ಚಿನ್ನದಂತೆ ಬೆಳ್ಳಿ ಹೂಡಿಕೆದಾರರು, ಇಂದು ಇಳಿಕೆಯಾಗುತ್ತೆ, ನಾಳೆ ಇಳಿಕೆಯಾಗುತ್ತೆ ಎಂಬ ಕಾತುರದಲ್ಲಿದ್ದಾರೆ. ಆದ್ರೆ ಕಳೆದ ಮೂರು ದಿನಗಳಿಂದ ಬೆಳ್ಳಿ ದರ ಮಾತ್ರ ಏರಿಕೆಯೂ ಆಗುತ್ತಿಲ್ಲ, ಇಳಿಕೆಯೂ ಆಗುತ್ತಿಲ್ಲ. ಹೌದು, ಭಾರತದಲ್ಲಿ ಬೆಳ್ಳಿ ದರ (Silver Rate India) ಕಳೆದ 3 ದಿನಗಳಿಂದ ಸ್ಥಿರವಾಗಿದೆ. ಹಾಗಿದ್ರೆ ಇಂದು ಎಷ್ಟಿದೆ ಗೊತ್ತಾ ಬೆಳ್ಳಿ ಬೆಲೆ? ಇಲ್ಲಿದೆ ಮಾಹಿತಿ.

ಭಾರತದಲ್ಲಿ ಬೆಳ್ಳಿ ದರ ಎಷ್ಟಿದೆ?
ಕೆಟ್ಟು ನಿಂತ ಗಾಡಿಯಂತೆ, ಭಾರತದಲ್ಲಿ ಬೆಳ್ಳಿ ದರ ಕಳೆದ ಮೂರು ದಿನಗಳಿಂದ ಸ್ಥಿರವಾಗಿದೆ. 1 ಗ್ರಾಂ ಬೆಳ್ಳಿ ದರ ಇಂದು ₹285 ರೂ. ಆಗಿದ್ದು, ನಿನ್ನೆಯಷ್ಟೇ ಇದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 8 ಗ್ರಾಂ ಬೆಳ್ಳಿ ದರ ಇಂದು ₹2,280 ರೂ. ಆಗಿದ್ದು, ನಿನ್ನೆಯೂ ಅಷ್ಟೇ ಬೆಲೆ ಇತ್ತು. ಆದ್ದರಿಂದ ಬೆಳ್ಳಿ ದರದಲ್ಲಿ ಇಂದು ಶೂನ್ಯ ಬದಲಾವಣೆಯಾಗಿದೆ. ಆ ಪ್ರಕಾರ, 10 ಗ್ರಾಂ ಬೆಳ್ಳಿ ದರ ₹2,850 ರೂ. ಆಗಿದ್ದು, ₹100 ಗ್ರಾಂ ಬೆಳ್ಳಿ ಬೆಲೆ ₹28,500 ರೂ. ಇದೆ. ಇನ್ನು 1000 ಗ್ರಾಂ ಬೆಳ್ಳಿ ಬೆಲೆ ₹2,85,000 ರೂ.ಇದೆ.
ಭಾರತದಲ್ಲಿ ಚಿನ್ನದ ದರ:
ಅತ್ತ ಬೆಳ್ಳಿ ದರ ಸ್ಥಿರವಾಗಿದ್ದರೂ, ಚಿನ್ನದ ಬೆಲೆ ಮಾತ್ರ ಇಂದು ಏರಿಕೆ ಕಂಡಿದೆ. 24K ಚಿನ್ನದ ಬೆಲೆ 16,157 ರೂ. ಆಗಿದೆ. ಇನ್ನು 22K ಚಿನ್ನದ ಬೆಲೆ 14,810 ರೂ., 18K ಚಿನ್ನದ ಬೆಲೆ 12,118 ರೂ. ಆಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ:
ಬೆಂಗಳೂರಿನಲ್ಲಿ ಇಂದು ಬೆಳ್ಳಿ ದರ ಸ್ಥಿರವಾಗಿದೆ. ನಿನ್ನೆಯ ಬೆಲೆಯನ್ನೇ ಇಂದು ಕಾಯ್ದುಕೊಂಡಿದ್ದು, 10 ಗ್ರಾಂ ಬೆಳ್ಳಿ ಬೆಲೆ ಇಂದು 2,850 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹28,500 ರೂ., 1000 ಗ್ರಾಂ ಬೆಳ್ಳಿ ಬೆಲೆ 2,85,000 ರೂ. ಆಗಿದೆ.
ಹೈದರಾಬಾದ್ ಬೆಳ್ಳಿ ದರ:
ಹೈದರಾಬಾದ್‌ನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹2,950 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹29,500 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ಬೆಲೆ ಇಂದು 2,95,000 ರೂ. ಆಗಿದೆ. ನಿನ್ನೆಗೆ ಹೋಲಿಸಿದ್ರೆ ಇಂದು ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ದೆಹಲಿಯಲ್ಲಿ ಬೆಳ್ಳಿ ದರ ಎಷ್ಟಿದೆ?
ರಾಜಧಾನಿ ದೆಹಲಿಯಲ್ಲಿ ಇಂದು ಬೆಳ್ಳಿ ದರ ಭಾರೀ ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿ ದರ 2,850 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 28,500 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ದರ 2,85,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ 2,950 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹29,500 ರೂ. ಆಗಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ದರ ಇಂದು ₹2,95,000 ರೂ. ಆಗಿದೆ.
ಮುಂಬೈ ಬೆಳ್ಳಿ ದರ:
ಮುಂಬೈನಲ್ಲಿ 10 ಗ್ರಾಂ ಬೆಳ್ಳಿ ದರ 2,850 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹28,500 ರೂ., 1000 ಗ್ರಾಂ ಬೆಳ್ಳಿ ಬೆಲೆ ₹2,85,000 ರೂ. ಆಗಿದೆ.
MCX ಬೆಳ್ಳಿ ದರ:
ಫೆಬ್ರವರಿ 27, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಶುಕ್ರವಾರ ಬೆಳಿಗ್ಗೆ 11:23 ರ ಸುಮಾರಿಗೆ 2,66,550 ರೂ.ನಲ್ಲಿ ವಹಿವಾಟು ನಡೆಸುತ್ತಿದ್ದು, ಹಿಂದಿನ ವಹಿವಾಟಿಗಿಂತ 2.65% ಏರಿಕೆಯಾಗಿದೆ.
ಸ್ಪಾಟ್ ಬೆಳ್ಳಿ ದರ:
ಫೆಬ್ರವರಿ 27ರ GOLDPRICE.ORG ವರದಿ ಪ್ರಕಾರ, ಬೆಳ್ಳಿ ದರ ಶುಕ್ರವಾರ $89.98 ಡಾಲರ್ ತಲುಪಿದ್ದು, ಹಿಂದಿನ ವಹಿವಾಟಿಗಿಂತ ಇಂದು 3.30% ಏರಿಕೆ ಕಂಡಿದೆ.


Click it and Unblock the Notifications