ಬೆಂಗಳೂರು, ಜುಲೈ 15: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದು ಮಾಡಲು ದೇಶದ ಸರ್ವೋಚ್ಛ ನ್ಯಾಯಲಯ ನಿರಾಕರಿಸಿದೆ.
ಕೇಂದ್ರಿಯ ತನಿಖಾ ದಳ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಡಿಕೆ ಶಿವಕುಮಾರ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ನಿರಾಕರಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ನೀಡಿರುವ ಈ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಪ್ರಕರಣದ ಹಿನ್ನೆಲೆ:
ಹಿಂದೆ ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಡಿಕೆ ಶಿವಕುಮಾರ್ ಅವರು ಇಂಧನ ಸಚಿವರಾಗಿದ್ದಾಗ 2013 ರ ಏಪ್ರಿಲ್ 1 ರಿಂದ 2018 ರ ಏಪ್ರಿಲ್ 30 ಅವಧಿಯಲ್ಲಿ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ. 74.93 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಗಳಿಸಿದ್ದಾರೆ ಎಂದು ಸಿಬಿಐ ಆರೋಪಿ ಪ್ರಕರಣ ದಾಖಲಿಸಿತ್ತು.
2017 ರಲ್ಲಿ ಶಿವಕುಮಾರ್ ಮನೆ ಮತ್ತು ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧ ಕಾರ್ಯಾಚರಣೆಗಳ ಆಧಾರದ ಮೇಲೆ, ಜಾರಿ ನಿರ್ದೇಶನಾಲಯ ಕೂಡ ವಿರುದ್ಧ ಡಿಕೆ ಶಿವಕುಮಾರ್ ವಿರುದ್ಧ ತನಿಖೆಯನ್ನು ಪ್ರಾರಂಭಿಸಿತ್ತು. ಇ.ಡಿ ತನಿಖೆಯ ಆಧಾರದ ಮೇಲೆ ಸಿಬಿಐ ಅವರ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ರಾಜ್ಯ ಸರ್ಕಾರವು 2019 ರ ಸೆಪ್ಟೆಂಬರ್ 25 ರಂದು ಅನುಮತಿ ನೀಡಿತ್ತು. ಅದರಂತೆ, ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರ ಅಕ್ಟೋಬರ್ 3 ರಂದು ಎಫ್ಐಆರ್ ದಾಖಲಿಸಿತ್ತು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications