ಅತ್ತ ಚಿನ್ನದ ಬೆಲೆ ಬುಧವಾರ (ಫೆ.18) ಸ್ಥಿರವಾಗಿದ್ದರೂ, ಇತ್ತ ಬೆಳ್ಳಿ ಬೆಲೆ ಭಾರೀ ಇಳಿಕೆ (Silver Rate Drops) ಕಂಡಿದೆ. ದಾಖಲೆ ಬೆಲೆಯಲ್ಲಿ ಏರಿಕೆ ಕಂಡಿದ್ದ ಬೆಳ್ಳಿ ದರ, ಈ ವಾರದ ಆರಂಭದಿಂದಲೂ ಭಾರೀ ಇಳಿಕೆಯಾಗುತ್ತಿದೆ. ಇದೀಗ ಇಂದೂ ಕೂಡಾ ಭಾರತದಲ್ಲಿ ಬೆಳ್ಳಿ ದರ ಭಾರೀ ಇಳಿಕೆಯಾಗಿದ್ದು, ಒಟ್ಟು ದರ ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತದಲ್ಲಿ ಬೆಳ್ಳಿ ದರ ಎಷ್ಟಿದೆ?
ಭಾರತದಲ್ಲಿ ಬೆಳ್ಳಿ ಬೆಲೆ ಇಂದು ಭರ್ಜರಿ ಕುಸಿತ ಕಂಡಿದೆ. 1 ಗ್ರಾಂ ಬೆಳ್ಳಿ ದರ ಇಂದು ₹255 ರೂ. ಆಗಿದ್ದು, ನಿನ್ನೆ ₹260 ರೂ. ಇತ್ತು. ನಿನ್ನೆಗಿಂತ ಇಂದು ಪ್ರತೀ ಗ್ರಾಂನಲ್ಲಿ ₹5 ರೂ. ಇಳಿಕೆಯಾಗಿದೆ. ಇನ್ನು 8 ಗ್ರಾಂ ಬೆಳ್ಳಿ ಬೆಲೆ ₹2,040 ರೂ. ಆಗಿದ್ದು, ನಿನ್ನೆ ₹2,080 ರೂ. ಇತ್ತು. ನಿನ್ನೆಗಿಂತ ಇಂದು ದಿಢೀರ್ ₹40 ರೂ. ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿ ಬೆಲೆ ₹2,550 ರೂ. ಆಗಿದ್ದು, ನಿನ್ನೆ ₹2,600 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹50 ರೂ. ಇಳಿಕೆಯಾಗಿದೆ. 100 ಗ್ರಾಂ ಬೆಳ್ಳಿ ದರದಲ್ಲಿ ₹25,500 ರೂ. ಆಗಿದ್ದು, ನಿನ್ನೆ ₹26,000 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ದಿಢೀರ್ ₹500 ರೂ. ಕುಸಿತ ಕಂಡಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ಬೆಲೆ ₹2,55,000 ರೂ. ಆಗಿದ್ದು, ನಿನ್ನೆ ₹2,60,000 ರೂ. ಇತ್ತು. ಒಂದೇ ದಿನದಲ್ಲಿ ₹5,000 ರೂ. ಕಮ್ಮಿಯಾಗಿದೆ.
ಭಾರತದಲ್ಲಿ ಚಿನ್ನದ ದರ
ಭಾರತದಲ್ಲಿ ಇಂದು ಚಿನ್ನದ ಭರ್ಜರಿ ಇಳಿಕೆ ಕಂಡಿದೆ. 24K ಚಿನ್ನದ ಬೆಲೆ 15,410 ರೂ. ಆಗಿದೆ. ಇನ್ನು 22K ಚಿನ್ನದ ಬೆಲೆ 14,135 ರೂ., 18K ಚಿನ್ನದ ಬೆಲೆ 11,565 ರೂ. ತಲುಪಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರ:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳ್ಳಿ ದರ ಕೊಂಚ ಮಟ್ಟಿಗೆ ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿ ಬೆಲೆ ಇಂದು 2,550 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹25,500 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ಬೆಲೆ ₹2,55,000 ರೂ. ಆಗಿದೆ.
ಹೈದರಾಬಾದ್ ಬೆಳ್ಳಿ ದರ ಎಷ್ಟಿದೆ?
ಹೈದರಾಬಾದ್‌ನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹2,600 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹26,000 ರೂ. ಆಗಿದೆ. ಅಲ್ಲದೇ 1000 ಗ್ರಾಂ ಬೆಳ್ಳಿ ಬೆಲೆ ಇಂದು 2,60,000 ರೂ. ಆಗಿದ್ದು, ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ.
ದೆಹಲಿಯಲ್ಲಿ ಬೆಳ್ಳಿ ದರ
ರಾಜಧಾನಿ ದೆಹಲಿಯಲ್ಲೂ ಇಂದು 10 ಗ್ರಾಂ ಬೆಳ್ಳಿ ದರ 2,550 ರೂ. ಆಗಿದೆ. ಇನ್ನು 100 ಗ್ರಾಂ ಬೆಳ್ಳಿ ಬೆಲೆ 25,500 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ದರ 2,55,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲಿಯೂ ಇಂದು 10 ಗ್ರಾಂ ಬೆಳ್ಳಿ ಬೆಲೆ 2,600 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹26,000 ರೂ. ಆಗಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ದರ ಇಂದು 2,60,000 ರೂ. ತಲುಪಿದೆ.
ಮುಂಬೈ ಬೆಳ್ಳಿ ದರ ಎಷ್ಟಿದೆ?
ಮುಂಬೈನಲ್ಲಿ 10 ಗ್ರಾಂ ಬೆಳ್ಳಿ ದರ ₹2,550 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹25,500 ರೂ., 1 ಕೆಜಿ ಬೆಳ್ಳಿ ಬೆಲೆ ₹2,55,000 ರೂ. ಆಗಿದೆ.
MCX ಬೆಳ್ಳಿ ದರ ಹೇಗಿದೆ?
ಫೆಬ್ರವರಿ 18, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಬುಧವಾರ 12:00 ಗಂಟೆಯ ವೇಳೆಗೆ 2,36,983 ಕ್ಕೆ ತಲುಪಿದೆ. ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಇಂದು 3.58% ಏರಿಕೆಯಲ್ಲಿ ವಹಿವಾಟು ನಡೆಸುತ್ತಿದೆ.
ಸ್ಪಾಟ್ ಬೆಳ್ಳಿ ದರ:
ಫೆಬ್ರವರಿ 18ರ GOLDPRICE.ORG ವರದಿ ಪ್ರಕಾರ, ಬೆಳ್ಳಿ ದರ ಬುಧವಾರ 12:00 ಗಂಟೆ ವೇಳೆಗೆ $75.55 ಡಾಲರ್ ತಲುಪಿದ್ದು, ಹಿಂದಿನ ವಹಿವಾಟಿಗೆ ಹೋಲಿಸಿದ್ರೆ 2.40% ಏರಿಕೆ ಕಂಡಿದೆ.


Click it and Unblock the Notifications