ಅತ್ತ ಚಿನ್ನದ ಬೆಲೆ (Gold Rate) ಇಳಿಕೆಯಾಗುತ್ತಿದ್ದಂತೆ, ಇತ್ತ ಬೆಳ್ಳಿ ದರವೂ ಪಾತಾಳಕ್ಕಿಳಿದಿದೆ. ಅಂತೂ ಬೆಳ್ಳಿ ಪ್ರಿಯರಿಗೆ ಇಂದು ಗುಡ್ ನ್ಯೂಸ್ ಕೊಟ್ಟಂತಾಗಿದೆ. ಬೆಳ್ಳಿ ಬೆಲೆ ಇಂದೂ ಇಳಿಕೆಯಾಗಬಹುದು ಎಂದು ನಿರೀಕ್ಷೆಯಲ್ಲಿದ್ದವರಿಗೆ ಕೊನೆಗೂ ಸಿಹಿಸುದ್ದಿ ಸಿಕ್ಕಿದೆ. ಹಾಗಿದ್ರೆ ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತದ ಬೆಳ್ಳಿ ದರ:
ಭಾರತೀಯ ಬೆಳ್ಳಿ ಪ್ರಿಯರಿಗೆ ಬಂಪರ್ ಸುದ್ದಿ ಸಿಕ್ಕಂತಾಗಿದೆ. 1 ಗ್ರಾಂ ಬೆಳ್ಳಿ ಬೆಲೆ ಇಂದು ₹275 ರೂ. ಆಗಿದ್ದು, ನಿನ್ನೆ ₹279.90 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹4.90 ರೂ. ಇಳಿಕೆಯಾಗಿದೆ. ಅದೇ ರೀತಿ 8 ಗ್ರಾಂ ಬೆಳ್ಳಿ ದರ ₹2,200 ರೂ. ಆಗಿದ್ದು, ನಿನ್ನೆ ₹2,239.20 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹39.20 ರೂ. ಇಳಿಕೆಯಾಗಿದೆ. ಹಾಗೆಯೇ 10 ಗ್ರಾಂ ಬೆಳ್ಳಿ ಬೆಲೆ ₹2,750 ರೂ. ಆಗಿದ್ದು, ನಿನ್ನೆ ₹2,799 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್ ₹49 ರೂ. ಇಳಿಕೆ ಕಂಡಿದೆ. ಹಾಗೆಯೇ 100 ಗ್ರಾಂ ಬೆಳ್ಳಿ ಬೆಲೆ ₹27,500 ರೂ. ಆಗಿದ್ದು, ನಿನ್ನೆ ₹27,990 ರೂ. ಇತ್ತು. ನಿನ್ನೆಗಿಂತ ಇಂದು ₹490 ರೂ. ಇಳಿಕೆ ಕಂಡಿದೆ. ಇನ್ನು 1000 ಗ್ರಾಂ ಬೆಳ್ಳಿ ಬೆಲೆ ₹2,75,000 ರೂ. ಆಗಿದ್ದು, ನಿನ್ನೆ ₹2,79,900 ರೂ. ಇತ್ತು. ನಿನ್ನೆಗಿಂತ ಇಂದು ₹4,900 ರೂ. ಕುಸಿತ ಕಂಡಿದೆ.
ಭಾರತದಲ್ಲಿ ಚಿನ್ನದ ದರ:
ಭಾರತದಲ್ಲಿ ಇಂದು ಚಿನ್ನದ ಬೆಲೆ ಬಗ್ಗೆ ನೋಡುವುದಾದ್ರೆ, 24K ಚಿನ್ನದ ಬೆಲೆ 15,966 ರೂ., 22K ಚಿನ್ನದ ಬೆಲೆ 14,635 ರೂ., 18K ಚಿನ್ನದ ಬೆಲೆ 11,974 ರೂ. ತಲುಪಿದೆ.
ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಎಷ್ಟಿದೆ?
ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು 2,750 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 27,500 ರೂ., 1000 ಗ್ರಾಂ ಬೆಳ್ಳಿ ಬೆಲೆ 2,75,000 ರೂ. ಆಗಿದೆ.
ದೆಹಲಿಯಲ್ಲಿ ಬೆಳ್ಳಿ ದರ
ದೆಹಲಿಯಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 2,750 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹27,500 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ದರ 2,75,000 ರೂ. ಆಗಿದೆ.
ಹೈದರಾಬಾದ್ ಬೆಳ್ಳಿ ದರ:
ಹೈದರಾಬಾದ್‌ನಲ್ಲೂ ಬೆಳ್ಳಿ ಬೆಲೆ ಚೆನ್ನೈನಷ್ಟೇ ಮುಂದುವರೆದಿದೆ. 10 ಗ್ರಾಂ ಬೆಳ್ಳಿ ಬೆಲೆ ಇಂದು ₹2,900 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹29,000 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ಬೆಲೆ ಇಂದು 2,90,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ
ಚೆನ್ನೈನಲ್ಲಿ ಇಂದು ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿ ಬೆಲೆ 2,800 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹28,000 ರೂ. ಆಗಿದೆ. 1000 ಗ್ರಾಂ ಬೆಳ್ಳಿ ದರ ಇಂದು 2,80,000 ರೂ. ಆಗಿದೆ.
ಮುಂಬೈ ಬೆಳ್ಳಿ ದರ
ಮುಂಬೈನಲ್ಲೂ ಇಂದು 10 ಗ್ರಾಂ ಬೆಳ್ಳಿ ದರ 2,750 ರೂ. ತಲುಪಿದೆ. 100 ಗ್ರಾಂ ಬೆಳ್ಳಿ ಬೆಲೆ ₹27,500 ರೂ., 1000 ಗ್ರಾಂ ಬೆಳ್ಳಿ ಬೆಲೆ 2,75,000 ರೂ. ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ ಪ್ರತೀ ಗ್ರಾಂನಲ್ಲಿ ಸುಮಾರು 5 ರೂ.ನಷ್ಟು ಇಳಿಕೆಯಾಗಿದೆ.
MCX ಬೆಳ್ಳಿ ದರ:
ಮಾರ್ಚ್ 13, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಶುಕ್ರವಾರದ ಅಂತ್ಯದ ವೇಳೆಗೆ 2,59,279 ರೂ. ತಲುಪಿದ್ದು, ಹಿಂದಿನ ವಹಿವಾಟಿಗಿಂತ ಇಂದು 3.24% ಕುಸಿದಿದೆ.
ಸ್ಪಾಟ್ ಬೆಳ್ಳಿ ದರ:
ಮಾರ್ಚ್ 13, 2026 ರ GOLDPRICE.ORG ವರದಿ ಪ್ರಕಾರ, ಬೆಳ್ಳಿ ದರ ಶುಕ್ರವಾರದ ಅಂತ್ಯದಲ್ಲಿ 80.61 ಡಾಲರ್ ತಲುಪಿದೆ. ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಇಂದು 5.06% ಇಳಿಕೆಯಾಗಿದೆ.


Click it and Unblock the Notifications