ಕೊರೊನಾವೈರಸ್ ಲಾಕ್ಡೌನ್ದಿಂದಾಗಿ ಆಹಾರ ವಿತರಣಾ ಕಂಪನಿ ಸ್ವಿಗ್ಗಿ ಕೂಡ ನಷ್ಟವನ್ನು ಅನುಭವಿಸುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿ 1,100 ಉದ್ಯೋಗಿಗಳನ್ನು ವಜಾಗೊಳಿಸಲಾಗುವುದು ಎಂದು ಸೋಮವಾರ ತಿಳಿಸಿದೆ.
''ಇಂದು ಸ್ವಿಗ್ಗಿಗೆ ಅತ್ಯಂತ ಬೇಸರವಾದ ದಿನ. ನಮ್ಮ ಕಂಪನಿಯ ಸುಮಾರು 13 ಪರ್ಸೆಂಟ್ರಷ್ಟು ಉದ್ಯೋಗಿಗಳನ್ನು ವಜಾಗೊಳಿಸುತ್ತಿದ್ದೇವೆ ಎಂದು ಸೋಮವಾರ ತನ್ನ ಉದ್ಯೋಗಿಗಳಿಗೆ ಕಳುಹಿಸಿರುವ ಇ-ಮೇಲ್ನಲ್ಲಿ ಸ್ವಿಗ್ಗಿಯ ಸಹ ಸಂಸ್ಥಾಪಕ ಮತ್ತು ಸಿಇಒ ಶ್ರೀಹರ್ಷ ಮಜೆಟಿ ಅವರು ತಿಳಿಸಿದ್ದಾರೆ.

ಕೋವಿಡ್-19 ಏಕಾಏಕಿ ಪ್ರಾರಂಭವಾದಾಗಿನಿಂದ ಕಂಪನಿಯು ತನ್ನ ಅಡುಗೆ ಸೌಲಭ್ಯಗಳನ್ನು ತಾತ್ಕಾಲಿಕವಾಗಿ ಅಥವಾ ಶಾಶ್ವತವಾಗಿ ಮುಚ್ಚಲು ಪ್ರಾರಂಭಿಸಿದೆ ಎಂದು ಅವರು ಹೇಳಿದರು.
"ದುರದೃಷ್ಟವಶಾತ್ ಮುಂದಿನ ಕೆಲವು ದಿನಗಳಲ್ಲಿ ನಗರಗಳು ಮತ್ತು ಪ್ರಧಾನ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ವಿವಿಧ ಶ್ರೇಣಿಯ ನಮ್ಮ ಕಂಪನಿಯ 1,100 ಉದ್ಯೋಗಿಗಳನ್ನು ಕೈ ಬಿಡುತ್ತಿದ್ದೇವೆ ಎಂದು ಶ್ರೀಹರ್ಷ ತಮ್ಮ ಕಂಪನಿಯ ಬ್ಲಾಗ್ನಲ್ಲಿ ಬರೆದಿದ್ದಾರೆ.
ಇತ್ತೀಚೆಗಷ್ಟೇ ಜೊಮಾಟೊ ಕೂಡ ತನ್ನ ಕಂಪನಿಯ 13 ಪರ್ಸೆಂಟ್ ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಸ್ವಿಗ್ಗಿ ಕೂಡ ಅದೇ ಹಾದಿಯನ್ನು ತುಳಿದಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications