ಇತ್ತೀಚೆಗೆ ಚಿನ್ನದಷ್ಟೇ ಹೂಡಿಕೆ, ಬೆಳ್ಳಿಯ ಮೇಲೂ ಹೂಡಿಕೆ ಮಾಡುತ್ತಿದ್ದಾರೆ. ಚಿನ್ನದ ದರವಂತೂ ಇಂದು ಭರ್ಜರಿ ಇಳಿಕೆ ಕಂಡಿದೆ. ಈ ಬೆನ್ನಲ್ಲೇ ಇತ್ತ ಬೆಳ್ಳಿ ದರವೂ ಭಾರೀ ಇಳಿಕೆಯಾಗಿದೆ. ದಿನ ಹೋದಂತೆ ಕುಸಿತ ಕಾಣುತ್ತಿರುವ ಬೆಳ್ಳಿ ದರ, ಇಂದು ಮತ್ತೆ ಇಳಿಕೆಯ (Silver Rate) ಹಾದಿ ಹಿಡಿದಿದೆ. ಹಾಗಿದ್ರೆ ಇಂದು (ಫೆ. 16) ಭಾರತದಲ್ಲಿ ಬೆಳ್ಳಿ ದರ ಎಷ್ಟಿದೆ ಗೊತ್ತಾ? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತದಲ್ಲಿ ಬೆಳ್ಳಿ ದರ:
ಭಾರತದಲ್ಲಿ ಇಂದು ಬೆಳ್ಳಿ ದರ ಭಾರೀ ಇಳಿಕೆ ಕಂಡಿದೆ. ಇಂದು 1 ಗ್ರಾಂ ಬೆಳ್ಳಿ ದರ ₹268 ರೂ. ಆಗಿದ್ದು, ನಿನ್ನೆ ₹275 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಪ್ರತೀ ಗ್ರಾಂ ಬೆಳ್ಳಿಯಲ್ಲಿ ₹7 ರೂ. ಇಳಿಕೆ ಕಂಡಿದೆ. ಇನ್ನು 8 ಗ್ರಾಂ ಬೆಳ್ಳಿ ದರ ₹2,144 ರೂ. ಆಗಿದ್ದು, ನಿನ್ನೆ ₹2,200 ರೂ. ಇತ್ತು. ನಿನ್ನೆಗಿಂತ ಇಂದು ದಿಢೀರ್ ₹56 ರೂ. ಕುಸಿತ ಕಂಡಿದೆ. 10 ಗ್ರಾಂ ಬೆಳ್ಳಿ ಬೆಲೆ ₹2,680 ರೂ. ಆಗಿದ್ದು, ನಿನ್ನೆ ₹2,750 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ದಿಢೀರ್ ₹70 ರೂ. ಇಳಿಕೆಯಾಗಿದೆ. 100 ಗ್ರಾಂ ಬೆಳ್ಳಿ ದರ ಇಂದು ₹26,800 ರೂ. ಆಗಿದ್ದು, ನಿನ್ನೆ ₹27,500 ರೂ. ಇತ್ತು. ನಿನ್ನೆಗಿಂತ ಇಂದು ಒಂದೇ ದಿನ ₹700 ರೂ. ಕಮ್ಮಿಯಾಗಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ಬೆಲೆ ₹2,68,000 ರೂ. ಆಗಿದ್ದು, ನಿನ್ನೆ ₹2,75,000 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹7,000 ರೂ. ಇಳಿಕೆಯಾಗಿದೆ.
ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ಭಾರತದಲ್ಲಿ ಇಂದು ಚಿನ್ನದ ಬೆಲೆಯೂ ಇಳಿಕೆ ಕಂಡಿದೆ. 24K ಚಿನ್ನದ ಬೆಲೆ 15,664 ರೂ. ಆಗಿದೆ. ಇನ್ನು 22K ಚಿನ್ನದ ಬೆಲೆ 14,340 ರೂ., 18K ಚಿನ್ನದ ಬೆಲೆ 11,733 ರೂ. ಆಗಿದೆ.
