ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ತನ್ನ ಹೆಸರು ದುರುಪಯೋಗ ಮಾಡಿದ ಬಗ್ಗೆ ಬೆಂಗಳೂರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಅಮೆರಿಕದಲ್ಲಿ ನಡೆದ ಎರಡು ಕಾರ್ಯಕ್ರಮಗಳಲ್ಲಿ ತಮ್ಮ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸುಧಾಮೂರ್ತಿ ಆರೋಪಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಮಿಂಟ್ ವರದಿ ಮಾಡಿದೆ. ಇನ್ಫೋಸಿಸ್ ಫೌಂಡೇಶನ್‌ನ ಲೇಖಕಿ ಮತ್ತು ಅಧ್ಯಕ್ಷೆ ಸುಧಾ ಮೂರ್ತಿ ಅವರು ಬೆಂಗಳೂರು ಪೊಲೀಸರನ್ನು ಸಂಪರ್ಕಿಸಿದ್ದಾರೆ. ಯುಎಸ್‌ನಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಜನರನ್ನು ವಂಚಿಸಲು ತನ್ನ ಹೆಸರನ್ನು ದುರ್ಬಳಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

ಈ ಸಂಬಂಧ ಬೆಂಗಳೂರು ಪೊಲೀಸರು ಲಾವಣ್ಯ ಮತ್ತು ಶೃತಿ ಎಂಬ ಇಬ್ಬರು ಮಹಿಳೆಯರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವರದಿಯ ಪ್ರಕಾರ, ಐಪಿಸಿ ಸೆಕ್ಷನ್ 419 ಮತ್ತು 420 ಅಡಿಯಲ್ಲಿ, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 (ಸಿ) ಮತ್ತು 66 (ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೂರ್ತಿ ಅವರ ಕಾರ್ಯನಿರ್ವಾಹಕ ಸಹಾಯಕಿ ಮಮತಾ ಸಂಜಯ್ ಶುಕ್ರವಾರ ದೂರು ದಾಖಲಿಸಿದ್ದಾರೆ.
ಮತ್ತೊಂದು ಘಟನೆಯಲ್ಲಿ, ಶ್ರುತಿ ಎಂಬ ಮಹಿಳೆ, ಸುಧಾ ಮೂರ್ತಿ ಯುಎಸ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುತ್ತಾರೆ ಎಂದು ಹೇಳಿಕೊಂಡು ಜನರಿಂದ 40 ಡಾಲರ್ ಸಂಗ್ರಹಿಸಿದ್ದಾರೆ. ಸೆಪ್ಟೆಂಬರ್ 26 ರಂದು 'ಡಾ. ಸುಧಾ ಮೂರ್ತಿರನ್ನು ಭೇಟಿ ಮಾಡಿ' ಎಂದು ತೋರಿಸುವ ಜಾಹೀರಾತನ್ನು ಮೂರ್ತಿ ಕಚೇರಿ ನೋಡಿದೆ.
ಪ್ರಕರಣದ ಕುರಿತು ಮಾತನಾಡಿದ ಪೊಲೀಸ್ ಅಧಿಕಾರಿಯೊಬ್ಬರು, "ಈ ಮಹಿಳೆಯರು ಯುಎಸ್‌ಎನಲ್ಲಿದ್ದಾರೆಯೇ ಅಥವಾ ಭಾರತದಲ್ಲಿದ್ದಾರೆಯೇ ಎಂದು ನಾವು ಇನ್ನೂ ಖಚಿತಪಡಿಸಿಕೊಳ್ಳಬೇಕಾಗಿದೆ, ತನಿಖೆ ನಡೆಯುತ್ತಿದೆ," ಎಂದು ಹೇಳಿದ್ದಾರೆ. ಈ ಪ್ರಕರಣದಲ್ಲಿ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.


Click it and Unblock the Notifications