ಕಳೆದೆರಡು ತಿಂಗಳ ಹಿಂದೆ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದ ಬೆಳ್ಳಿ ಬೆಲೆ ಇದೀಗ, ದಿಢೀರ್ ಕುಸಿತ ಕಂಡಿದೆ. ಹೌದು, ಯುಗಾದಿ ಹಬ್ಬದ ದಿನವೇ ಬೆಳ್ಳಿ ದರದಲ್ಲಿ ಭಾರೀ ಇಳಿಕೆಯಾಗಿದೆ. ಹಾಗಿದ್ರೆ ಇಂದು ಭಾರತದಲ್ಲಿ ಬೆಳ್ಳಿ ದರ (Silver Rate India) ಎಷ್ಟಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಬೆಳ್ಳಿ ದರ:
ಭಾರತದಲ್ಲಿ ಇಂದು ಬೆಳ್ಳಿ ಬೆಲೆ ಪ್ರತೀ ಗ್ರಾಂನಲ್ಲಿ 5 ರೂ. ಇಳಿಕೆಯಾಗಿದೆ. 1 ಗ್ರಾಂ ಬೆಳ್ಳಿ ದರ ಇಂದು ₹260 ರೂ. ಆಗಿದ್ದು, ನಿನ್ನೆ ₹265 ರೂ. ಇತ್ತು. 8 ಗ್ರಾಂ ಬೆಳ್ಳಿ ಬೆಲೆ ₹2,080 ರೂ. ಆಗಿದ್ದು, ನಿನ್ನೆ ₹2,120 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹40 ರೂ. ಇಳಿಕೆ ಕಂಡಿದೆ. 10 ಗ್ರಾಂ ಬೆಳ್ಳಿ ದರ ಇಂದು ₹2,600 ರೂ. ಆಗಿದ್ದು, ನಿನ್ನೆ ₹2,650 ರೂ. ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹50 ರೂ. ಇಳಿಕೆ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹26,000 ರೂ. ಆಗಿದ್ದು, ನಿನ್ನೆ ₹26,500 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹500 ರೂ. ಇಳಿಕೆ ಕಂಡಿದೆ. ಹಾಗೆಯೇ 1000 ಗ್ರಾಂ ಬೆಳ್ಳಿ ದರ ₹2,60,000 ರೂ. ಆಗಿದ್ದು, ನಿನ್ನೆ ₹2,65,000 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹5,000 ರೂ. ಇಳಿಕೆ ಕಂಡಿದೆ.
ಭಾರತದಲ್ಲಿ ಚಿನ್ನದ ದರ:
ಭಾರತದಲ್ಲಿ ಇಂದು 24K ಚಿನ್ನದ ಬೆಲೆ 15,464 ರೂ., 22K ಚಿನ್ನದ ಬೆಲೆ 14,175 ರೂ., 18K ಚಿನ್ನದ ಬೆಲೆ 11,598 ರೂ. ಆಗಿದೆ. ನಿನ್ನೆಗಿಂತ ಇಂದು ಪ್ರತೀ ಗ್ರಾಂನಲ್ಲಿ 200 ರೂ.ಗಿಂತಲೂ ಕಡಿಮೆಯಾಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ:
ಬೆಂಗಳೂರಿನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ ಇಂದು 2,600 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹26,000 ರೂ., 1000 ಗ್ರಾಂ ಬೆಳ್ಳಿ ಬೆಲೆ 2,60,000 ರೂ. ತಲುಪಿದೆ.
ದೆಹಲಿಯಲ್ಲಿ ಬೆಳ್ಳಿ ದರ:
ದೆಹಲಿಯಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 2,600 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹26,000 ರೂ. ಆಗಿದ್ದು, 1000 ಗ್ರಾಂ ಬೆಳ್ಳಿ ದರ 2,60,000 ರೂ. ಆಗಿದೆ.
ಹೈದರಾಬಾದ್ ಬೆಳ್ಳಿ ದರ:
ಹೈದರಾಬಾದ್‌ನಲ್ಲಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹2,650 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹26,500 ರೂ. ಆಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ಬೆಲೆ ಇಂದು 2,65,000 ರೂ. ಆಗಿದೆ.
ಮುಂಬೈ ಬೆಳ್ಳಿ ದರ
ಮಾಯಾನಗರಿ ಮುಂಬೈನಲ್ಲೂ ಇಂದು 10 ಗ್ರಾಂ ಬೆಳ್ಳಿ ದರ 2,600 ರೂ. ತಲುಪಿದೆ. 100 ಗ್ರಾಂ ಬೆಳ್ಳಿ ಬೆಲೆ ₹26,000 ರೂ., 1000 ಗ್ರಾಂ ಬೆಳ್ಳಿ ಬೆಲೆ 2,60,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ
ಚೆನ್ನೈನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ 2,650 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ ₹26,500 ರೂ. ಆಗಿದೆ. 1000 ಗ್ರಾಂ ಬೆಳ್ಳಿ ದರ ಇಂದು 2,65,000 ರೂ. ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಪ್ರತೀ ಗ್ರಾಂನಲ್ಲಿ 5 ರೂ. ಇಳಿಕೆ ಕಂಡಿದೆ.
MCX ಬೆಳ್ಳಿ ದರ:
ಮಾರ್ಚ್ 19, 2026ರ ಮನಿ ಕಂಟ್ರೋಲ್ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಗುರುವಾರ, 2,41,391ರೂ. ತಲುಪಿದ್ದು, ಹಿಂದಿನ ವಹಿವಾಟಿಗಿಂತ ಇಂದು ಶೇ. 2.74% ಇಳಿಕೆಯಾಗಿದೆ.
ಸ್ಪಾಟ್ ಬೆಳ್ಳಿ ದರ:
ಮಾರ್ಚ್ 19, 2026 ರ GOLDPRICE.ORG ವರದಿ ಪ್ರಕಾರ, ಗುರುವಾರ ಬೆಳ್ಳಿ ಬೆಲೆ 74.59 ಡಾಲರ್ ತಲುಪಿದ್ದು, ಹಿಂದಿನ ವಹಿವಾಟಿಗಿಂತ ಇಂದು 3.72% ಕುಸಿತ ಕಂಡಿದೆ.


Click it and Unblock the Notifications