ಭಾರತದಲ್ಲಿ ಬೆಳ್ಳಿ ಬೆಲೆ (Silver Rate India) ರಾಕೆಟ್‌ನಂತೆ ಏರಿಕೆ ಕಾಣುತ್ತಿದೆ. ಚಿನ್ನ ಬೆಲೆಯಂತೂ ಏರಿಕೆಯ ಹಾದಿ ಹಿಡಿದಿದ್ದು, ಕಮ್ಮಿಯಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇತ್ತ ಬೆಳ್ಳಿ ಬೆಲೆ ಕೂಡಾ ಭಾರೀ ಏರಿಕೆ ಕಾಣುತ್ತಿದೆ. ಈಗಾಗಲೇ ಬೆಲೆ ಏರಿಕೆಯಲ್ಲಿ ಬೆಳ್ಳಿ ದಾಖಲೆ ಸೃಷ್ಟಿಸಿಯಾಗಿದೆ. ಇದೀಗ ಇಂದೂ (ಜ.21) ಬೆಳ್ಳಿ ದರ ಭಾರೀ ಹೆಚ್ಚಳವಾಗಿದೆ. ಹಾಗಿದ್ರೆ ವಿವಿಧ ರಾಜ್ಯಗಳಲ್ಲಿ ಬೆಳ್ಳಿ ಬೆಲೆ ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜನವರಿ 21, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳಿಗ್ಗೆ 11:01 ಗಂಟೆಯ ವೇಳೆಗೆ ಬೆಳ್ಳಿ ದರ 3,32,802 ಕ್ಕೆ ತಲುಪಿದೆ. ಅಂದರೆ ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಇಂದು 2.82% ಹೆಚ್ಚಳ ಕಂಡಿದೆ.
ಭಾರತದಲ್ಲಿ ಬೆಳ್ಳಿ ದರ ಎಷ್ಟಿದೆ?
ಭಾರತದಲ್ಲಿ 1 ಗ್ರಾಂ ಬೆಳ್ಳಿ ಬೆಲೆ ಇಂದು ₹325 ರೂ. ಆಗಿದ್ದು, ನಿನ್ನೆ ₹320 ರೂ. ಇತ್ತು. ನಿನ್ನೆಗಿಂತ ಇಂದು ₹5 ರೂ. ಏರಿಕೆಯಾಗಿದೆ. ಹಾಗೆಯೇ 8 ಗ್ರಾಂ ಬೆಳ್ಳಿ ಬೆಲೆ ₹2,600 ರೂ. ಆಗಿದ್ದು, ನಿನ್ನೆ ₹2,560 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹40 ರೂ. ಹೆಚ್ಚಳ ಕಂಡಿದೆ. 10 ಗ್ರಾಂ ಬೆಳ್ಳಿ ದರ ₹3,250 ರೂ. ಆಗಿದ್ದು, ನಿನ್ನೆ ₹3,200 ರೂ. ಇತ್ತು. ನಿನ್ನೆಗಿಂತ ಇಂದು ₹50 ರೂ. ಹೆಚ್ಚಳ ಕಂಡಿದೆ. ಹಾಗೆಯೇ 100 ಗ್ರಾ ಬೆಳ್ಳಿ ಬೆಲೆ ₹32,500 ರೂ. ಆಗಿದ್ದು, ನಿನ್ನೆ ₹32,000 ರೂ. ಇತ್ತು. ಒಟ್ಟು ₹500 ರೂ. ಏರಿಕೆಯಾಗಿದೆ. 1000 ಗ್ರಾಂ ಬೆಳ್ಳಿ ದರ ₹3,25,000 ರೂ. ಆಗಿದೆ.
ಭಾರತದಲ್ಲಿ ಚಿನ್ನದ ಬೆಲೆ:
ಭಾರತದಲ್ಲಿ ಚಿನ್ನದ ಬೆಲೆ ದಿನೇ ದಿನೇ ಏರಿಕೆ ಕಂಡಿದೆ. 24K ಚಿನ್ನದ ಬೆಲೆ ಇಂದು 15,480 ರೂ. ಆಗಿದ್ದು, ಹಾಗೆಯೇ 22K ಚಿನ್ನದ ಬೆಲೆ 14,190 ರೂ., 18K ಚಿನ್ನದ ಬೆಲೆ 11,611 ರೂ. ಆಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರ ಹೇಗಿದೆ?
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ದಿಢೀರ್ ಬೆಳ್ಳಿ ದರ ಏರಿಕೆ ಕಂಡಿದೆ. ಇಂದು 10 ಗ್ರಾಂ ಬೆಳ್ಳಿ ಬೆಲೆ ₹3,250 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹32,500 ರೂ., 1 ಕೆಜಿ ಬೆಳ್ಳಿ ದರ ₹3,25,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ ಇಂದು 3,400 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 34,000 ರೂ. ಇದೆ. ಅದೇ ರೀತಿ 1 ಕೆಜಿ ಬೆಳ್ಳಿ ದರ ಇಂದು 3,40,000 ರೂ. ಆಗಿದೆ. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್ ಹೆಚ್ಚಳ ಕಂಡಿದೆ.
ಮುಂಬೈ ಬೆಳ್ಳಿ ದರ:
ಮುಂಬೈನಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 3,250 ರೂ. ತಲುಪಿದೆ. 100 ಗ್ರಾಂ ಬೆಳ್ಳಿ ಬೆಲೆ 32,500 ರೂ. ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ಬೆಲೆ 3,25,000 ರೂ. ಆಗಿದೆ. ಮಾಯಾನಗರಿಯಲ್ಲಿ ಇಂದು ಬೆಳ್ಳಿ ದರ ಭಾರೀ ಏರಿಕೆ ಕಂಡಿದೆ.
ಹೈದರಾಬಾದ್ ಬೆಳ್ಳಿ ಬೆಲೆ:
ಚೆನ್ನೈನಂತೆ ಹೈದರಾಬಾದ್‌ನಲ್ಲೂ ಇಂದು 10 ಗ್ರಾಂ ಬೆಳ್ಳಿ ಬೆಲೆ ಇಂದು 3,400 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 34,000 ರೂ. ಆಗಿದೆ. ಅಲ್ಲದೇ 1 ಕೆಜಿ ಬೆಳ್ಳಿ ಬೆಲೆ ಇಂದು 3,40,000 ರೂ. ಆಗಿದೆ.
ದೆಹಲಿ ಬೆಳ್ಳಿ ದರ:
ದೆಹಲಿಯಲ್ಲಿ ಇಂದು ಬೆಳ್ಳಿ ದರ ಭಾರೀ ಏರಿಕೆ ಕಂಡಿದೆ. ಅದೇ ರೀತಿ ಇಂದು 10 ಗ್ರಾಂ ಬೆಳ್ಳಿ ದರ 3,250 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ಬೆಲೆ 32,500 ರೂ. ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ದರ ₹3,25,000 ರೂ. ಆಗಿದೆ.
MCX ಬೆಳ್ಳಿ ದರ:
ಜನವರಿ 21, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳಿಗ್ಗೆ 11:01 ಗಂಟೆಯ ವೇಳೆಗೆ ಬೆಳ್ಳಿ ದರ 3,32,802 ಕ್ಕೆ ತಲುಪಿದೆ. ಅಂದರೆ ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಇಂದು 2.82% ಹೆಚ್ಚಳ ಕಂಡಿದೆ.
ಸ್ಪಾಟ್ ಬೆಳ್ಳಿ ದರ:
ಜನವರಿ 21ರ GOLDPROCE.org ವರದಿ ಪ್ರಕಾರ, ಬೆಳಿಗ್ಗೆ 11:10 ರ ವೇಳೆಗೆ ಬೆಳ್ಳಿ ದರ ಪ್ರತೀ ಔನ್ಸ್‌ಗೆ $94.54 ಕ್ಕೆ ತಲುಪಿದ್ದು, ಹಿಂದಿನ ವಹಿವಾಟಿಗೆ ಹೋಲಿಕೆ ಮಾಡಿದ್ರೆ ಇಂದು 0.36% ಇಳಿಕೆ ಕಂಡಿದೆ.


Click it and Unblock the Notifications