ಬೆಂಗಳೂರಿ ಬೆಳ್ಳಿ ದರ:
ಸಿಲಿಕಾನ್ ಸಿಟಿ ಬೆಂಗಳೂರಿನವರಿಗೆ ಇಂದು ಬಂಪರ್ ಸುದ್ದಿಯಿದೆ. ಏಕೆಂದರೆ ಬೆಂಗಳೂರಿನಲ್ಲಿ ಇಂದು ಬೆಳ್ಳಿ ದರ ಭಾರೀ ಇಳಿಕೆ ಕಂಡಿದೆ. 10 ಗ್ರಾಂ ಬೆಳ್ಳಿ ಬೆಲೆ ಇಂದು 2,680 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹26,800 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ಬೆಲೆ ₹2,68,000 ರೂ. ಆಗಿದೆ.
ಹೈದರಾಬಾದ್ ಬೆಳ್ಳಿ ದರ:
ಹೈದರಾಬಾದ್‌ನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹2,800 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹28,000 ರೂ. ಆಗಿದೆ. ಅಲ್ಲದೇ 1000 ಗ್ರಾಂ ಬೆಳ್ಳಿ ಬೆಲೆ ಇಂದು 2,80,000 ರೂ. ತಲುಪಿದೆ.
ದೆಹಲಿ ಬೆಳ್ಳಿ ದರ:
ರಾಜಧಾನಿ ದೆಹಲಿಯಲ್ಲೂ ಇಂದು ಬೆಳ್ಳಿ ದರ ಕುಸಿತ ಕಂಡಿದೆ. 10 ಗ್ರಾಂ ಬೆಳ್ಳಿ ದರ 2,680 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ಬೆಲೆ 26,680 ರೂ. ಆಗಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ದರ 2,68,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ ಎಷ್ಟಿದೆ?
ಚೆನ್ನೈನಲ್ಲಿಯೂ ಇಂದು ಬೆಳ್ಳಿ ದರ ಏರಿಕೆ ಕಂಡಿದೆ. 10 ಗ್ರಾಂ ಬೆಳ್ಳಿ ಬೆಲೆ 2,800 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹28,000 ರೂ. ಆಗಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ದರ ಇಂದು 2,80,000 ರೂ. ತಲುಪಿದೆ.
ಮುಂಬೈ ಬೆಳ್ಳಿ ದರ:
ಮುಂಬೈನಲ್ಲಿ 10 ಗ್ರಾಂ ಬೆಳ್ಳಿ ದರ ₹2,680 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹26,800 ರೂ., 1 ಕೆಜಿ ಬೆಳ್ಳಿ ಬೆಲೆ ₹2,68,000 ರೂ. ಆಗಿದೆ.
MCX ಬೆಳ್ಳಿ ದರ ಹೇಗಿದೆ?
ಫೆಬ್ರವರಿ 13, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಸೋಮವಾರ ಬೆಳಿಗ್ಗೆ 11:16 ರ ಹೊತ್ತಿಗೆ 2,37,811 ಕ್ಕೆ ತಲುಪಿದೆ. ಹಿಂದಿನ ವಹಿವಾಟಿಗಿಂತಲೂ ಇಂದು 2.75% ಇಳಿಕೆಯಾಗಿದೆ.
ಸ್ಪಾಟ್ ಬೆಳ್ಳಿ ದರ:
ಫೆಬ್ರವರಿ 13ರ GOLDPRICE.ORG ವರದಿ ಪ್ರಕಾರ, ಬೆಳ್ಳಿ ದರ ಸೋಮವಾರ ಬೆಳಿಗ್ಗೆ 11:16ರ ವೇಳೆಗೆ $75,64 ಡಾಲರ್ ತಲುಪಿದೆ. ಹಿಂದಿನ ವಹಿವಾಟಿಗೆ ಹೋಲಿಸಿದ್ರೆ 2.29% ತಲುಪಿದೆ.


Click it and Unblock the Notifications