ಬಂಗಾರದಂತೆ ಬೆಳ್ಳಿಯ ಬೇಡಿಕೆ ಕೂಡಾ ದೇಶದಲ್ಲಿ ಹೆಚ್ಚಾಗುತ್ತಿದೆ. ಅದೇ ಕಾರಣದಿಂದ ಬೆಳ್ಳಿ ದರ ಕೂಡಾ ಏರಿಕೆ ಕಾಣುತ್ತಿದೆ. ಅದರಲ್ಲೂ 2025ರಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ದಾಖಲೆ ಬೆಲೆಯಲ್ಲಿ ಏರಿಕೆ ಕಂಡಿದೆ. ಆದರೆ ಬಹಳ ದಿನಗಳ ನಂತರ ಇಂದು (ಡಿ.30) ಬೆಳ್ಳಿ ದರದಲ್ಲಿ (Silver Rate India) ಭಾರೀ ಇಳಿಕೆಯಾಗಿದೆ. ಹಾಗಿದ್ರೆ ಇಂದು ದೇಶದಲ್ಲಿ ಬೆಳ್ಳಿ ದರ ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಇನ್ನು ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ಫ್ಯೂಚರ್‌ಗಳು ಇಂದು ಪ್ರತೀ ಕೆಜಿಗೆ 2.36 ಲಕ್ಷ ರೂ. ತಲುಪಿತು. ಹಾಗಿದ್ರೆ ಇಂದು ಬೆಂಗಳೂರು, ದೆಹಲಿ, ಮುಂಬೈ, ಚೆನ್ನೈ, ಹೈದರಾಬಾದ್, ಪುಣೆ ಮತ್ತು ಇತರೆ ಭಾರತೀಯ ನಗರಗಳಲ್ಲಿ ಬೆಳ್ಳಿ ದರ ಹೇಗಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಭಾರತದಲ್ಲಿ ಬೆಳ್ಳಿ ದರ:
ನಿನ್ನೆಯಷ್ಟೇ ಭಾರತದಲ್ಲಿ ಬೆಳ್ಳಿ ದರ ಭಾರೀ ಇಳಿಕೆ ಕಂಡಿತ್ತು. ಆದ್ರೆ ಇಂದೂ ಅದಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಬೆಳ್ಳಿ ಬೆಲೆ ಇಳಿಕೆಯಾಗಿದೆ. ಇಂದು ಭಾರತದಲ್ಲಿ ಪ್ರತೀ ಗ್ರಾಂ ಬೆಳ್ಳಿ ಬೆಲೆಯಲ್ಲಿ 18 ರೂ. ಇಳಿಕೆ ಕಂಡಿದೆ. ಅಂದರೆ 1 ಗ್ರಾಂ ಬೆಳ್ಳಿ ದರ ಇಂದು ₹240 ರೂ. ಆಗಿದ್ದು, ನಿನ್ನೆ ₹258 ರೂ. ಇತ್ತು. ಅದೇ ರೀತಿ 8 ಗ್ರಾಂ ಬೆಳ್ಳಿ ದರ ಇಂದು ₹1,920 ರೂ. ಆಗಿದ್ದು, ನಿನ್ನೆ ₹2,064 ರೂ. ಇತ್ತು. ಒಟ್ಟು ₹144 ರೂ. ಕುಸಿತ ಕಂಡಿದೆ. 10 ಗ್ರಾಂ ಬೆಳ್ಳಿ ಬೆಲೆ ₹2,400 ರೂ. ಆಗಿದ್ದು, ನಿನ್ನೆ ₹2,580 ರೂ. ಆಗಿದೆ. ನಿನ್ನೆಗೆ ಹೋಲಿಸಿದ್ರೆ ಇಂದು ₹180 ರೂ. ಇಳಿಕೆಯಾಗಿದೆ. ಹಾಗೆಯೇ 100 ಗ್ರಾಂ ಬೆಳ್ಳಿ ದರ ಇಂದು ₹24,000 ರೂ. ಆಗಿದ್ದು, ನಿನ್ನೆ ₹25,800 ರೂ. ಆಗಿದೆ. ನಿನ್ನೆಗೆ ಹೋಲಿಸಿದ್ರೆ ಇಂದು ₹1,800 ರೂ. ಇಳಿಕೆಯಾಗಿದೆ. 1000 ಗ್ರಾಂ ಬೆಳ್ಳಿ ದರ ₹2,40,000 ರೂ. ಆಗಿದ್ದು, ನಿನ್ನೆ ₹2,58,000 ರೂ. ಇತ್ತು. ನಿನ್ನೆಗಿಂತ ₹18,000 ರೂ. ಕುಸಿತ ಕಂಡಿದೆ.
ಬೆಂಗಳೂರಿನ ಬೆಳ್ಳಿ ದರ:
ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಇಳಿಕೆ ಕಂಡಿದೆ. 10 ಗ್ರಾಂ ಬೆಳ್ಳಿ ಬೆಲೆ ಇಂದು 2,400 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 24,000 ರೂ. ಆಗಿದೆ. ಇನ್ನು 1 ಕೆಜಿ ಬೆಳ್ಳಿ ಬೆಲೆ ಒಟ್ಟು 2,40,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲೂ ಬೆಳ್ಳಿ ಬೆಲೆ ಭಾರೀ ಇಳಿಕೆಯಾಗಿದೆ. 1 ಗ್ರಾಂ ಬೆಳ್ಳಿ ಬೆಲೆ ಇಂದು 2,580 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 25,800 ರೂ. ಆಗಿದೆ. ಇನ್ನು 1 ಕೆಜಿ ಬೆಳ್ಳಿ ದರ ಇಂದು 2,40,000 ರೂ. ಆಗಿದೆ.
