ಭಾರತದಲ್ಲಿ ಚಿನ್ನದಷ್ಟೇ (Gold India), ಬೆಳ್ಳಿ ಮೇಲೂ ಹೂಡಿಕೆ ಮಾಡುತ್ತಾರೆ. ಆದ್ರೆ ಇತ್ತೀಚೆಗೆ ದಾಖಲೆ ಮಟ್ಟದಲ್ಲಿ ಬೆಳ್ಳಿ ದರ ಏರಿಕೆ ಕಂಡ ಕಾರಣ, ಹೂಡಿಕೆದಾರರು ಸ್ವಲ್ಪ ಹಿಂದೆ ಸರಿದಿದ್ದರು. ಆದ್ರೆ ಇದೀಗ ಬೆಳ್ಳಿ ಮತ್ತೆ ಇಳಿಕೆಯ ಹಾದಿ ಹಿಡಿದಿದೆ. ಅತ್ತ ಮಧ್ಯಪ್ರಾಚ್ಯದ ಸಂಘರ್ಷ (Middle East War) ಅಮೂಲ್ಯ ಲೋಹಗಳ ಮೇಲೂ ತಟ್ಟಿದ್ದು, ಬೆಳ್ಳಿ ಬೆಲೆಯೂ ದಿನೇ ದಿನೇ ಕುಸಿಯುತ್ತಿದೆ. ಹಾಗಿದ್ರೆ ಇಂದು ಭಾರತದಲ್ಲಿ ಬೆಳ್ಳಿ ದರ (Silver Rate India) ಎಷ್ಟಿದೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ.

ಭಾರತದ ಬೆಳ್ಳಿ ದರ:
ಭಾರತದಲ್ಲಿ ಇಂದು ಬೆಳ್ಳಿ ದರದಲ್ಲಿ ಶೂನ್ಯ ಬದಲಾವಣೆಯಾಗಿದೆ. ಅತ್ತ ಚಿನ್ನದ ಬೆಲೆ ಇಳಿಕೆ ಕಂಡರೂ, ಇತ್ತ ಬೆಳ್ಳಿ ದರ ಮಾತ್ರ ಇಳಿಕೆಯೂ ಆಗಿಲ್ಲ, ಏರಿಕೆಯೂ ಆಗಿಲ್ಲ. 1 ಗ್ರಾಂ ಬೆಳ್ಳಿ ದರ ಇಂದು ₹285 ರೂ. ಆಗಿದ್ದು, ನಿನ್ನೆಯೂ ಅಷ್ಟೇ ಇತ್ತು. 8 ಗ್ರಾಂ ಬೆಳ್ಳಿ ಬೆಲೆ ₹2,280 ರೂ. ಆಗಿದ್ದು, ನಿನ್ನೆಗೆ ಹೋಲಿಸಿದ್ರೆ ಇಂದು ಶೂನ್ಯ ಬದಲಾವಣೆಯಾಗಿದೆ. ಅದೇ ರೀತಿ 10 ಗ್ರಾಂ ಬೆಳ್ಳಿ ಬೆಲೆ ₹2,850 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹28,500 ರೂ., 1000 ಗ್ರಾಂ ಬೆಳ್ಳಿ ದರ ₹2,85,000 ರೂ. ಆಗಿದೆ.
ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ಭಾರತದಲ್ಲಿ ಇಂದು ಚಿನ್ನದ ಬೆಲೆ ಮತ್ತೆ ಇಳಿಕೆಯಾಗಿದೆ. 24K ಚಿನ್ನದ ಬೆಲೆ 16,353 ರೂ., 22K ಚಿನ್ನದ ಬೆಲೆ 14,990 ರೂ., 18K ಚಿನ್ನದ ಬೆಲೆ 12,265 ರೂ. ತಲುಪಿದೆ.
ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ:
ಬೆಂಗಳೂರಿನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ ಇಂದು 2,850 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹28,500 ರೂ., 1000 ಗ್ರಾಂ ಬೆಳ್ಳಿ ಬೆಲೆ 2,85,000 ರೂ. ಆಗಿದೆ.
ಹೈದರಾಬಾದ್ ಬೆಳ್ಳಿ ದರ:
ಹೈದರಾಬಾದ್‌ನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹2,950 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹29,500 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ಬೆಲೆ ಇಂದು 2,95,000 ರೂ. ಆಗಿದೆ.
ದೆಹಲಿಯಲ್ಲಿ ಬೆಳ್ಳಿ ದರ:
ದೆಹಲಿಯಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 2,850 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹28,500 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ದರ 2,85,000 ರೂ. ತಲುಪಿದೆ.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ 2,950 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹29,500 ರೂ. ಆಗಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ದರ ಇಂದು ₹2,95,000 ರೂ. ಆಗಿದೆ. ನಿನ್ನೆಗೆ ಹೋಲಿಸಿದ್ರೆ ಇಂದು ಶೂನ್ಯ ಬದಲಾವಣೆಯಾಗಿದೆ.
ಮುಂಬೈ ಬೆಳ್ಳಿ ದರ:
ಮುಂಬೈನಲ್ಲಿ ಇಂದು ಬೆಳ್ಳಿ ದರ ನಿಂತ ನೀರಾಗಿಬಿಟ್ಟಿದೆ. 10 ಗ್ರಾಂ ಬೆಳ್ಳಿ ದರ 2,850 ರೂ. ತಲುಪಿದೆ. 100 ಗ್ರಾಂ ಬೆಳ್ಳಿ ಬೆಲೆ ₹28,500 ರೂ., 1000 ಗ್ರಾಂ ಬೆಳ್ಳಿ ಬೆಲೆ 2,85,000 ರೂ. ಆಗಿದೆ.
MCX ಬೆಳ್ಳಿ ದರ:
ಮಾರ್ಚ್ 05, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಮಧ್ಯಾಹ್ನ 12 ಗಂಟೆಯ ವೇಳೆಗೆ 2,68,325 ರೂ. ತಲುಪಿದೆ. ಹಿಂದಿನ ವಹಿವಾಟಿಗಳಿಗೆ ಹೋಲಿಸಿದ್ರೆ ಇಂದು 1.17% ಹೆಚ್ಚಳ ಕಂಡಿದೆ.
ಸ್ಪಾಟ್ ಬೆಳ್ಳಿ ದರ:
ಮಾರ್ಚ್ 05,2026 ರ GOLDPRICE.ORG ವರದಿ ಪ್ರಕಾರ, ಬೆಳ್ಳಿ ದರ ಇಂದು $84.31 ಡಾಲರ್ ತಲುಪಿದೆ. ಹಿಂದಿನ ವಹಿವಾಟಿಗಿಂತ ಇಂದು 1.43% ಹೆಚ್ಚಳ ಕಂಡಿದೆ.


Click it and Unblock the Notifications