ಕಳೆದ ತಿಂಗಳು ಭಾರತದಲ್ಲಿ ಬೆಳ್ಳಿ ದರ (Silver Rate India) ದಾಖಲೆ ಬೆಲೆಯಲ್ಲಿ ಏರಿಕೆ ಕಂಡಿತ್ತು. ಚಿನ್ನದ ಬೆಲೆಯಲ್ಲೂ ಭಾರೀ ಏರಿಕೆ ಕಂಡಿತ್ತು. ಇದೀಗ ಚಿನ್ನ-ಬೆಳ್ಳಿ ದರ ಎರಡರಲ್ಲೂ ಭಾರೀ ಕುಸಿತ ಕಾಣುತ್ತಿದೆ. ದಿನ ಹೋದಂತೆ ಬೆಳ್ಳಿ ದರ ಪಾತಾಳಕ್ಕೆ ಇಳಿಯುತ್ತಿದ್ದು, ಇಂದು (ಫೆ.17) ಭಾರತದಲ್ಲಿ ಬೆಳ್ಳಿ ದರ ಮತ್ತೆ ಇಳಿಕೆ ಕಂಡಿದೆ. ಹಾಗಿದ್ರೆ ಇಂದು ಬೆಳ್ಳಿ ದರ ಎಷ್ಟು ಇಳಿಕೆಯಾಗಿದೆ? ಒಟ್ಟು ಬೆಲೆ ಎಷ್ಟಿದೆ? ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತದಲ್ಲಿ ಬೆಳ್ಳಿ ದರ:
ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿ ಇಂದು ಭಾರೀ ಇಳಿಕೆ ಕಂಡಿದೆ. 1 ಗ್ರಾಂ ಬೆಳ್ಳಿ ದರ ಇಂದು ₹260 ರೂ. ಆಗಿದ್ದು, ನಿನ್ನೆ ₹268 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್ ₹8 ರೂ. ಇಳಿಕೆ ಕಂಡಿದೆ. ಇನ್ನು 8 ಗ್ರಾಂ ಬೆಳ್ಳಿ ಬೆಲೆ ₹2,080 ರೂ. ಆಗಿದ್ದು, ನಿನ್ನೆ ₹2,144 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ದಿಢೀರ್ ₹64 ರೂ. ಕುಸಿತ ಕಂಡಿದೆ. 10 ಗ್ರಾಂ ಬೆಳ್ಳಿ ಬೆಲೆ ₹2,600 ರೂ. ಆಗಿದ್ದು, ನಿನ್ನೆ ₹2,680 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹80 ರೂ. ವ್ಯತ್ಯಾಸವಾಗಿದೆ. 100 ಗ್ರಾಂ ಬೆಳ್ಳಿ ದರದಲ್ಲಿ ₹26,000 ರೂ. ಆಗಿದ್ದು, ನಿನ್ನೆ ₹26,800 ರೂ. ಇತ್ತು. ನಿನ್ನೆಗಿಂತ ಇಂದು ದಿಢೀರ್ ₹800 ರೂ. ಕಮ್ಮಿಯಾಗಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ಬೆಲೆ ₹2,60,000 ರೂ. ಆಗಿದ್ದು, ನಿನ್ನೆ ₹2,68,000 ರೂ. ಇತ್ತು. ಒಂದೇ ದಿನದಲ್ಲಿ ₹8,000 ರೂ. ಇಳಿಕೆಯಾಗಿದೆ.
ಭಾರತದಲ್ಲಿ ಚಿನ್ನದ ದರ
ಭಾರತದಲ್ಲಿ ಇಂದು ಚಿನ್ನದ ಭರ್ಜರಿ ಇಳಿಕೆ ಕಂಡಿದೆ. 24K ಚಿನ್ನದ ಬೆಲೆ 15,491 ರೂ. ಆಗಿದೆ. ಇನ್ನು 22K ಚಿನ್ನದ ಬೆಲೆ 14,200 ರೂ., 18K ಚಿನ್ನದ ಬೆಲೆ 11,618 ರೂ. ತಲುಪಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರ ಎಷ್ಟಿದೆ?
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ ಇಂದು 2,600 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹26,000 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ಬೆಲೆ ₹2,60,000 ರೂ. ಆಗಿದೆ.
ಹೈದರಾಬಾದ್ ಬೆಳ್ಳಿ ದರ ಎಷ್ಟಿದೆ?
ಹೈದರಾಬಾದ್‌ನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹2,650 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹26,500 ರೂ. ಆಗಿದೆ. ಅಲ್ಲದೇ 1000 ಗ್ರಾಂ ಬೆಳ್ಳಿ ಬೆಲೆ ಇಂದು 2,65,000 ರೂ. ತಲುಪಿದೆ.
ದೆಹಲಿಯಲ್ಲಿ ಬೆಳ್ಳಿ ದರ
ರಾಜಧಾನಿ ದೆಹಲಿಯಲ್ಲೂ ಇಂದು 10 ಗ್ರಾಂ ಬೆಳ್ಳಿ ದರ 2,600 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ಬೆಲೆ 26,000 ರೂ. ಆಗಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ದರ 2,60,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲಿಯೂ ಇಂದು 10 ಗ್ರಾಂ ಬೆಳ್ಳಿ ಬೆಲೆ 2,650 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹26,500 ರೂ. ಆಗಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ದರ ಇಂದು 2,65,000 ರೂ. ತಲುಪಿದೆ.
ಮುಂಬೈ ಬೆಳ್ಳಿ ದರ ಎಷ್ಟಿದೆ?
ಮುಂಬೈನಲ್ಲಿ 10 ಗ್ರಾಂ ಬೆಳ್ಳಿ ದರ ₹2,600 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹26,000 ರೂ., 1 ಕೆಜಿ ಬೆಳ್ಳಿ ಬೆಲೆ ₹2,60,000 ರೂ. ಆಗಿದೆ.
MCX ಬೆಳ್ಳಿ ದರ ಹೇಗಿದೆ?
ಫೆಬ್ರವರಿ 17, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಮಂಗಳವಾರ 12:00 ಗಂಟೆಯ ವೇಳೆಗೆ 2,33,180 ಕ್ಕೆ ತಲುಪಿದೆ. ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಇಂದು 2.74% ಇಳಿಕೆಯಾಗಿದೆ.
ಸ್ಪಾಟ್ ಬೆಳ್ಳಿ ದರ:
ಫೆಬ್ರವರಿ 13ರ GOLDPRICE.ORG ವರದಿ ಪ್ರಕಾರ, ಬೆಳ್ಳಿ ದರ ಮಂಗಳವಾರ 12:00 ಗಂಟೆ ವೇಳೆಗೆ $74.31 ಡಾಲರ್ ತಲುಪಿದೆ. ಹಿಂದಿನ ವಹಿವಾಟಿಗೆ ಹೋಲಿಸಿದ್ರೆ 3.11% ಕುಸಿತ ಕಂಡಿದೆ.


Click it and Unblock the Notifications