ಭಾರತದಲ್ಲಿ ಚಿನ್ನಕ್ಕೆ ಎಷ್ಟು ಮಹತ್ವ ನೀಡಲಾಗುತ್ತದೆಯೋ, ಅಷ್ಟೇ ಮಹತ್ವವನ್ನು ಬೆಳ್ಳಿಗೂ ನೀಡಲಾಗುತ್ತೆ. ಆದರೆ ಇತ್ತೀಚೆಗೆ ದಾಖಲೆ ಬೆಲೆಯಲ್ಲಿ ಬೆಳ್ಳಿ ದರ ಏರಿಕೆ ಕಂಡಿತ್ತು. ಆದ್ರೆ ಕಳೆದ ವಾರದಲ್ಲಿ ಬೆಳ್ಳಿ ಪಾತಾಳಕ್ಕೆ ಕುಸಿದಿತ್ತು. ಇದೀಗ ಮತ್ತೆ ಭಾರತದಲ್ಲಿ ಬೆಳ್ಳಿ ದರ (Gold Rate India) ಏರಿಕೆಯ ಹಾದಿ ನೋಡುತ್ತಿದೆ. ಹಾಗಿದ್ರೆ ಇಂದು ಎಷ್ಟಿದೆ ಗೊತ್ತಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಭಾರತದಲ್ಲಿ ಬೆಳ್ಳಿ ದರ ಎಷ್ಟಿದೆ?
ಭಾರತದಲ್ಲಿ ಬೆಳ್ಳಿ ದರ ಇಂದು ಭಾರೀ ಹೆಚ್ಚಳವಾಗಿದೆ. ಊಹೆಯೂ ಮಾಡದಷ್ಟು ಬೆಲೆ ಏರಿಕೆ ಕಂಡಿದ್ದು, ಪ್ರತೀ ಗ್ರಾಂ ಬೆಳ್ಳಿಯಲ್ಲಿ ಬರೋಬ್ಬರಿ 25 ರೂ. ಏರಿಕೆಯಾಗಿದೆ. ಆ ಮೂಲಕ ಒಂದು ಗ್ರಾಂ ಬೆಳ್ಳಿ ಬೆಲೆ ₹300 ರೂ. ತಲುಪಿದೆ. ಇನ್ನು 8 ಗ್ರಾಂ ಬೆಳ್ಳಿ ಬೆಲೆ ₹2,400 ರೂ. ಆಗಿದ್ದು, ನಿನ್ನೆ ₹2,200 ರೂ. ಇತ್ತು. ಒಂದೇ ದಿನ ₹200 ರೂ. ಹೆಚ್ಚಳವಾಗಿದೆ. ಹಾಗೆಯೇ 10 ಗ್ರಾಂ ಬೆಳ್ಳಿ ದರ ₹3,000 ರೂ. ಆಗಿದ್ದು, ನಿನ್ನೆ ₹2,750 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹250 ರೂ. ಏರಿಕೆಯಾಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹30,000 ರೂ. ಆಗಿದ್ದು, ನಿನ್ನೆ ₹27,500 ರೂ. ಇತ್ತು. ನಿನ್ನೆಗಿಂತ ಇಂದು ದಿಢೀರ್ ₹2,500 ರೂ. ಹೆಚ್ಚಳವಾಗಿದೆ. ಇನ್ನು 1000 ಗ್ರಾಂ ಬೆಳ್ಳಿ ದರ ₹3,00,000 ರೂ. ಆಗಿದ್ದು, ನಿನ್ನೆ ₹2,75,000 ರೂ. ಇತ್ತು. ಒಂದೇ ದಿನದಲ್ಲಿ ₹25,000 ರೂ. ಹೆಚ್ಚಳ ಕಂಡಿದೆ.
ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ಭಾರತದಲ್ಲಿ ಸೋಮವಾರ ಚಿನ್ನದ ದರ ಕೂಡಾ ಭಾರೀ ಏರಿಕೆ ಕಂಡಿದೆ. 24K ಚಿನ್ನದ ಬೆಲೆ 16,135 ರೂ. ಆಗಿದೆ. ಇನ್ನು 22K ಚಿನ್ನದ ಬೆಲೆ 14,790 ರೂ., 18K ಚಿನ್ನದ ಬೆಲೆ 12,101 ರೂ. ಆಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರ:
ಬೆಂಗಳೂರಿನಲ್ಲಿ ಇತ್ತೀಚೆಗೆ ಬೆಳ್ಳಿ ದರ ಭಾರೀ ಇಳಿಕೆಯಾಗಿತ್ತು. ಆದ್ರೆ ಇಂದು ದಿಢೀರ್ ಏರಿಕೆಯಾಗಿದೆ. 10 ಗ್ರಾಂ ಬೆಳ್ಳಿ ಬೆಲೆ ಇಂದು 3,000 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹30,000 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ಬೆಲೆ ₹3,00,000 ರೂ. ಆಗಿದೆ. ನಿನ್ನೆಗಿಂತ ಇಂದು ವಾರದ ಆರಂಭದಲ್ಲಿ ಪ್ರತೀ ಗ್ರಾಂನಲ್ಲಿ 25 ರೂ. ಹೆಚ್ಚಳ ಕಂಡಿದೆ..
ಹೈದರಾಬಾದ್ ಬೆಳ್ಳಿ ದರ:
ಹೈದರಾಬಾದ್‌ನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹3,000 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹30,000 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ಬೆಲೆ ಇಂದು 3,00,000 ರೂ. ಆಗಿದೆ.
ದೆಹಲಿಯಲ್ಲಿ ಬೆಳ್ಳಿ ದರ ಎಷ್ಟಿದೆ?
ರಾಜಧಾನಿ ದೆಹಲಿಯಲ್ಲೂ ಇಂದು ಬೆಳ್ಳಿ ದರ ಸ್ಥಿರವಾಗಿದೆ. 10 ಗ್ರಾಂ ಬೆಳ್ಳಿ ದರ 3,000 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 30,000 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ದರ 3,00,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ 3,000 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹30,000 ರೂ. ಆಗಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ದರ ಇಂದು ₹3,00,000 ರೂ. ಆಗಿದ್ದು, ನಿನ್ನೆಯ ಬೆಲೆಯನ್ನೇ ಇಂದು ಕಾಯ್ದಕೊಂಡಿದೆ.
ಮುಂಬೈ ಬೆಳ್ಳಿ ದರ:
ಮುಂಬೈನಲ್ಲಿ 10 ಗ್ರಾಂ ಬೆಳ್ಳಿ ದರ 3,000 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹30,000 ರೂ., 1000 ಗ್ರಾಂ ಬೆಳ್ಳಿ ಬೆಲೆ ₹3,00,000 ರೂ. ಆಗಿದೆ.
MCX ಬೆಳ್ಳಿ ದರ ಹೇಗಿದೆ?
ಫೆಬ್ರವರಿ 23, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಸೋಮವಾರ (ಫೆ.23) 2,65,992 ರಲ್ಲಿ ವಹಿವಾಟು ನಡೆಸುತ್ತಿದೆ. ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಇಂದು ಒಟ್ಟು 5.16% ಏರಿಕೆಯಾಗಿದೆ.
ಸ್ಪಾಟ್ ಬೆಳ್ಳಿ ದರ:
ಫೆಬ್ರವರಿ 23ರ GOLDPRICE.ORG ವರದಿ ಪ್ರಕಾರ, ಬೆಳ್ಳಿ ದರ ಸೋಮವಾರ $87.00 ಡಾಲರ್ ತಲುಪಿದ್ದು, ಹಿಂದಿನ ವಹಿವಾಟಿಗಿಂತ ಇಂದು 2.84% ಏರಿಕೆಯಾಗಿದೆ.


Click it and Unblock the Notifications