ಅತ್ತ ಮಧ್ಯಪ್ರಾಚ್ಯದಲ್ಲಿ (Middle East) ಭಾರೀ ಘರ್ಷಣೆ ಆರಂಭವಾಗಿದೆ. ಇಸ್ರೇಲ್ ಮತ್ತು ಇರಾನ್ (Israel-Iran War) ನಡುವಿನ ಸಂಘರ್ಷ ತಾರಕಕ್ಕೇರಿದೆ. ಉಭಯ ರಾಷ್ಟ್ರಗಳ ನಡುವೆ ಉಂಟಾದ ಕದನ, ಜಾಗತಿಕ ಮಾರುಕಟ್ಟೆ ಮೇಲೂ ಭಾರೀ ಪರಿಣಾಮ ಬೀರಿದೆ. ಈ ಕದನದ ನಡುವೆ ಇದೀಗ ಚಿನ್ನದ ಬೆಲೆ ಇಳಿಕೆಯಾಗಿದ್ದು, ಬೆಳ್ಳಿ ದರ (Silver Rate) ಭಾರೀ ಏರಿಕೆಯಾಗಿದೆ. ಹಾಗಿದ್ರೆ ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟಿದೆ ಗೊತ್ತಾ?

ಭಾರತದಲ್ಲಿ ಬೆಳ್ಳಿ ದರ ಎಷ್ಟಿದೆ?
ಭಾರತದಲ್ಲಿ ಇಂದು ಬೆಳ್ಳಿ ದರ ಭಾರೀ ಹೆಚ್ಚಳ ಕಂಡಿದೆ. 1 ಗ್ರಾಂ ಬೆಳ್ಳಿ ದರ ₹330 ರೂ. ಆಗಿದ್ದು, ನಿನ್ನೆ ₹295 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್ ₹35 ರೂ. ಹೆಚ್ಚಳ ಕಂಡಿದೆ. ಇನ್ನು 8 ಗ್ರಾಂ ಬೆಳ್ಳಿ ಬೆಲೆ ₹2,640 ರೂ. ಆಗಿದ್ದು, ನಿನ್ನೆ ₹2,360 ರೂ. ಇತ್ತು. ನಿನ್ನೆಗಿಂತ ಇಂದು ₹280 ರೂ. ಏರಿಕೆಯಾಗಿದೆ. 10 ಗ್ರಾಂ ಬೆಳ್ಳಿ ದರ ₹3,300 ರೂ. ಆಗಿದ್ದು, ನಿನ್ನೆ ₹2,950 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹350 ರೂ. ಹೆಚ್ಚಳವಾಗಿದೆ. ಇನ್ನು 100 ಗ್ರಾಂ ಬೆಳ್ಳಿ ಬೆಲೆ ₹33,000 ರೂ. ಆಗಿದ್ದು, ನಿನ್ನೆ ₹29,500 ರೂ. ಇತ್ತು. ಒಂದೇ ದಿನದಲ್ಲಿ ₹3,500 ರೂ. ಹೆಚ್ಚಳ ಕಂಡಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ಬೆಲೆ ₹3,30,000 ರೂ. ಆಗಿದ್ದು, ನಿನ್ನೆ ₹2,95,000 ರೂ. ಆಗಿದ್ದು, ಬರೋಬ್ಬರಿ ₹35,000 ರೂ. ಏರಿಕೆ ಕಂಡಿದೆ.
ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ಅತ್ತ ಬೆಳ್ಳಿ ದರ ಏರಿಕೆ ಕಂಡರೂ, ಇತ್ತ ಭಾರತದಲ್ಲಿ ಇಂದು ಚಿನ್ನದ ಬೆಲೆ ಭಾರೀ ಇಳಿಕೆಯಾಗಿದೆ. 24K ಚಿನ್ನದ ಬೆಲೆ 16,980 ರೂ., 22K ಚಿನ್ನದ ಬೆಲೆ 15,565 ರೂ., 18K ಚಿನ್ನದ ಬೆಲೆ 12,735 ರೂ. ತಲುಪಿದೆ/
ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳ್ಳಿ ದರ ಭಾರೀ ಹೆಚ್ಚಳವಾಗಿದೆ. 10 ಗ್ರಾಂ ಬೆಳ್ಳಿ ಬೆಲೆ ಇಂದು 3,300 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹33,000 ರೂ., 1000 ಗ್ರಾಂ ಬೆಳ್ಳಿ ಬೆಲೆ 3,30,000 ರೂ. ಆಗಿದೆ.
ಹೈದರಾಬಾದ್ ಬೆಳ್ಳಿ ದರ:
ಹೈದರಾಬಾದ್‌ನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹3,150 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹31,500 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ಬೆಲೆ ಇಂದು 3,15,000 ರೂ. ಆಗಿದೆ.
ದೆಹಲಿಯಲ್ಲಿ ಬೆಳ್ಳಿ ದರ:
ರಾಜಧಾನಿ ದೆಹಲಿಯಲ್ಲಿ ಇಂದು ಬೆಳ್ಳಿ ದರ ಇಳಿಕೆ ಕಂಡಿದೆ. 10 ಗ್ರಾಂ ಬೆಳ್ಳಿ ದರ 3,300 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹33,000 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ದರ 3,30,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ 3,150 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹31,500 ರೂ. ಆಗಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ದರ ಇಂದು ₹3,15,000 ರೂ. ಆಗಿದೆ.
ಮುಂಬೈ ಬೆಳ್ಳಿ ದರ:
ಮಾಯಾನಗರಿ ಮುಂಬೈನಲ್ಲಿ 10 ಗ್ರಾಂ ಬೆಳ್ಳಿ ದರ 3,300 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹33,000 ರೂ., 1000 ಗ್ರಾಂ ಬೆಳ್ಳಿ ಬೆಲೆ ₹3,30,000 ರೂ. ಆಗಿದೆ.
MCX ಬೆಳ್ಳಿ ದರ:
ಮಾರ್ಚ್ 03, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಶನಿವಾರ ಬೆಳಿಗ್ಗೆ 11:45 ರ ಸುಮಾರಿಗೆ 2,92,450 ರೂ.ನಲ್ಲಿ ವಹಿವಾಟು ನಡೆಸುತ್ತಿದೆ. ಹಿಂದಿನ ವಹಿವಾಟಿಗಿಂತ 3.52% ಏರಿಕೆ ಕಂಡಿದೆ.
ಸ್ಪಾಟ್ ಬೆಳ್ಳಿ ದರ:
ಮಾರ್ಚ್ 03,2026 ರ GOLDPRICE.ORG ವರದಿ ಪ್ರಕಾರ, ಬೆಳ್ಳಿ ದರ ಇಂದು $94.89 ಡಾಲರ್ ತಲುಪಿದ್ದು, ಹಿಂದಿನ ವಹಿವಾಟಿಗಿಂತ ಇಂದು 1.26% ಏರಿಕೆ ಕಂಡಿದೆ.


Click it and Unblock the Notifications