ಮಧ್ಯಪ್ರಾಚ್ಯದ ಸಂಘರ್ಷ (Middle East War) ಅತ್ತ ಜಾಗತಿಕವಾಗಿ ಭಾರೀ ಪರಿಣಾಮ ಬೀರುತ್ತಿದೆ. ಇತ್ತ ಅಮೂಲ್ಯ ಲೋಹದ ಮಾರುಕಟ್ಟೆ ಮೇಲೂ ಪ್ರಭಾವ ಬೀರಿದ್ದು, ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತಗಳು ಆಗುತ್ತಲೇ ಇದೆ. ಇಂದು ಭಾರತದಲ್ಲಿ ಚಿನ್ನದ ಬೆಲೆ ಏರಿಕೆ ಕಂಡರೆ, ಬೆಳ್ಳಿ ಬೆಲೆ ಏನಾಗಿದೆ ಅನ್ನೋ ಕುತೂಹಲ ಎಲ್ಲರಿಗೂ ಮೂಡಿದೆ. ಹಾಗಿದ್ರೆ ಭಾರತದಲ್ಲಿ ಬೆಳ್ಳಿ ದರ (Silver Rate India) ಇಂದು ಇಳಿಕೆಯೋ? ಏರಿಕೆಯೋ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತದ ಬೆಳ್ಳಿ ದರ
ಭಾರತದಲ್ಲಿ ಇಂದು ಬೆಳ್ಳಿ ಬೆಲೆ ನಿಂತಲ್ಲೇ ನಿಂತು ಬಿಟ್ಟಿದೆ. ಅತ್ತ ಏರಿಕೆಯೂ ಇಲ್ಲ, ಇತ್ತ ಇಳಿಕೆಯೂ ಇಲ್ಲ ಎಂಬಂತೆ, ಬೆಳ್ಳಿ ದರ ಸ್ಥಿರವಾಗಿಬಿಟ್ಟಿದೆ. 1 ಗ್ರಾಂ ಬೆಳ್ಳಿ ದರ ಇಂದು ₹290 ರೂ. ಆಗಿದ್ದು, ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಶೂನ್ಯ ಬದಲಾವಣೆಯಾಗಿದೆ. ಅದೇ ರೀತಿ 8 ಗ್ರಾಂ ಬೆಳ್ಳಿ ದರ ₹2,320 ರೂ. ಆಗಿದ್ದು, ಇಂದು ಸ್ಥಿರವಾಗಿ ನಿಂತಿದೆ. ಅದೇ ರೀತಿ 10 ಗ್ರಾಂ ಬೆಳ್ಳಿ ಬೆಲೆ ₹2,900 ರೂ., 100 ಗ್ರಾಂ ಬೆಳ್ಳಿ ದರ ₹29,000 ರೂ., 1000 ಗ್ರಾಂ ಬೆಳ್ಳಿ ದರ ₹2,90,000 ರೂ. ಆಗಿದೆ. ನಿನ್ನೆಗೆ ಹೋಲಿಸಿದ್ರೆ ಇಂದು ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ.
ಭಾರತದಲ್ಲಿ ಚಿನ್ನದ ದರ
ಭಾರತದಲ್ಲಿ ಇಂದು ಚಿನ್ನದ ದರ ದಿಢೀರ್ ಏರಿಕೆ ಕಂಡಿದೆ. 24K ಚಿನ್ನದ ಬೆಲೆ 16,331 ರೂ., 22K ಚಿನ್ನದ ಬೆಲೆ 14,970 ರೂ., 18K ಚಿನ್ನದ ಬೆಲೆ 12,248 ರೂ. ತಲುಪಿದೆ.
ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳ್ಳಿ ದರ ಸ್ಥಿರವಾಗಿದೆ. 10 ಗ್ರಾಂ ಬೆಳ್ಳಿ ಬೆಲೆ ಇಂದು 2,900 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹29,000 ರೂ., 1000 ಗ್ರಾಂ ಬೆಳ್ಳಿ ಬೆಲೆ 2,90,000 ರೂ. ಆಗಿದೆ.
ದೆಹಲಿಯಲ್ಲಿ ಬೆಳ್ಳಿ ದರ
ದೆಹಲಿಯಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 2,900 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹29,000 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ದರ 2,90,000 ರೂ. ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಶೂನ್ಯ ಬದಲಾವಣೆಯಾಗಿದೆ.
ಹೈದರಾಬಾದ್ ಬೆಳ್ಳಿ ದರ ಎಷ್ಟಿದೆ?
ಹೈದರಾಬಾದ್‌ನಲ್ಲೂ ಇಂದು ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 10 ಗ್ರಾಂ ಬೆಳ್ಳಿ ಬೆಲೆ ಇಂದು ₹3,000 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹30,000 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ಬೆಲೆ ಇಂದು 3,00,000 ರೂ. ಆಗಿದೆ.
ಮುಂಬೈ ಬೆಳ್ಳಿ ದರ
ಮುಂಬೈನಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 2,900 ರೂ. ತಲುಪಿದೆ. 100 ಗ್ರಾಂ ಬೆಳ್ಳಿ ಬೆಲೆ ₹29,000 ರೂ., 1000 ಗ್ರಾಂ ಬೆಳ್ಳಿ ಬೆಲೆ 2,90,000 ರೂ. ತಲುಪಿದೆ.
ಚೆನ್ನೈ ಬೆಳ್ಳಿ ದರ
ಚೆನ್ನೈನಲ್ಲಿ ಇಂದು ಬೆಳ್ಳಿ ಬೆಲೆ ನಿಂತಲ್ಲೇ ನಿಂತಿದೆ. 10 ಗ್ರಾಂ ಬೆಳ್ಳಿ ಬೆಲೆ 3,000 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹30,000 ರೂ. ಆಗಿದೆ. 1000 ಗ್ರಾಂ ಬೆಳ್ಳಿ ದರ ಇಂದು ₹3,00,000 ರೂ. ಆಗಿದೆ.
MCX ಬೆಳ್ಳಿ ದರ
ಮಾರ್ಚ್ 11, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಇಂದು 2,76,113 ರೂ.ನಲ್ಲಿ ವಹಿವಾಟು ನಡೆಸುತ್ತಿದೆ. ಹಿಂದಿನ ವಹಿವಾಟಿಗೆ ಹೋಲಿಕೆ ಮಾಡಿದ್ರೆ ಇಂದು 0.62% ಇಳಿಕೆಯಾಗಿದೆ.
ಸ್ಪಾಟ್ ಬೆಳ್ಳಿ ದರ:
ಮಾರ್ಚ್ 11, 2026 ರ GOLDPRICE.ORG ವರದಿ ಪ್ರಕಾರ, ಬೆಳ್ಳಿ ದರ ಇಂದು $88.25 ಡಾಲರ್ ತಲುಪಿದ್ದು, ಹಿಂದಿನ ವಹಿವಾಟಿಗಿಂತ ಇಂದು 1.23% ಕುಸಿತ ಕಂಡಿದೆ.


Click it and Unblock the Notifications