ಭಾರತದಲ್ಲಿ ಚಿನ್ನದ ಬೆಲೆ (Gold Rate India) ಇಳಿಕೆಯಾಗುತ್ತಿದ್ದಂತೆ, ಇತ್ತ ಬೆಳ್ಳಿ ಬೆಲೆಯೂ ಭಾರೀ ಕುಸಿತ ಕಂಡಿದೆ. ಭಾರತದಲ್ಲಿ ಬೆಳ್ಳಿ ದರ (Silver Rates) ಕಳೆದೆರಡು ದಿನಗಳಿಂದ ಭಾರೀ ಇಳಿಕೆಯ ಹಾದಿಯಲ್ಲಿದೆ. ಆದರೆ ನಿನ್ನೆಗೆ ಹೋಲಿಸಿದ್ರೆ ಇಂದು ಬೆಳ್ಳಿ ದರಲ್ಲಿ ಅಷ್ಟೇನು ಇಳಿಕೆಯಾಗಿಲ್ಲ. ಹಾಗಿದ್ರೆ ಇಂದು ಭಾರತದಲ್ಲಿ ಇಂದು ಬೆಳ್ಳಿ ದರ ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತದ ಬೆಳ್ಳಿ ದರ:
ಭಾರತದಲ್ಲಿ ಇಂದು ಬೆಳ್ಳಿ ದರ ಪೈಸೆಯಷ್ಟು ಇಳಿಕೆ ಕಂಡಿದೆ. ಅಂದರೆ 1 ಗ್ರಾಂ ಬೆಳ್ಳಿ ದರ ₹279.90 ರೂ. ಆಗಿದ್ದು, ನಿನ್ನೆ ₹280 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹0.10 ಪೈಸೆ ರೂ. ಇಳಿಕೆಯಾಗಿದೆ. 8 ಗ್ರಾಂ ಬೆಳ್ಳಿ ಬೆಲೆ ₹2,239.20 ರೂ. ಆಗಿದ್ದು, ನಿನ್ನೆ ₹2,240 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹0.80 ರೂ. ಕುಸಿತ ಕಂಡಿದೆ. ಇನ್ನು 10 ಗ್ರಾಂ ಬೆಳ್ಳಿ ದರ ಇಂದು ₹2,799 ರೂ. ತಲುಪಿದ್ದು, ನಿನ್ನೆ ₹2,800 ರೂ. ಇತ್ತು. ನಿನ್ನೆಗಿಂತ ಇಂದು ಕೇವಲ ₹1 ರೂ. ಇಳಿಕೆ ಕಂಡಿದೆ. ಅದೇ ರೀತಿ 100 ಗ್ರಾಂ ಬೆಳ್ಳಿ ಬೆಲೆ ₹27,990 ರೂ. ಆಗಿದ್ದು, ನಿನ್ನೆ ₹28,000 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹10 ರೂ. ಕುಸಿತ ಕಂಡಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ದರ ₹2,79,900 ರೂ. ಆಗಿದ್ದು, ನಿನ್ನೆ ₹2,80,000 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹100 ರೂ. ಕುಸಿತ ಕಂಡಿದೆ.
ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ಭಾರತದಲ್ಲಿ ಇಂದು ಚಿನ್ನದ ಬೆಲೆಯೂ ಇಳಿಕೆ ಕಂಡಿದೆ. 24K ಚಿನ್ನದ ಬೆಲೆ 16,124 ರೂ., 22K ಚಿನ್ನದ ಬೆಲೆ 14,780 ರೂ., 18K ಚಿನ್ನದ ಬೆಲೆ 12,093 ರೂ. ತಲುಪಿದೆ.
ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು 2,800 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 28,000 ರೂ., 1000 ಗ್ರಾಂ ಬೆಳ್ಳಿ ಬೆಲೆ 2,80,000 ರೂ. ಆಗಿದೆ.
ದೆಹಲಿಯಲ್ಲಿ ಬೆಳ್ಳಿ ದರ
ದೆಹಲಿಯಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 2,800 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹28,000 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ದರ 2,80,000 ರೂ. ಆಗಿದೆ. ನಿನ್ನೆಗೆ ಹೋಲಿಸಿದ್ರೆ ಇಂದು ಕೊಂಚ ಇಳಿಕೆ ಕಂಡಿದೆ. ನಿನ್ನೆಯಷ್ಟೇ ಬೆಲೆ ಮುಂದುವರೆದಿದೆ.
ಹೈದರಾಬಾದ್ ಬೆಳ್ಳಿ ದರ:
ಹೈದರಾಬಾದ್‌ನಲ್ಲೂ ಬೆಳ್ಳಿ ಬೆಲೆ ಚೆನ್ನೈನಷ್ಟೇ ಮುಂದುವರೆದಿದೆ. 10 ಗ್ರಾಂ ಬೆಳ್ಳಿ ಬೆಲೆ ಇಂದು ₹2,900 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹29,000 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ಬೆಲೆ ಇಂದು 2,90,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ
ಚೆನ್ನೈನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ 2,900 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹29,000 ರೂ. ಆಗಿದೆ. 1000 ಗ್ರಾಂ ಬೆಳ್ಳಿ ದರ ಇಂದು 2,90,000 ರೂ. ಆಗಿದೆ. ನಿನ್ನೆ ಬೆಳಿಗ್ಗೆ ಇದ್ದ ಬೆಲೆಯನ್ನೇ ಇಂದು ಕಾಯ್ದುಕೊಂಡಿದೆ.
ಮುಂಬೈ ಬೆಳ್ಳಿ ದರ
ಮಾಯಾನಗರಿ ಮುಂಬೈನಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 2,799 ರೂ. ತಲುಪಿದೆ. 100 ಗ್ರಾಂ ಬೆಳ್ಳಿ ಬೆಲೆ ₹27,990 ರೂ., 1000 ಗ್ರಾಂ ಬೆಳ್ಳಿ ಬೆಲೆ 2,79,900 ರೂ. ಆಗಿದೆ. ನಿನ್ನೆಗೆ ಹೋಲಿಸಿದ್ರೆ ಪ್ರತೀ ಗ್ರಾಂನಲ್ಲಿ 10 ಪೈಸೆಯಷ್ಟು ಇಳಿಕೆ ಕಂಡುಬಂದಿದೆ.
MCX ಬೆಳ್ಳಿ ದರ:
ಮಾರ್ಚ್ 13, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಇಂದು 2,62.977 ರೂ. ತಲುಪಿದ್ದು, ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಇಂದು 1.86% ಇಳಿಕೆಯಾಗಿದೆ.
ಸ್ಪಾಟ್ ಬೆಳ್ಳಿ ದರ:
ಮಾರ್ಚ್ 13, 2026 ರ GOLDPRICE.ORG ವರದಿ ಪ್ರಕಾರ, ಬೆಳ್ಳಿ ದರ ಇಂದು $82.63 ಡಾಲರ್ ತಲುಪಿದೆ. ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಇಂದು 2.79% ಇಳಿಕೆಯಾಗಿದೆ.


Click it and Unblock the Notifications