For Quick Alerts
ALLOW NOTIFICATIONS  
For Daily Alerts

ಸಿಹಿಸುದ್ದಿ: ನ್ಯಾಯಬೆಲೆ ಅಂಗಡಿಯಲ್ಲಿ ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳ ಮಾರಾಟ!

|

ನವದೆಹಲಿ, ಅಕ್ಟೋಬರ್ 28: ಭಾರತದಲ್ಲಿ ಬೆಲೆ ಏರಿಕೆ ಆಘಾತಕ್ಕೆ ಒಳಗಾದ ಗ್ರಾಹಕರಿಗೆ ಇಲ್ಲೊಂದು ಸಂತಸದ ಸುದ್ದಿ. ದೇಶದಲ್ಲಿ 900 ರೂಪಾಯಿ ಸನ್ನಿಹಿತಕ್ಕೆ ಬಂದಿರುವ ಅಡುಗೆ ಅನಿಲಕ್ಕಾಗಿ ಹಣ ಸಂಗ್ರಹಿಸಿಡುವ ಮಧ್ಯಮ ವರ್ಗದ ಮಂದಿಗೆ ಇನ್ನು ಮುಂದೆ ಆ ಕಷ್ಟ ಇರುವುದಿಲ್ಲ. ಪಡಿತರ ಅಂಗಡಿಗಳಲ್ಲಿ ಇತರೆ ಆರ್ಥಿಕ ವಹಿವಾಟುಗಳ ಜೊತೆಗೆ ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪಡೆಯುವುದಕ್ಕೆ ಸಾಧ್ಯವಿದೆ.

 

ಪಡಿತರ ಅಂಗಡಿಗಳ ಆರ್ಥಿಕ ಕಾರ್ಯ ಸಾಧ್ಯತೆಯನ್ನು ಹೆಚ್ಚಿಸುವ ಕ್ರಮಗಳ ಭಾಗವಾಗಿ ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳ ಚಿಲ್ಲರೆ ಮಾರಾಟಕ್ಕೆ ಅನುಮತಿಸಲಾಗುತ್ತಿದೆ. ಇದರ ಜೊತೆಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ಹಣಕಾಸು ಸೇವೆಗಳನ್ನು ನೀಡಲು ಯೋಜಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ರಾಜ್ಯ ಸರ್ಕಾರದ ಅಧೀನದಲ್ಲಿ ನಡೆಸುತ್ತಿರುವ ಪಡಿತರ ಅಂಗಡಿಗಳ ಆರ್ಥಿಕ ಕಾರ್ಯಸಾಧ್ಯತೆ ಹೆಚ್ಚಿಸುವ ಯೋಜನೆ ಹಾಕಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳೊಂದಿಗೆ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಅಧ್ಯಕ್ಷತೆಯ ನಡೆದ ವರ್ಚುವಲ್ ಸಭೆಯಲ್ಲಿ ಪ್ರಸ್ತಾಪಗಳನ್ನು ಮಂಡಿಸಲಾಗಿದೆ. ಈ ಸಭೆಯಲ್ಲಿ ವಿದ್ಯುತ್ ಮತ್ತು ಐಟಿ ಸಚಿವಾಲಯಗಳ ಪ್ರತಿನಿಧಿಗಳು; ಹಣಕಾಸು; ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದ ಸಚಿವರು ಭಾಗವಹಿಸಿದ್ದರು.

ಸಿಹಿಸುದ್ದಿ: ನ್ಯಾಯಬೆಲೆ ಅಂಗಡಿಯಲ್ಲಿ ಸಣ್ಣ LPG ಸಿಲಿಂಡರ್‌ ಮಾರಾಟ!

ಪ್ರಮುಖ ಕಂಪನಿಗಳ ಅಧಿಕಾರಿಗಳ ಉಪಸ್ಥಿತಿ:

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್), ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಮತ್ತು ಸಿಎಸ್‌ಸಿ ಇ-ಗವರ್ನೆನ್ಸ್ ಸರ್ವೀಸಸ್ ಇಂಡಿಯಾ ಲಿಮಿಟೆಡ್ (ಸಿಎಸ್‌ಸಿ) ಅಧಿಕಾರಿಗಳು ವರ್ಚುವಲ್ ಸಭೆಯಲ್ಲಿ ಉಪಸ್ಥಿತರಿದ್ದರು.

ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳ ಚಿಲ್ಲರೆ ಮಾರಾಟ:

ಎಫ್‌ಪಿಎಸ್‌ನ ಆರ್ಥಿಕ ಕಾರ್ಯಸಾಧ್ಯತೆಯನ್ನು ಹೆಚ್ಚಿಸಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಅದರಂತೆ ಎಫ್‌ಪಿಎಸ್ ಮೂಲಕ ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳ ಚಿಲ್ಲರೆ ಮಾರಾಟಕ್ಕೂ ಯೋಜನೆಗಳಿವೆ ಎಂದು ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಹೇಳಿದ್ದಾರೆ.

ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳ ಮಾರಾಟಕ್ಕೆ ಶ್ಲಾಘನೆ:

ಭಾರತದಲ್ಲಿ ಒಂದು ಕಡೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 900 ರೂಪಾಯಿ ಗಡಿಗೆ ಸಮೀಪಿಸುತ್ತಿದೆ. ಇಂಥ ಪರಿಸ್ಥಿತಿಯಲ್ಲಿ ಮಧ್ಯಮ ವರ್ಗದವರು ಹಾಗೂ ಬಡ ಕುಟುಂಬಗಳು ಸಿಲಿಂಡರ್ ಖರೀದಿಸುವುದೇ ದೊಡ್ಡ ಸಮಸ್ಯೆಯಾಗುತ್ತಿದೆ. ಈ ಹಂತದಲ್ಲಿ ನ್ಯಾಯಬೆಲೆ ಅಂಗಡಿಗಳ ಮೂಲಕ ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳ ಚಿಲ್ಲರೆ ಮಾರಾಟ ಮಾಡುವ ಪ್ರಸ್ತಾಪವನ್ನು ತೈಲ ಮಾರುಕಟ್ಟೆ ಕಂಪನಿಗಳ (OMCs) ಪ್ರತಿನಿಧಿಗಳು ಶ್ಲಾಘಿಸಿದ್ದಾರೆ.

 

ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳ ಮಾರಾಟಕ್ಕೆ ಸಂಬಂಧಿಸಿದಂತೆ ಆಸಕ್ತಿ ಹೊಂದಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ ಸಮನ್ವಯದೊಂದಿಗೆ ಅಗತ್ಯ ಬೆಂಬಲ ಒದಗಿಸಲಾಗುವುದು ಎಂದು ತೈಲ ಮಾರುಕಟ್ಟೆ ಕಂಪನಿಗಳ ಪ್ರತಿನಿಧಿಗಳು ತಿಳಿಸಿದ್ದಾರೆ.

ರಾಜ್ಯಗಳಿಗೆ ಸಹಕಾರ ನೀಡುವ ನಿಟ್ಟಿನಲ್ಲಿ ಕ್ರಮ:

ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳ ಮಾರಾಟ ಸಂಬಂಧ ಅಗತ್ಯ ಉಪಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ ರಾಜ್ಯ ಸರ್ಕಾರಗಳು ಮುಂದೆ ಬರಬೇಕು ಎಂದು ಆಹಾರ ಕಾರ್ಯದರ್ಶಿಗಳು ಸೂಚಿಸಿದ್ದಾರೆ. ಸಂಭಾವ್ಯ ಪ್ರಯೋಜನಗಳು, ಎಫ್‌ಪಿಎಸ್‌ನ ಸಾಮರ್ಥ್ಯ ವೃದ್ಧಿ ಮತ್ತು ಈ ಉಪಕ್ರಮಗಳ ಅನುಷ್ಠಾನದಲ್ಲಿ ನೆರವು ನೀಡುವ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿವಿಧ ತಂಡಗಳೊಂದಿಗೆ ಪ್ರತ್ಯೇಕ ಕಾರ್ಯಾಗಾರ, ವೆಬ್‌ನಾರ್‌ಗಳನ್ನು ನಡೆಸಲು ಸಿಎಸ್‌ಸಿಗೆ ಸಲಹೆ ನೀಡಲಾಗಿದೆ.

ಪ್ರಸ್ತುತ ಅಡುಗೆ ಅನಿಲದ ಬೆಲೆ ಎಷ್ಟಿದೆ:

ಕಳೆದ ಅಕ್ಟೋಬರ್ 6ರಂದು ಸಬ್ಸಿಡಿ ಇಲ್ಲದ 14.2 ಕೆ.ಜಿ. ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 15 ರೂ ಏರಿಕೆ ಮಾಡಿರುವುದಾಗಿ ಸರ್ಕಾರಿ ತೈಲ ಕಂಪನಿಗಳು ಘೋಷಿಸಿದವು. ಈ ಬೆಲೆ ಏರಿಕೆಯೊಂದಿಗೆ ದೇಶದ ರಾಜಧಾನಿ ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ ಬೆಲೆ 884.50ರೂ ಇಂದ 899.50 ರೂಪಾಯಿಗೆ ಏರಿಕೆಯಾಗಿದೆ. ಅಕ್ಟೋಬರ್ ಮೊದಲ ದಿನದಂದು ತೈಲ ಕಂಪನಿಗಳು 19 ಕೆ.ಜಿ. ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 43.5 ರೂ ಏರಿಕೆ ಮಾಡಿದ್ದರು. ಇದೀಗ ದೇಶೀಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಲಾಗಿದೆ. ಇದರಿಂದ 5 ಕೆ.ಜಿ, ಸಿಲಿಂಡರ್ ಬೆಲೆ 502 ರೂ ಆಗಿದೆ. ಎರಡು ತಿಂಗಳಿನಲ್ಲಿ ನಾಲ್ಕನೇ ಬಾರಿ ಬೆಲೆ ಏರಿಕೆಯಾಗಿದೆ. ಸೆಪ್ಟೆಂಬರ್ 1ರಂದು ಕೊನೆಯದಾಗಿ ಸಬ್ಸಿಡಿ ಹಾಗೂ ಸಬ್ಸಿಡಿರಹಿತ ಸಿಲಿಂಡರ್ ಬೆಲೆಯನ್ನು 25ರೂ ಏರಿಕೆ ಮಾಡಲಾಗಿತ್ತು.

English summary

Govt proposes sale of small LPG cylinders, offering financial services through ration shops

Small LPG Cylinders Will Started for Consumers, Also Financial Services Through Ration Shops: Read here For More Details.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X