ಇತ್ತೀಚೆಗೆ ಭಾರತದಲ್ಲಿ ಬೆಳ್ಳಿ ಬೆಲೆ ಭಾರೀ ಏರಿಕೆ ಕಂಡಿದೆ. ಅತ್ತ ಚಿನ್ನದ ಬೆಲೆ (Gold Rate) ಏರಿಕೆಯಾಗುತ್ತಿದ್ದಂತೆ, ಇತ್ತ ಬೆಳ್ಳಿ ದರ ಕೂಡಾ ಭಾರೀ ಏರಿಕೆಯ ಹಾದಿ ಹಿಡಿದಿದೆ. ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೋ ಮತ್ತು ಅವರ ಪತ್ನಿಯನ್ನು ಯುಎಸ್ ಸೇನೆ ಸೆರೆಹಿಡಿದ ಬೆನ್ನಲ್ಲೇ ಯುಎಸ್ ಮತು ವೆನೆಜುವೆಲಾ (US-Venezuela) ನಡುವೆ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಅದೇ ಕಾರಣದಿಂದ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಭಾರೀ ಏರಿಕೆಯಾಗಿದೆ. ಅದರಲ್ಲೂ ಹೂಡಿಕೆದಾರರು ಬೆಳ್ಳಿ ಮೇಲೆ ಹೂಡಿಕೆ ಮಾಡಲು ಭಾರೀ ಉತ್ಸಾದಲ್ಲಿದ್ದಾರೆ. ಅದರಲ್ಲೂ ಕೆಲವು ವರದಿಗಳು 2026 ರಲ್ಲಿ ಬೆಳ್ಳಿ ದರ ಭಾರೀ ಏರಿಕೆಯಾಗಬಹುದು (Silver Rate Outlook) ಎಂದು ಭವಿಷ್ಯವನ್ನೂ ನುಡಿದಿದೆ. ಇದೀಗ ಇಂದೂ (ಜನವರಿ 05) ಕೂಡಾ ಬೆಳ್ಳಿ ದರ ಭಾರತದಲ್ಲಿ ಏರಿಕೆ ಕಂಡಿದ್ದು, ಒಟ್ಟು ಎಷ್ಟು ಏರಿಕೆಯಾಗಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಹೊಸ ವರ್ಷದಿಂದ ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತಗಳು ಆಗುತ್ತಲೇ ಇದೆ. ಅದೇ ರೀತಿ ಜನವರಿ 5, 2026ರಂದು, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಏರಿಕೆ ಕಂಡಿದೆ. ಪ್ರತೀ ಕೆಜಿಗೆ ಇಂದು 2.42 ಲಕ್ಷ ರೂ. ತಲುಪಿದೆ. ಅಂದರೆ 2.75% ರಷ್ಟು ಏರಿಕೆ ಕಂಡಿದೆ. ಹಾಗಿದ್ರೆ ಇಂದು ದೇಶದ ಬೇರೆ ರಾಜ್ಯಗಳಲ್ಲಿ ಬೆಳ್ಳಿ ದರ ಹೇಗಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.
ಭಾರತದಲ್ಲಿ ಬೆಳ್ಳಿ ದರ:
ಭಾರತದಲ್ಲಿ ಬೆಳ್ಳಿ ದರ ಇತ್ತೀಚೆಗೆ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ. ಅದೇ ರೀತಿ ಇಂದೂ ಕೂಡಾ ಬೆಳ್ಳಿ ಬೆಲೆಯಲ್ಲಿ ಇಂದು ಏರಿಕೆ ಕಂಡಿದೆ. ಅಂದರೆ 1 ಗ್ರಾಂ ಬೆಳ್ಳಿ ದರ ಇಂದು ₹247 ರೂ. ಆಗಿದ್ದು, ನಿನ್ನೆ ₹241 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹6 ರೂ. ಹೆಚ್ಚಳವಾಗಿದೆ. ಅದೇ ರೀತಿ 8 ಗ್ರಾಂ ಬೆಳ್ಳಿ ಬೆಲೆ ₹1,976 ರೂ. ಆಗಿದ್ದು, ನಿನ್ನೆ ₹1,928 ರೂ. ಇತ್ತು. ನಿನ್ನೆಗಿಂತ ಇಂದು ₹48 ರೂ. ಏರಿಕೆ ಕಂಡಿದೆ. 10 ಗ್ರಾಂ ಬೆಳ್ಳಿ ದರ ಇಂದು ₹2,470 ರೂ. ಆಗಿದ್ದು, ನಿನ್ನೆ ₹2,410 ರೂ. ಇತ್ತು. ಒಟ್ಟು ₹60 ರೂ. ಹೆಚ್ಚಳವಾಗಿದೆ. ಅದೇ ರೀತಿ 100 ಗ್ರಾಂ ಬೆಳ್ಳಿ ದರ ಇಂದು ₹24,700 ರೂ. ಆಗಿದ್ದು, ನಿನ್ನೆ ₹24,100 ರೂ. ಇತ್ತು. ಒಟ್ಟು ₹600 ರೂ. ಏರಿಕೆಯಾಗಿದೆ. ಇನ್ನು 1000 ಗ್ರಾಂ ಬೆಳ್ಳಿ ದರ ಇಂದಯ ₹2,47,000 ರೂ. ಆಗಿದ್ದು, ನಿನ್ನೆ ₹2,41,000 ರೂ. ಇತ್ತು. ಒಟ್ಟು ₹6,000 ರೂ. ಏರಿಕೆಯಾಗಿದೆ.
ಬೆಂಗಳೂರಿನ ಬೆಳ್ಳಿ ದರ:
ಅತ್ತ ಚಿನ್ನದ ಬೆಲೆ ಏರಿಕೆಯಾದಂತೆ, ಇತ್ತ ಬೆಳ್ಳಿ ದರವೂ ಬೆಂಗಳೂರಿನಲ್ಲಿ ಭಾರೀ ಏರಿಕೆ ಕಂಡಿದೆ. ಇದೀಗ ಬೆಂಗಳೂರಿನಲ್ಲಿ 10 ಗ್ರಾಂ ಬೆಳ್ಳಿದರ ₹2,470 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹24,700 ರೂ. ಆಗಿದೆ. ಅದೇ ಒಂದು ಕೆಜಿ ಬೆಳ್ಳಿ ದರದ ಬೆಲೆ ₹2,47,000 ರೂ. ಆಗಿದೆ. ಅಂದರೆ ನಿನ್ನೆಗಿಂತಲೂ ಇಂದು ಬೆಳ್ಳಿ ದರಲ್ಲಿ ಭಾರೀ ಏರಿಕೆಯಾಗಿದ್ದು, ಬೆಳ್ಳಿ ಪ್ರಿಯರಿಗೆ ಬಿಗ್ ಶಾಖ್ ಅಂತಾನೇ ಹೇಳಬಹುದು.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲಿ ಇಂದು ಬೆಳ್ಳಿದರ ಏರಿಕೆ ಕಂಡಿದೆ. ಅಂದರೆ 10 ಗ್ರಾಂ ಬೆಳ್ಳಿ ಬೆಲೆ ಇಂದು 2,650 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 26,500 ರೂ. ಆಗಿದೆ. ಇನ್ನು 1 ಕೆಜಿ ಬೆಳ್ಳಿ ದರ ಇಂದು 2,65,000 ರೂ. ಆಗಿದೆ. ದೇಶದ ಎಲ್ಲಾ ರಾಜ್ಯಗಳಲ್ಲೂ ಇಂದು ಬೆಳ್ಳಿ ಬೆಲೆ ಭಾರೀ ಏರಿಕೆ ಕಂಡಿದೆ.
ಮುಂಬೈ ಬೆಳ್ಳಿ ಬೆಲೆ:
ಮುಂಬೈನಲ್ಲೂ ಇಂದು 10 ಗ್ರಾಂ ಬೆಳ್ಳಿ ದರ 2,470 ರೂ. ತಲುಪಿದೆ. 100 ಗ್ರಾಂ ಬೆಳ್ಳಿ ಬೆಲೆ 24,700 ರೂ. ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ಬೆಲೆ 2,47,000 ರೂ. ಆಗಿದೆ. ಈ ಮೂಲಕ ಪ್ರತೀ ಗ್ರಾಂ ಬೆಳ್ಳಿಯಲ್ಲಿ 6 ರೂ. ಹೆಚ್ಚಳವಾಗಿದೆ.
ಹೈದರಾಬಾದ್ ಬೆಳ್ಳಿ ಬೆಲೆ:
ಚೆನ್ನೈನಂತೆ, ಹೈದರಾಬಾದ್‌ನಲ್ಲೂ ಇಂದು ಬೆಳ್ಳಿ ದರ ಏರಿಕೆ ಕಂಡಿದೆ. ಹತ್ತು ಗ್ರಾಂ ಬೆಳ್ಳಿ ಬೆಲೆ ಇಂದು 2,650 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 26,500 ರೂ. ಆಗಿದೆ. ಅಲ್ಲದೇ 1 ಕೆಜಿ ಬೆಳ್ಳಿ ಬೆಲೆ ಇಂದು 2,65,000 ರೂ. ಆಗಿದೆ.
