ಚಳ ಕಂಡಿದೆ. 10 ಗ್ರಾಂ ಬೆಳ್ಳಿ ದರ ₹2,950 ರೂ. ಆಗಿದ್ದು, ನಿನ್ನ ₹2,900 ರೂ. ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹50 ರೂ. ಹೆಚ್ಚಳ ಕಂಡಿದೆ. 100 ಗ್ರಾಂ ಬೆಳ್ಳಿ ದರ ₹29,500 ರೂ. ಆಗಿದ್ದು, ನಿನ್ನೆ ₹29,000 ರೂ. ಇತ್ತು. ನಿನ್ನೆಗಿಂತ ಇಂದು ದಿಢೀರ್ ₹500 ರೂ. ಏರಿಕೆ ಕಂಡಿದೆ. 1000 ಗ್ರಾಂ ಬೆಳ್ಳಿ ಬೆಲೆ ₹2,95,000 ರೂ. ಆಗಿದ್ದು, ನಿನ್ನೆ ₹2,90,000 ರೂ. ಇತ್ತು. ನಿನ್ನೆಗಿಂತ ಇಂದು ₹5,000 ರೂ. ಏರಿಕೆಯಾಗಿದೆ.
ಭಾರತದಲ್ಲಿ ಚಿನ್ನದ ದರ:
ಭಾರತದಲ್ಲಿ ಇಂದು ಚಿನ್ನದ ಬೆಲೆ ಇಂದು ಭಾರೀ ಇಳಿಕೆಯಾಗಿದೆ. 24K ಚಿನ್ನದ ಬೆಲೆ 15,840 ರೂ. ಆಗಿದೆ. ಇನ್ನು 22K ಚಿನ್ನದ ಬೆಲೆ 14,520 ರೂ., 18K ಚಿನ್ನದ ಬೆಲೆ 11,880 ರೂ. ಆಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರ ಎಷ್ಟಿದೆ?
ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳ್ಳಿ ದರ ಏರಿಕೆಯಾಗಿದೆ. 10 ಗ್ರಾಂ ಬೆಳ್ಳಿ ಬೆಲೆ ಇಂದು 2,950 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹29,500 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ಬೆಲೆ ₹2,95,000 ರೂ. ಆಗಿದೆ.
ಹೈದರಾಬಾದ್ ಬೆಳ್ಳಿ ದರ:
ಹೈದರಾಬಾದ್‌ನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹3,000 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 30,000 ರೂ. ಆಗಿದೆ. ಅಲ್ಲದೇ 1000 ಗ್ರಾಂ ಬೆಳ್ಳಿ ಬೆಲೆ ಇಂದು 3,00,000 ರೂ. ಆಗಿದೆ.
ದೆಹಲಿಯಲ್ಲಿ ಬೆಳ್ಳಿ ದರ ಎಷ್ಟಿದೆ?
ರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಬೆಳ್ಳಿ ದರ 2,950 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ಬೆಲೆ 29,950 ರೂ. ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ದರ 2,95,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲಿಯೂ ಇಂದು ಬೆಳ್ಳಿ ದರ ಏರಿಕೆ ಕಂಡಿದೆ. 10 ಗ್ರಾಂ ಬೆಳ್ಳಿ ಬೆಲೆ 3,000 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹30,000 ರೂ. ಆಗಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ದರ ಇಂದು 3,00,000 ರೂ. ತಲುಪಿದೆ.
ಮುಂಬೈ ಬೆಳ್ಳಿ ದರ:
ಮುಂಬೈನಲ್ಲಿ 10 ಗ್ರಾಂ ಬೆಳ್ಳಿ ದರ ₹2,950 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹29,500 ರೂ., 1 ಕೆಜಿ ಬೆಳ್ಳಿ ಬೆಲೆ ₹2,95,000 ರೂ. ಆಗಿದೆ.
MCX ಬೆಳ್ಳಿ ದರ:
ಫೆಬ್ರವರಿ 12, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳಿಗ್ಗೆ 11:26 ರ ಸುಮಾರಿಗೆ ಬೆಳ್ಳಿ ದರ 2,62,222 ಕ್ಕೆ ತಲುಪಿದೆ. ಹಿಂದಿನ ವಹಿವಾಟಿಗೆ ಹೋಲಿಸಿದ್ರೆ 0.30% ಇಳಿಕೆ ಕಂಡಿದೆ.
ಸ್ಪಾಟ್ ಬೆಳ್ಳಿ ದರ:
ಫೆಬ್ರವರಿ 12ರ GOLDPRICE.ORG ವರದಿ ಪ್ರಕಾರ, ಬೆಳ್ಳಿ ದರ ಬುಧವಾರ, ಬೆಳಿಗ್ಗೆ 11:26 ಗಂಟೆಯ ಸುಮಾರಿಗೆ $83,93 ಡಾಲರ್ ತಲುಪಿದೆ. ಹಿಂದಿನ ವಹಿವಾಟಿಗೆ ಹೋಲಿಸಿದ್ರೆ 0.24% ಕುಸಿತ ಕಂಡಿದೆ.


Click it and Unblock the Notifications