ಮುಂಬೈ ಬೆಳ್ಳಿ ಬೆಲೆ:
ಮುಂಬೈನಲ್ಲಿ ಇಂದು ಒಂದು ಗ್ರಾಂ ಬೆಳ್ಳಿ ಬೆಲೆ 2,400 ರೂ., 100 ಗ್ರಾಂ ಬೆಳ್ಳಿ ದರ 24,000 ರೂ., 1 ಕೆಜಿ ಬೆಳ್ಳಿ ಬೆಲೆ 2,40,000 ರೂ. ಆಗಿದೆ.
ದೆಹಲಿ ಬೆಳ್ಳಿ ದರ:
ಉಳಿದ ದಿನಗಳಿಗೆ ಹೋಲಿಸಿದ್ರೆ ಇಂದು ದೆಹಲಿಯಲ್ಲಿ ಬೆಳ್ಳಿ ದರ ಇಳಿಕೆಯಾಗಿದೆ. ಅದೇ ಪ್ರಕಾರ 1 ಗ್ರಾಂ ಬೆಳ್ಳಿ ದರ 2,400 ರೂ., 100 ಗ್ರಾಂ ಬೆಳ್ಳಿ ದರ 24,000 ರೂ., 1000 ಗ್ರಾಂ ಬೆಳ್ಳಿ ಬೆಲೆ 2,40,000 ರೂ. ಆಗಿದೆ.
ಹೈದರಾಬಾದ್ ಬೆಳ್ಳಿ ಬೆಲೆ:
ಹೈದರಾಬಾದ್‌ನಲ್ಲಿ ಇಂದು ಒಂದು ಗ್ರಾಂ ಬೆಳ್ಳಿ ಬೆಲೆ 2,580 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 24,000 ರೂ. ಆಗಿದೆ. ಅಲ್ಲದೇ 1 ಕೆಜಿ ಬೆಳ್ಳಿ ಬೆಲೆ ಇಂದು 2,58,000 ರೂ. ಆಗಿದೆ.
ಸ್ಪಾಟ್ ಬೆಳ್ಳಿ ದರ:
ಹಿಂದಿನ ವಹಿವಾಟಿನಲ್ಲಿ ಬೆಳ್ಳಿ ದರ ಸಾರ್ವಕಾಲಿಕವಾಗಿ $83.62 ಕ್ಕೆ ತಲುಪಿತ್ತು, ಆದ್ರೆ ಇಂದು ಶೇ.3 ರಷ್ಟು ಏರಿಕೆ ಕಂಡರೂ, ಸ್ಪಾಟ್ ಬೆಳ್ಳಿ ದರ ಪ್ರತೀ ಔನ್ಸ್‌ಗೆ $74.41 ಕ್ಕೆ ತಲುಪಿದೆ.
(ಈ ವಿಶ್ಲೇಷಣೆ ಮತ್ತು ಮಾಹಿತಿ ಕೇವಲ ವೈಯಕ್ತಿಕ ವಿಶ್ಲೇಷಕರು ಅಥವಾ ಸಂಸ್ಥೆಗಳ ಅಭಿಪ್ರಾಯವಾಗಿದೆ ಮತ್ತು Goodreturns.in ಅಥವಾ Greynium Information Technologies Private Limited ನ ಅಭಿಪ್ರಾಯವನ್ನು ಹೇಳಲಾಗುವುದಿಲ್ಲ. ನಾವು ಯಾವುದೇ ಮಾಹಿತಿಯ ನಿಖರತೆ, ಪೂರ್ಣತೆ ಅಥವಾ ವಿಶ್ವಾಸಾರ್ಹತೆ ಬಗ್ಗೆ ಗ್ಯಾರಂಟಿ ನೀಡುವುದಿಲ್ಲ, ಒಪ್ಪಿಕೊಳ್ಳುವುದಿಲ್ಲ ಅಥವಾ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ. ನಾವು ಯಾವುದೇ ಹೂಡಿಕೆ ಸಲಹೆ ನೀಡುವುದಿಲ್ಲ ಅಥವಾ ಷೇರುಗಳ ಖರೀದಿ ಅಥವಾ ಮಾರಾಟ ಮಾಡುವ ಬಗ್ಗೆ ಒತ್ತಾಯಿಸುವುದಿಲ್ಲ. ಎಲ್ಲಾ ಮಾಹಿತಿಯನ್ನು ಕೇವಲ ಶಿಕ್ಷಣ ಮತ್ತು ಮಾಹಿತಿ ಉದ್ದೇಶಕ್ಕಾಗಿ ಮಾತ್ರ ಒದಗಿಸಲಾಗಿದೆ. ಯಾವುದೇ ಹೂಡಿಕೆ ನಿರ್ಧಾರ ತೆಗೆದುಕೊಳ್ಳುವ ಮೊದಲು, ಒಬ್ಬ ಅರ್ಹ ಹಣಕಾಸು ಸಲಹೆಗಾರರಿಂದ ಸಲಹೆ ಪಡೆದರೆ ಉತ್ತಮ).


Click it and Unblock the Notifications