ದೆಹಲಿ ಬೆಳ್ಳಿ ದರ:
ರಾಜಧಾನಿ ದೆಹಲಿಯಲ್ಲಿ ಇಂದು ಬೆಳ್ಳಿ ದರ ಭಾರೀ ಏರಿಕೆಯಾಗಿದೆ. ಅಂದರೆ 10 ಗ್ರಾಂ ಬೆಳ್ಳಿ ದರ 2,470 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 24,700 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ಬೆಲೆ 2,47,000 ರೂ. ಆಗಿದೆ.
MCX ಬೆಳ್ಳಿ ದರ:
ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಏರಿಕೆ ಕಂಡಿದೆ. ಭಾರತೀಯ ಸಮಯ 12:00 ಗಂಟೆ ವೇಳೆಗೆ ಪ್ರತೀ ಕೆಜಿಗೆ ಇಂದು 2.43 ಲಕ್ಷ ರೂ. ತಲುಪಿದೆ. ಅಂದರೆ 3.00% ರಷ್ಟು ಏರಿಕೆ ಕಂಡಿದೆ.
ಸ್ಪಾಟ್ ಬೆಳ್ಳಿ ದರ:
ಇನ್ನು Golf Price.org ವರದಿ ಪ್ರಕಾರ, ಜನವರಿ 5 ರಂದು 3.49% ರಷ್ಟು ಏರಿಕೆ ಕಂಡಿದೆ. ಅದರೆ ಸ್ಪಾಟ್ ಬೆಳ್ಳಿ ದರ ಪ್ರತೀ ಔನ್ಸ್‌ಗೆ $75.37ಕ್ಕೆ ತಲುಪಿದೆ. ಇನ್ನು ವೆನೆಜುವೆಲಾ ಮತ್ತು ಅಮೆರಿಕಾ ನಡುವಿನ ಘರ್ಷಣೆ ಪರಿಣಾಮ ಚಿನ್ನದ ದರದಲ್ಲಿ ಈ ಏರಿಕೆ ಕಂಡುಬಂದಿದೆ.
(ಈ ವಿಶ್ಲೇಷಣೆ ಮತ್ತು ಮಾಹಿತಿ ಕೇವಲ ವೈಯಕ್ತಿಕ ವಿಶ್ಲೇಷಕರು ಅಥವಾ ಸಂಸ್ಥೆಗಳ ಅಭಿಪ್ರಾಯವಾಗಿದೆ ಮತ್ತು Goodreturns.in ಅಥವಾ Greynium Information Technologies Private Limited ನ ಅಭಿಪ್ರಾಯವನ್ನು ಹೇಳಲಾಗುವುದಿಲ್ಲ. ನಾವು ಯಾವುದೇ ಮಾಹಿತಿಯ ನಿಖರತೆ, ಪೂರ್ಣತೆ ಅಥವಾ ವಿಶ್ವಾಸಾರ್ಹತೆ ಬಗ್ಗೆ ಗ್ಯಾರಂಟಿ ನೀಡುವುದಿಲ್ಲ, ಒಪ್ಪಿಕೊಳ್ಳುವುದಿಲ್ಲ ಅಥವಾ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ. ನಾವು ಯಾವುದೇ ಹೂಡಿಕೆ ಸಲಹೆ ನೀಡುವುದಿಲ್ಲ ಅಥವಾ ಷೇರುಗಳ ಖರೀದಿ ಅಥವಾ ಮಾರಾಟ ಮಾಡುವ ಬಗ್ಗೆ ಒತ್ತಾಯಿಸುವುದಿಲ್ಲ. ಎಲ್ಲಾ ಮಾಹಿತಿಯನ್ನು ಕೇವಲ ಶಿಕ್ಷಣ ಮತ್ತು ಮಾಹಿತಿ ಉದ್ದೇಶಕ್ಕಾಗಿ ಮಾತ್ರ ಒದಗಿಸಲಾಗಿದೆ. ಯಾವುದೇ ಹೂಡಿಕೆ ನಿರ್ಧಾರ ತೆಗೆದುಕೊಳ್ಳುವ ಮೊದಲು, ಒಬ್ಬ ಅರ್ಹ ಹಣಕಾಸು ಸಲಹೆಗಾರರಿಂದ ಸಲಹೆ ಪಡೆದರೆ ಉತ್ತಮ).


Click it and Unblock the Notifications