ನವದೆಹಲಿ: ನವದೆಹಲಿಯಲ್ಲಿ (New Delhi) ಈಗಾಗಲೇ ಪ್ರತಿಷ್ಠಿತ "ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026" ನಡೆಯುತ್ತಿದೆ. ಈ ವಿಶೇಷ ಸಭೆಯಲ್ಲಿ ಭಾರತ ಹಲವಾರು ಯೋಜನೆಗಳನ್ನು ಜಾರಿಗೆ ತರಲಿದ್ದು, ಜೊತೆಗೆ ಭಾರತ ಟೆಕ್ನಾಲಜಿ ಯುಗದಲ್ಲಿ ಹೇಗೆ ಮುಂದುವರೆಯುತ್ತಿದೆ ಎಂಬುದನ್ನು ಇಲ್ಲಿ ನೋಡಬಹುದು. ಇದೀಗ ಎಐ ಶೃಂಗಸಭೆ ಕುರಿತು ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಡಾ.ಅಶ್ವಿನಿ ವೈಷ್ಣವ್ (Dr. Ashwini Vaishnav) ಭಾರತದ ಸೋಷಿಯಲ್ ಮೀಡಿಯಾ ಬಳಕೆ (Social Media Rules) ಸಂಬಂಧಿಸಿ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.

ಈಗಾಗಲೇ ಆಸ್ಟ್ರೇಲಿಯಾ ಸೇರಿ ಹಲವು ದೇಶಗಳಲ್ಲಿ ಸೋಷಿಯಲ್ ಮೀಡಿಯಾ ಬಳಕೆಗೆ ವಯಸ್ಸಿನ ನಿರ್ಬಂಧಗಳನ್ನು ಹೇರಲಾಗಿದೆ. ಇದೀಗ ಈ ನಿಯಮವನ್ನು ಭಾರತದಲ್ಲೂ ಚರ್ಚಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಕೇಂದ್ರ ಸಚಿವರು ಹೇಳಿದ್ದೇನು?
ಭಾರತದ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಡಾ.ಅಶ್ವಿನಿ ವೈಷ್ಣವ್ ಅವರು ಮಂಗಳವಾರ ನವದೆಹಲಿಯಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಈ ವೇಳೆ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಬಳಕೆಗೂ ವಯಸ್ಸಿನ ನಿರ್ಬಂಧ, ನೀತಿಗಳನ್ನು ಜಾರಿಗೊಳಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿದೆ ಎಂದು ತಿಳಿಸಿದರು.
ಭಾರತದಲ್ಲೂ ಬರಲಿದೆ ಸೋಷಿಯಲ್ ಮೀಡಿಯಾ ಬಳಕೆಗೆ ನಿರ್ಬಂಧ?
ಅಶ್ವಿನಿ ವೈಷ್ಣವ್ "ಈಗಾಗಲೇ ಅನೇಕ ದೇಶಗಳು ಒಪ್ಪಿಕೊಂಡಿರುವಂತೆ, ಸೋಷಿಯಲ್ ಮೀಡಿಯಾ ಬಳಕೆಗೆ ವಯಸ್ಸಿನ ನಿರ್ಬಂಧ ಸ್ವೀಕಾರಾರ್ಹವಾಗಿದೆ. ಪ್ರಸ್ತುತ ಭಾರತದಲ್ಲೂ ಡೀಪ್‌ಫೇಕ್‌ಗಳು ಮತ್ತು ವಯಸ್ಸು ಆಧಾರಿತ ಸೋಷಿಯಲ್ ಮೀಡಿಯಾ ನಿಯಂತ್ರಣ ತರುವ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ. ಅದಕ್ಕಾಗಿ ಸರಿಯಾದ ಮಾರ್ಗ ಯಾವುದು ಎಂಬುದನ್ನು ಕಂಡುಹಿಡಿಯಲು ಈಗಾಗಲೇ ಮಾತುಕತೆಗಳು ನಡೆಯುತ್ತಿದೆ" ಎಂದು ಹೇಳಿದರು.
ಈಗಾಗಲೇ ದೇಶದಾದ್ಯಂತ ಕೋಟಿಗಟ್ಟಲೆ ಜನರು ಸೋಷಿಯಲ್ ಮೀಡಿಯಾ ಬಳಕೆ ಮಾಡುತ್ತಿದ್ದಾರೆ, ಒಂದು ವೇಲೆ ಹೊಸ ನಿಯಮ ಜಾರಿಗೆ ತಂದರೆ, ಮೆಟಾ (ಫೇಸ್‌ಬುಕ್ ಇನ್‌ಸ್ಟಾಗ್ರಾಂ, ವಾಟ್ಸಾಪ್), ಗೂಗಲ್ (ಯೂಟ್ಯೂಬ್) ಹೀಗೆ ಮುಂತಾದ ಕಂಪನಿಗಳ ಮೇಲೆ ಭಾರೀ ಪ್ರಭಾವ ಬೀರುವ ಸಾಧ್ಯತೆ ಇದೆ.
ಸದ್ಯ ಯಾವುದೇ ಈ ಬಗ್ಗೆ ಅಂತಿಮ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ. ಆದರೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ್ದಾರೆ. ಅಲ್ಲದೇ ಈಗಾಗಲೇ ಹಲವು ದೇಶಗಳು ಮಕ್ಕಳನ್ನು ಸಾಮಾಜಿಕ ಮಾಧ್ಯಮಗಳಿಂದ ದೂರವಿರುವಂತೆ ಮಾಡಲು ಹಲವು ಕ್ರಮಗಳನ್ನು ಕೈಗೊಂಡಿದೆ.
ಆಸ್ಟ್ರೇಲಿಯಾ: ಕಳೆದ ಡಿಸೆಂಬರ್‌ನಲ್ಲಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸೋಷಿಯಲ್ ಮೀಡಿಯಾ ಬಳಕೆ ಮಾಡುವಂತಿಲ್ಲ ಎಂಬ ನಿಯಮ ಜಾರಿಗೆ ತಂದಿತ್ತು. ಇದು ವಿಶ್ವದಲ್ಲೇ ಮೊದಲು ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್ ಮಾಡಿದ ದೇಶವಾಗಿದೆ.
ಡೆನ್ಮಾರ್ಕ್: ಅಲ್ಲದೇ ಕಳೆದ ವರ್ಷ ಅಂತ್ಯದ ವೇಳೆ 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸೋಷಿಯಲ್ ಮೀಡಿಯಾ ಬಳಕೆಗೆ ನಿರ್ಬಂಧ ತರಲಾಯಿತು.
ಸ್ಪೇನ್: ಅಲ್ಲದೇ ಸ್ಪೇನ್ ಕೂಡಾ ಈ ತಿಂಗಳು 16 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ನಿಷೇಧಿಸುವುದಾಗಿ ಘೋಷಣೆ ಮಾಡಿದೆ.
More From GoodReturns

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

T20 World Cup: ಟಿ20 ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 96 ರನ್ಗಳ ಗೆಲುವು...ತಂಡಕ್ಕೆ ಸಿಕ್ಕ ಬಹುಮಾನಗಳೇನು?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate Today: ಬೆಳ್ಳಿ ದರಕ್ಕೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಬಿಸಿ! ಬೆಲೆ ಭಾರೀ ಏರಿಕೆ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications