ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ಆನ್ ಲೈನ್ ಬ್ಯಾಂಕಿಂಗ್ ಸೇವೆಯಲ್ಲಿ ಮಂಗಳವಾರ ಬೆಳಗ್ಗೆ (ಅಕ್ಟೋಬರ್ 13, 2020) ವ್ಯತ್ಯಯ ಆಗಿದೆ. ಈ ಬಗ್ಗೆ ಬ್ಯಾಂಕ್ ನಿಂದ ಟ್ವೀಟ್ ಮಾಡಿದ್ದು, ಎಟಿಎಂ ಹಾಗೂ ಪಿಒಎಸ್ (ಪಾಯಿಂಟ್ ಆಫ್ ಸೇಲ್ಸ್) ಮಶೀನ್ ಗಳಿಗೆ ಯಾವುದೇ ಸಮಸ್ಯೆ ಆಗಿಲ್ಲ ಎಂದು ಮಾಹಿತಿ ನೀಡಲಾಗಿದೆ.
"ನಮ್ಮ ಗ್ರಾಹಕರಿಗೆ ಸಹಕರಿಸಲು ಮನವಿ ಮಾಡುತ್ತೇವೆ. ಸಹಜವಾಗಿ ಸೇವೆಗಳು ಸದ್ಯದಲ್ಲೇ ಪುನರಾರಂಭ ಆಗಲಿವೆ," ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಟ್ವೀಟ್ ಮಾಡಲಾಗಿದೆ. ದೇಶದ ಅತಿ ದೊಡ್ಡ ಬ್ಯಾಂಕ್ ಎಸ್ ಬಿಐ. ಇಂಟರ್ ಮಿಟೆಂಟ್ ಸಂಪರ್ಕ ಸಮಸ್ಯೆಯಿಂದಾಗಿ ನಮ್ಮ ಗ್ರಾಹಕರಿಗೆ ಇಂದು (13.10.20) ಕೋರ್ ಬ್ಯಾಂಕಿಂಗ್ ವ್ಯವಸ್ಥೆ ದೊರೆಯುವುದು ವಿಳಂಬ ಆಗುವಂತೆ ಮಾಡಿದೆ ಎಂದು ತಿಳಿಸಿದೆ.

ಎಟಿಎಂಗಳು ಮತ್ತು ಪಿಒಎಸ್ ಮಶೀನ್ ಗಳನ್ನು ಹೊರತುಪಡಿಸಿ ಉಳಿದೆಲ್ಲ ಚಾನೆಲ್ ಗಳು ಇದರಿಂದ ಸಮಸ್ಯೆ ಆಗಲಿವೆ ಎಂದು ಮಾಹಿತಿ ನೀಡಿದೆ. ಮುಂದುವರಿದು, ಮಧ್ಯಾಹ್ನಕ್ಕೆ ಮುನ್ನ ನಿಮಗೆ ಮುಂಚಿನಂತೆಯೇ ಸೇವೆ ಒದಗಿಸಲು ಸಾಧ್ಯವಾಗಬಹುದು ಎಂಬ ಭರವಸೆ ಇದೆ ಎಂದು ಹೇಳಿದೆ. ಈಗ ಆಗಿರುವ ಸಮಸ್ಯೆಗೆ ವಿಷಾದಿಸುತ್ತೇವೆ, ದಯವಿಟ್ಟು ನಮ್ಮೊಂದಿಗೆ ಸಹಕರಿಸಿ ಎಂದು ಎಸ್ ಬಿಐ ಮನವಿ ಮಾಡಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications