ಈ ವರ್ಷ ಬೆಳ್ಳಿ ಕೂಡಾ ದುಬಾರಿಯಾಗಬಹುದು ಎಂದು ಮೊದಲೇ ಆರ್ಥಿಕ ತಜ್ಞರು ಭವಿಷ್ಯ ನುಡಿದಿದ್ದರು. ಅದೇ ರೀತಿ ಭಾರತದಲ್ಲಿ ಬೆಳ್ಳಿ ಬೆಲೆ (Silver Rate India) ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಇಂದು (ಜ.23) ಮತ್ತೆ ಬೆಳ್ಳಿ ಬೆಲೆ ಭಾರೀ ಹೆಚ್ಚಳವಾಗಿದೆ. ಕೊನೆಗೂ ಚಿನ್ನ-ಬೆಳ್ಳಿ (Gold-Silver) ಪ್ರಿಯರಿಗೆ ಶಾಕ್ ಆಗೋದಂತೂ ಗ್ಯಾರಂಟಿ. ಹಾಗಿದ್ರೆ ಇಂದು ಭಾರತದ ಬೇರೆ ಬೇರೆ ರಾಜ್ಯಗಳಲ್ಲಿ ಬೆಳ್ಳಿ ದರ ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜನವರಿ 23, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳಿಗ್ಗೆ 11:16 ರ ವೇಳೆಗೆ ಬೆಳ್ಳಿ ದರ 3,35,703 ಕ್ಕೆ ತಲುಪಿದೆ. ಅಂದರೆ ಹಿಂದಿನ ವಹಿವಾಟಿಗಿಂತ 2.65% ರಷ್ಟು ಏರಿಕೆಯಾಗಿದೆ.
ಭಾರತದಲ್ಲಿ ಬೆಳ್ಳಿ ದರ ಹೇಗಿದೆ?
ಭಾರತದಲ್ಲಿ ಬೆಳ್ಳಿ ದರದಲ್ಲಿ ಇಂದು ಭಾರೀ ಏರಿಕೆಯಾಗಿದೆ. 1 ಗ್ರಾಂ ಬೆಳ್ಳಿ ಬೆಲೆ ಇಂದು ₹340 ರೂ. ಆಗಿದ್ದು, ನಿನ್ನೆ ₹325 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್ ₹15 ರೂ. ಹೆಚ್ಚಳವಾಗಿದೆ. 8 ಗ್ರಾಂ ಬೆಳ್ಳಿ ದರ ಇಂದು ₹2,720 ರೂ. ಆಗಿದ್ದು, ನಿನ್ನೆ ₹2,600 ರೂ. ಇತ್ತು. ನಿನ್ನೆಗಿಂತ ಇಂದು ₹120 ರೂ. ಏರಿಕೆ ಕಂಡಿದೆ. 10 ಗ್ರಾ ಬೆಳ್ಳಿ ಬೆಲೆ ಇಂದು ₹3,400 ರೂ. ಆಗಿದ್ದು, ನಿನ್ನೆ ₹3,250 ರೂ. ಇತ್ತು. ನಿನ್ನೆಗ ಹೋಲಿಸಿದ್ರೆ ಇಂದು ₹150 ರೂ. ಹೆಚ್ಚಾಗಿದೆ. 100 ಗ್ರಾಂ ಬೆಳ್ಳಿ ದರ ₹34,000 ರೂ. ಆಗಿದ್ದು, ನಿನ್ನೆ ₹32,500 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು 1,500 ರೂ. ಏರಿಕೆ ಕಂಡಿದೆ. 1 ಕೆಜಿ ಬೆಳ್ಳಿ ಬೆಲೆ ₹3,40,000 ರೂ. ಆಗಿದ್ದು, ನಿನ್ನೆ ₹3,25,000 ರೂ. ಇತ್ತು. ಒಂದೇ ದಿನದಲ್ಲಿ ₹15,000 ರೂ. ಏರಿಕೆ ಕಂಡಿದೆ.
ಭಾರತದಲ್ಲಿ ಚಿನ್ನದ ಬೆಲೆ:
ಭಾರತದಲ್ಲಿ ಇಂದು ಚಿನ್ನದ ಬೆಲೆಯಲ್ಲೂ ಭಾರೀ ಏರಿಕೆ ಕಂಡಿದೆ. 24K ಚಿನ್ನದ ಬೆಲೆ ಇಂದು 15,971 ರೂ. ಆಗಿದ್ದು, ಪ್ರತೀ ಗ್ರಾಂನಲ್ಲಿ 540 ರೂ. ಹೆಚ್ಚಳವಾಗಿದೆ. ಇನ್ನು 22K ಚಿನ್ನದ ಬೆಲೆ 14,640 ರೂ., 18K ಚಿನ್ನದ ಬೆಲೆ 11,978 ರೂ. ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರ:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಚಿನ್ನ-ಬೆಳ್ಳಿ ಪ್ರಿಯರಿಗೆ ದಿಢೀರ್ ಶಾಕ್ ನೀಡಿದೆ. ಇಂದು 10 ಗ್ರಾಂ ಬೆಳ್ಳಿ ಬೆಲೆ ₹3,400 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹34,000 ರೂ., 1 ಕೆಜಿ ಬೆಳ್ಳಿ ದರ ₹3,40,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ ಇಂದು 3,600 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 36,000 ರೂ. ಇದೆ. ಅದೇ ರೀತಿ 1 ಕೆಜಿ ಬೆಳ್ಳಿ ದರ ಇಂದು 3,60,000 ರೂ. ಆಗಿದೆ.
ಮುಂಬೈ ಬೆಳ್ಳಿ ದರ:
ಮಾಯಾನಗರಿ ಮುಂಬೈನಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 3,400 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 34,000 ರೂ., 1 ಕೆಜಿ ಬೆಳ್ಳಿ ಬೆಲೆ 3,40,000 ರೂ. ಆಗಿದೆ.
ಹೈದರಾಬಾದ್ ಬೆಳ್ಳಿ ಬೆಲೆ:
ಹೈದರಾಬಾದ್‌ನಲ್ಲೂ ಇಂದು ಬೆಳ್ಳಿ ದರ ಗಗನಕ್ಕೇರಿದೆ. 10 ಗ್ರಾಂ ಬೆಳ್ಳಿ ಬೆಲೆ ಇಂದು 3,600 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 36,000 ರೂ. ಆಗಿದೆ. ಅಲ್ಲದೇ 1 ಕೆಜಿ ಬೆಳ್ಳಿ ಬೆಲೆ ಇಂದು 3,60,000 ರೂ. ಆಗಿದೆ.
ದೆಹಲಿ ಬೆಳ್ಳಿ ದರ:
ರಾಜಧಾನಿ ದೆಹಲಿಯಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 3,400 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ಬೆಲೆ 34,000 ರೂ. ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ದರ ₹3,40,000 ರೂ. ಆಗಿದೆ.
MCX ಬೆಳ್ಳಿ ದರ:
ಜನವರಿ 23, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳಿಗ್ಗೆ 11:16 ರ ವೇಳೆಗೆ ಬೆಳ್ಳಿ ದರ 3,35,703 ಕ್ಕೆ ತಲುಪಿದೆ. ಅಂದರೆ ಹಿಂದಿನ ವಹಿವಾಟಿಗಿಂತ 2.65% ರಷ್ಟು ಏರಿಕೆಯಾಗಿದೆ.
ಸ್ಪಾಟ್ ಬೆಳ್ಳಿ ದರ:
ಜನವರಿ 23ರ GOLDPROCE.org ವರದಿ ಪ್ರಕಾರ, ಬೆಳಿಗ್ಗೆ 11:27 ರ ವೇಳೆಗೆ ಬೆಳ್ಳಿ ದರ ಪ್ರತೀ ಔನ್ಸ್‌ಗೆ $99.07 ಕ್ಕೆ ತಲುಪಿ ದಾಖಲೆ ಬರೆದಿದೆ. ಹಿಂದಿನ ವಹಿವಾಟಿಗೆ ಹೋಲಿಕೆ ಮಾಡಿದ್ರೆ ಇಂದು 3.06% ಕ್ಕೆ ತಲುಪಿದೆ.


Click it and Unblock the Notifications