ಚಿನ್ನದಂತೆ ಬೆಳ್ಳಿ ಕೂಡಾ ಇತ್ತೀಚೆಗೆ ಬೇಡಿಕೆಯ ಲೋಹವಾಗಿ ಬದಲಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಬೆಳ್ಳಿಯಂತೆ ಭಾರೀ ಏರಿಕೆ ಕಾಣುತ್ತಿದೆ. ಆದ್ರೆ ರಾಯರ ದಿನ ಗುರುವಾರದಂದು ಚಿನ್ನ ಮತ್ತು ಬೆಳ್ಳಿ ದರ ಭಾರೀ ಇಳಿಕೆ ಕಂಡಿದೆ. ಹಾಗಿದ್ರೆ ಭಾರತದಲ್ಲಿ ಬೆಳ್ಳಿ ಬೆಲೆ (Silver Rate India) ಎಷ್ಟು ಇಳಿಕೆಯಾಗಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜನವರಿ 22, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳಿಗ್ಗೆ 11:31 ರ ವೇಳೆಗೆ ಬೆಳ್ಳಿ ದರ 3,18,400 ಕ್ಕೆ ತಲುಪಿದೆ. ಅಂದರೆ ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಇಂದು 0.03% ನಷ್ಟು ಇಳಿಕೆಯಾಗಿದೆ. ಇಂದು ಭಾರೀ ಕುಸಿತವಾಗಿದೆ. ಹಾಗಿದ್ರೆ ಬೆಂಗಳೂರು ಸೇರಿ, ಭಾರತದ ಬೇರೆ ರಾಜ್ಯಗಳಲ್ಲಿ ಬೆಳ್ಳಿ ದರ ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.
ಭಾರತದಲ್ಲಿ ಬೆಳ್ಳಿ ದರ:
ಭಾರತದಲ್ಲಿ 1 ಗ್ರಾಂ ಬೆಳ್ಳಿ ಬೆಲೆ ಇಂದು ₹325 ರೂ. ಆಗಿದ್ದು, ನಿನ್ನೆ ₹330 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ದಿಢೀರ್ 5 ರೂ. ಇಳಿಕೆಯಾಗಿದೆ. ಅದೇ ರೀತಿ 8 ಗ್ರಾಂ ಬೆಳ್ಳಿ ದರ ಇಂದು ₹2,600 ರೂ. ಆಗಿದ್ದು, ನಿನ್ನೆ ₹2,640 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹40 ರೂ. ಇಳಿಕೆಯಾಗಿದೆ. 10 ಗ್ರಾ ಬೆಳ್ಳಿ ಬೆಲೆ ಇಂದು ₹3,250 ರೂ. ಆಗಿದ್ದು, ನಿನ್ನೆ ₹3,300 ರೂ. ಇತ್ತು. ಒಟ್ಟು ₹50 ರೂ. ಕಡಿಮೆಯಾಗಿದೆ. ಹಾಗೆಯೇ 100 ಗ್ರಾಂ ಬೆಳ್ಳಿ ದರ ₹32,500 ರೂ. ಆಗಿದ್ದು, ನಿನ್ನೆ ₹33,000 ರೂ. ಇತ್ತು. ನಿನ್ನೆಗಿಂತ ಇಂದು ₹500 ರೂ. ಇಳಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆ ₹3,25,000 ರೂ. ಆಗಿದ್ದು, ನಿನ್ನೆ ₹3,30,000 ರೂ. ಇತ್ತು. ನಿನ್ನೆಗಿಂತ ಇಂದು ₹5,000 ರೂ. ಇಳಿಕೆ ಕಂಡಿದೆ.
ಭಾರತದಲ್ಲಿ ಚಿನ್ನದ ಬೆಲೆ:
ಭಾರತದಲ್ಲಿ ಇಂದು ಚಿನ್ನದ ಬೆಲೆ ಕೂಡಾ ಭಾರೀ ಇಳಿಕೆಯಾಗಿದೆ. 24K ಚಿನ್ನದ ಬೆಲೆ ಇಂದು 15,431 ರೂ. ಆಗಿದ್ದು, ಪ್ರತೀ ಗ್ರಾಂನಲ್ಲಿ 229 ರೂ. ಇಳಿಕೆಯಾಗಿದೆ. ಇನ್ನು 22K ಚಿನ್ನದ ಬೆಲೆ 14,145 ರೂ., 18K ಚಿನ್ನದ ಬೆಲೆ 11,573 ರೂ. ಕುಸಿತವಾಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರ:
ಸಿಲಿಕಾನ್ ಸಿಟಿ ಬೆಂಗಳೂರಿನ ಬೆಳ್ಳಿ ಪ್ರಿಯರಿಗೆ ಇಂದು ಬಂಪರ್ ಸುದ್ದಿ ಅಂತಾನೇ ಹೇಳಬಹುದು. ಇಂದು 10 ಗ್ರಾಂ ಬೆಳ್ಳಿ ಬೆಲೆ ₹3,250 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹32,500 ರೂ., 1 ಕೆಜಿ ಬೆಳ್ಳಿ ದರ ₹3,25,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲಿ ಸಾಮಾನ್ಯವಾಗಿ ಬೆಳ್ಳಿ ದರ ಏರಿಕೆಯೇ ಇರುತ್ತದೆ. ಆದ್ರೆ ಇಂದು ಸ್ವಲ್ಪ ಇಳಿಕೆ ಕಂಡು 10 ಗ್ರಾಂ ಬೆಳ್ಳಿ ಬೆಲೆ ಇಂದು 3,400 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 34,000 ರೂ. ಇದೆ. ಅದೇ ರೀತಿ 1 ಕೆಜಿ ಬೆಳ್ಳಿ ದರ ಇಂದು 3,40,000 ರೂ. ಆಗಿದೆ.
ಮುಂಬೈ ಬೆಳ್ಳಿ ದರ:
ಮಾಯಾನಗರಿ ಮುಂಬೈನಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 3,250 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 32,500 ರೂ., 1 ಕೆಜಿ ಬೆಳ್ಳಿ ಬೆಲೆ 3,25,000 ರೂ. ಆಗಿದೆ.
ಹೈದರಾಬಾದ್ ಬೆಳ್ಳಿ ಬೆಲೆ:
ಚೆನ್ನೈನಂತೆ ಹೈದರಾಬಾದ್‌ನಲ್ಲೂ ಇಂದು ಬೆಳ್ಳಿ ದರ ಕೊಂಚ ಇಳಿಕೆ ಕಂಡಿದೆ. 10 ಗ್ರಾಂ ಬೆಳ್ಳಿ ಬೆಲೆ ಇಂದು 3,400 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 34,000 ರೂ. ಆಗಿದೆ. ಅಲ್ಲದೇ 1 ಕೆಜಿ ಬೆಳ್ಳಿ ಬೆಲೆ ಇಂದು 3,40,000 ರೂ. ಆಗಿದೆ.
ದೆಹಲಿ ಬೆಳ್ಳಿ ದರ:
ರಾಜಧಾನಿ ದೆಹಲಿಯಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 3,250 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ಬೆಲೆ 32,500 ರೂ. ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ದರ ₹3,25,000 ರೂ. ಆಗಿದೆ.
MCX ಬೆಳ್ಳಿ ದರ:
ಜನವರಿ 22, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳಿಗ್ಗೆ 11:31 ರ ವೇಳೆಗೆ ಬೆಳ್ಳಿ ದರ 3,18,400 ಕ್ಕೆ ತಲುಪಿದೆ. ಅಂದರೆ ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಇಂದು 0.03% ನಷ್ಟು ಇಳಿಕೆಯಾಗಿದೆ.
ಸ್ಪಾಟ್ ಬೆಳ್ಳಿ ದರ:
ಜನವರಿ 22ರ GOLDPROCE.org ವರದಿ ಪ್ರಕಾರ, ಬೆಳಿಗ್ಗೆ 11:40 ರ ವೇಳೆಗೆ ಬೆಳ್ಳಿ ದರ ಪ್ರತೀ ಔನ್ಸ್‌ಗೆ $93.8 ಕ್ಕೆ ತಲುಪಿದ್ದು, ಹಿಂದಿನ ವಹಿವಾಟಿಗೆ ಹೋಲಿಕೆ ಮಾಡಿದ್ರೆ ಇಂದು 1.08% ಕ್ಕೆ ತಲುಪಿದೆ.


Click it and Unblock the Notifications