ಬೆಂಗಳೂರು, ಏಪ್ರಿಲ್ 5: ಆಗ್ನೇಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ಹೌರಾ ಮತ್ತು ಯಶವಂತಪುರ ನಡುವೆ ವಾರಕ್ಕೊಮ್ಮೆ ವಿಶೇಷ ರೈಲುಗಳನ್ನು ಓಡಿಸಲಿದೆ.
ರೈಲು ಸಂಖ್ಯೆ 02863 ಹೌರಾ-ಯಶವಂತಪುರ ವೀಕ್ಲಿ ಎಕ್ಸ್‌ಪ್ರೆಸ್ ವಿಶೇಷ ರೈಲು ಏಪ್ರಿಲ್ 11 ರಂದು ಮಧ್ಯಾಹ್ನ 12.40 ಕ್ಕೆ ಹೌರಾದಿಂದ ಹೊರಟು ಏಪ್ರಿಲ್ 14 ರಂದು ಬೆಳಿಗ್ಗೆ 12.15 ಕ್ಕೆ ಯಶವಂತಪುರವನ್ನು ತಲುಪುತ್ತದೆ. ರೈಲು ಸಂಖ್ಯೆ 02864 ಯಶವಂತಪುರ-ಹೌರಾ ವೀಕ್ಲಿ ಎಕ್ಸ್‌ಪ್ರೆಸ್ ವಿಶೇಷವು ಏಪ್ರಿಲ್ 6 ಮತ್ತು 13 ರಂದು ಬೆಳಿಗ್ಗೆ 5 ಗಂಟೆಗೆ ಯಶವಂತಪುರದಿಂದ ಹೊರಟು ಕ್ರಮವಾಗಿ ಏಪ್ರಿಲ್ 15 ಮತ್ತು 22 ರಂದು ಮಧ್ಯಾಹ್ನ 1.25 ಕ್ಕೆ ಹೌರಾವನ್ನು ತಲುಪುತ್ತದೆ.

ಚಿಕ್ಕಬಳ್ಳಾಪುರ ಮಾರ್ಗ ಹೊಸ ಸಮಯ:
ರೈಲು ಸಂಖ್ಯೆ 06532 ಚಿಕ್ಕಬಳ್ಳಾಪುರ-ಬೆಂಗಳೂರು ಕಂಟೋನ್ಮೆಂಟ್ ಮೆಮು ರೈಲಿನ ಸಮಯವನ್ನು ಪರಿಷ್ಕರಿಸಲಾಗಿದೆ. ಈ ರೈಲು ಚಿಕ್ಕಬಳ್ಳಾಪುರದಿಂದ ಸಂಜೆ 6.45ಕ್ಕೆ ಹೊರಟು ರಾತ್ರಿ 9 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಇದು ನಂದಿ ಹಾಲ್ಟ್, ವೆಂಕಟಗಿರಿ ಕೋಟೆ, ಆವತಿಹಳ್ಳಿ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರೈಲು ನಿಲ್ದಾಣ (ಹಾಲ್ಟ್), ದೊಡ್ಡಜಾಲ, ಬೆಟ್ಟಹಲಸೂರು, ಯಲಹಂಕ ಮತ್ತು ಬೈಯಪ್ಪನಹಳ್ಳಿಯಲ್ಲಿ ನಿಲ್ಲುತ್ತದೆ.
ಮಾರ್ಗ ಬದಲಾವಣೆ:
ಸೇಲಂ ರೈಲ್ವೇ ವಿಭಾಗದಲ್ಲಿ ನಿಗದಿತ ಸಮಯದ ಕಾರಿಡಾರ್ ಬ್ಲಾಕ್‌ಗಳಿಂದಾಗಿ ಎರ್ನಾಕುಲಂ-ಕೆಎಸ್ಆರ್ ಬೆಂಗಳೂರು ರೈಲನ್ನು ಏಪ್ರಿಲ್‌ನಲ್ಲಿ ತಿರುಗಿಸಲಾಗುತ್ತದೆ. ಏಪ್ರಿಲ್ 6, 9, 11, 13, 21, ಮತ್ತು 24 ರಂದು ಎರ್ನಾಕುಲಂನಿಂದ ಹೊರಡುವ ರೈಲು ಸಂಖ್ಯೆ 12678 ಎರ್ನಾಕುಲಂ-ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್, ಕೊಯಮತ್ತೂರು ಜಂಕ್ಷನ್‌ನಲ್ಲಿ ನಿಲುಗಡೆಯನ್ನು ಬಿಟ್ಟು ಪೊದನೂರ್-ಇರುಗೂರ್ (ಏಕ ಮಾರ್ಗ) ಮೂಲಕ ಚಲಿಸುತ್ತದೆ.


Click it and Unblock the Notifications