ಮಧ್ಯಪ್ರಾಚ್ಯದ ಸಂಘರ್ಷ ದಿನೇ ದಿನೇ ತೀವ್ರವಾಗುತ್ತಿದೆ. ಉಭಯ ರಾಷ್ಟ್ರಗಳ ಜಗಳದಿಂದಾಗಿ ಜಾಗತಿಕ ಮಾರುಕಟ್ಟೆ ಮೇಲೆ ಭಾರೀ ಪರಿಣಾಮ ಬೀರುತ್ತಿದೆ. ಅತ್ತ ಚಿನ್ನ-ಬೆಳ್ಳಿ ದರ, ಕಚ್ಚಾ ತೈಲ, ಇಂಧನ ದರದಲ್ಲಿ ಭಾರೀ ಏರಿಳಿತಗಳಾಗುತ್ತಿದೆ. ಇದೀಗ ಇಂದು (ಮಾರ್ಚ್ 09) ಬೆಳ್ಳಿ ದರ ಭಾರೀ ಇಳಿಕೆ ಕಂಡಿದ್ದು, ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತದ ಬೆಳ್ಳಿ ದರ:
ಭಾರತದಲ್ಲಿ ಇಂದು ಚಿನ್ನದ ಬೆಲೆ ಭರ್ಜರಿ ಇಳಿಕೆ ಕಂಡಿದೆ. ಇದೀಗ ಬೆಳ್ಳಿಯೂ ಇಳಿಕೆಯ ಹಾದಿ ಹಿಡಿದಿದ್ದು, ಬೆಳ್ಳಿ ಪ್ರಿಯರಿಗೆ ಸಂತಸದ ಸುದ್ದಿ ಸಿಕ್ಕಂತಾಗಿದೆ. 1 ಗ್ರಾಂ ಬೆಳ್ಳಿ ದರ ಇಂದು ₹280 ರೂ. ಆಗಿದ್ದು, ನಿನ್ನೆ ₹285 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹5 ರೂ. ಇಳಿಕೆ ಕಂಡಿದೆ. ಇನ್ನು 8 ಗ್ರಾಂ ಬೆಳ್ಳಿ ದರ ₹2,240 ರೂ. ಆಗಿದ್ದು, ನಿನ್ನೆ ₹2,280 ರೂ. ಇತ್ತು. ನಿನ್ನೆಗಿಂತ ಇಂದು ₹40 ರೂ. ಕುಸಿತ ಕಂಡಿದೆ. ಅದೇ ರೀತಿ 10 ಗ್ರಾಂ ಬೆಳ್ಳಿ ಬೆಲೆ ₹2,800 ರೂ. ಆಗಿದ್ದು, ನಿನ್ನೆ ₹2,850 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹50 ರೂ. ವ್ಯತ್ಯಾಸ ಕಂಡಿದೆ. 100 ಗ್ರಾಂ ಬೆಳ್ಳಿ ಬೆಲೆ ₹28,000 ರೂ. ತಲುಪಿದ್ದು, ನಿನ್ನೆ ₹28,500 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ದಿಢೀರ್ ₹500 ರೂ. ಕುಸಿತ ಕಂಡಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ಬೆಲೆ ₹2,80,000 ರೂ. ಆಗಿದ್ದು, ನಿನ್ನೆ ₹2,85,000 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹5,000 ರೂ. ಕಮ್ಮಿಯಾಗಿದೆ.
ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ಭಾರತದಲ್ಲಿ ಇಂದು ಚಿನ್ನದ ದರವೂ ಭರ್ಜರಿ ಇಳಿಕೆ ಕಂಡಿದೆ. 24K ಚಿನ್ನದ ಬೆಲೆ 16,168 ರೂ., 22K ಚಿನ್ನದ ಬೆಲೆ 14,820 ರೂ., 18K ಚಿನ್ನದ ಬೆಲೆ 12,126 ರೂ. ಆಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ:
ಬೆಂಗಳೂರಿನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು 2,800 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹28,000 ರೂ., 1000 ಗ್ರಾಂ ಬೆಳ್ಳಿ ಬೆಲೆ 2,80,000 ರೂ. ಆಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಇಂದು ಬೆಳ್ಳಿ ದರ ಸ್ವಲ್ಪ ಇಳಿಕೆಯಾಗಿದೆ.
ಹೈದರಾಬಾದ್ ಬೆಳ್ಳಿ ದರ
ಚೆನ್ನೈನಂತೆ, ಹೈದರಾಬಾದ್‌ನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹2,900 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹29,000 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ಬೆಲೆ ಇಂದು 2,90,000 ರೂ. ಆಗಿದೆ.
ದೆಹಲಿಯಲ್ಲಿ ಬೆಳ್ಳಿ ದರ
ದೆಹಲಿಯಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 2,800 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹28,000 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ದರ 2,80,000 ರೂ. ಆಗಿದೆ. ನಿನ್ನೆಗಿಂತ ಇಂದು ಪ್ರತೀ ಗ್ರಾಂನಲ್ಲಿ 5 ರೂ. ಇಳಿಕೆಯಾಗಿದೆ..
ಚೆನ್ನೈ ಬೆಳ್ಳಿ ದರ
ಚೆನ್ನೈನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ 2,900 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹29,000 ರೂ. ಆಗಿದೆ. 1000 ಗ್ರಾಂ ಬೆಳ್ಳಿ ದರ ಇಂದು ₹2,90,000 ರೂ. ಆಗಿದೆ. ಸಮಾನ್ಯವಾಗಿ ಇತರ ರಾಜ್ಯಗಳಿಗೆ ಹೋಲಿಸಿದ್ರೆ ಚೆನ್ನೈನಲ್ಲಿ ಚಿನ್ನ-ಬೆಳ್ಳಿ ದರ ಸ್ವಲ್ಪ ಏರಿಕೆಯೇ ಇರುತ್ತದೆ.
ಮುಂಬೈ ಬೆಳ್ಳಿ ದರ
ಮುಂಬೈ ಜನರಿಗೆ ಗುಡ್ ನ್ಯೂಸ್, ಇಂದು ಬೆಳ್ಳಿ ದರ ಭಾರೀ ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿ ದರ 2,800 ರೂ. ತಲುಪಿದೆ. 100 ಗ್ರಾಂ ಬೆಳ್ಳಿ ಬೆಲೆ ₹28,000 ರೂ., 1000 ಗ್ರಾಂ ಬೆಳ್ಳಿ ಬೆಲೆ 2,80,000 ರೂ. ತಲುಪಿದೆ.
MCX ಬೆಳ್ಳಿ ದರ ಹೇಗಿದೆ?
ಮಾರ್ಚ್ 09, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಇಂದು 2,65,064 ರೂ. ತಲುಪಿದೆ. ಹಿಂದಿನ ವಹಿವಾಟಿಗೆ ಹೋಲಿಕೆ ಮಾಡಿದ್ರೆ ಇಂದು 1.25% ಇಳಿಕೆಯಾಗಿದೆ.
ಸ್ಪಾಟ್ ಬೆಳ್ಳಿ ದರ:
ಮಾರ್ಚ್ 09,2026 ರ GOLDPRICE.ORG ವರದಿ ಪ್ರಕಾರ, ಬೆಳ್ಳಿ ದರ ಇಂದು $84.18 ಡಾಲರ್ ತಲುಪಿದ್ದು, ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಇಂದು 0.44% ಇಳಿಕೆ ಕಂಡಿದೆ.


Click it and Unblock the Notifications