ನವದೆಹಲಿ, ಜುಲೈ 11: ಭಾರತದಲ್ಲಿ ಆಪಲ್‌ನ ಪೂರೈಕೆದಾರ ಕಾರ್ಖಾನೆಯನ್ನು ಸ್ವಾಧೀನಪಡಿಸಿಕೊಳ್ಳುವ ಒಪ್ಪಂದವನ್ನು ಟಾಟಾ ಗ್ರೂಪ್ ಮುಗಿಸುತ್ತಿದ್ದು, ಆಗಸ್ಟ್ ವೇಳೆಗೆ ಕಾರ್ಖಾನೆಯನ್ನು ಸ್ವಾಧೀನಪಡಿಸಿಕೊಳ್ಳಲಿದೆ. ಒಂದು ವೇಳೆ ಒಪ್ಪಂದ ಮುಗಿದರೆ ಭಾರತದಲ್ಲೇ ಮೊದಲ ಬಾರಿ ಐಫೋನ್‌ಗಳನ್ನು ಜೋಡಿಸಲು ಟಾಟಾ ಗ್ರೂಪ್ ಪ್ರಾರಂಭಿಸಲಿದೆ.
ಬ್ಲೂಮ್‌ಬರ್ಗ್ ಪ್ರಕಾರ, ಟಾಟಾ ಗ್ರೂಪ್ ಕರ್ನಾಟಕದಲ್ಲಿ ವಿಸ್ಟ್ರಾನ್ ಕಾರ್ಪೊರೇಷನ್ ಕಾರ್ಖಾನೆಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎನ್ನಲಾಗಿದೆ. ಈ ಕಾರ್ಖಾನೆಯು 10,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದ್ದು, $600 ಮಿಲಿಯನ್‌ಗಿಂತಲೂ ಹೆಚ್ಚು ಮೌಲ್ಯವನ್ನು ಹೊಂದಿದೆ. ಪ್ರಸ್ತುತ ಐಫೋನ್ 14 ಮಾದರಿಯನ್ನು ಜೋಡಿಸುತ್ತದೆ.

ಮಾರ್ಚ್ 2024 ಕ್ಕೆ ಕೊನೆಗೊಳ್ಳುವ ಹಣಕಾಸಿನ ವರ್ಷದಲ್ಲಿ $1.8 ಶತಕೋಟಿ ಡಾಲರ್ ಮೌಲ್ಯದ ಐಫೋನ್‌ಗಳನ್ನು ಸಾಗಿಸಲು ವಿಸ್ಟ್ರಾನ್ ಕಾರ್ಪ್ ಯೋಜಿಸಿದೆ. ಮುಂದಿನ ವರ್ಷದ ವೇಳೆಗೆ ಕಾರ್ಖಾನೆಯ ಕಾರ್ಯಪಡೆಯನ್ನು ಮೂರು ಪಟ್ಟು ಹೆಚ್ಚಿಸಲಿದೆ. ಕಾರ್ಖಾನೆಯನ್ನು ಸ್ವಾಧೀನಪಡಿಸಿಕೊಂಡ ನಂತರ ಟಾಟಾ ಗ್ರೂಪ್ ಈ ಯೋಜನೆಗಳನ್ನು ಮುಂದುವರೆಸಬಹುದು ಎಂದು ಬ್ಲೂಮ್‌ಬರ್ಗ್ ವರದಿ ಹೇಳಿದೆ.
ದೇಶದಲ್ಲಿ ಉತ್ಪಾದನೆಯನ್ನು ಉತ್ತೇಜಿಸಲು ಭಾರತ ಸರ್ಕಾರವು ಇತ್ತೀಚಿನ ವರ್ಷಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಪರಿಚಯಿಸಿದೆ. ಮತ್ತೊಂದೆಡೆ, ಆಪಲ್ ತನ್ನ ಐಫೋನ್ ಉತ್ಪಾದನೆಯನ್ನು ಚೀನಾವನ್ನು ಮೀರಿ ದಕ್ಷಿಣ ಏಷ್ಯಾದ ಇತರ ದೇಶಗಳಿಗೆ ಮಹತ್ವ ನೀಡಲು ಪ್ರಯತ್ನಿಸುತ್ತಿದೆ. ಇತರ ಪ್ರಮುಖ ಆಪಲ್ ಪೂರೈಕೆದಾರರಾದ ಫಾಕ್ಸ್‌ಕಾನ್ ಗ್ರೂಪ್ ಮತ್ತು ಪೆಗಾಟ್ರಾನ್ ಕಾರ್ಪೊರೇಷನ್ ಕೂಡ ಇತ್ತೀಚೆಗೆ ತಮ್ಮ ಉತ್ಪಾದನೆಯನ್ನು ಹೆಚ್ಚಿಸಿವೆ.
ಟಾಟಾ ಗ್ರೂಪ್‌ನಿಂದ ಐಫೋನ್‌ಗಳ ಉತ್ಪಾದನೆಯು ಇತರ ಜಾಗತಿಕ ಕಂಪನಿಗಳನ್ನು ಚೀನಾದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಭಾರತದಲ್ಲಿ ಉತ್ಪಾದನೆ ಹೆಚ್ಚಳಕ್ಕೆ ಕಾರಣವಾಗಬಹುದು. ಟ್ರೆಂಡ್‌ಫೋರ್ಸ್‌ನ ಹಿಂದಿನ ವರದಿಯಂತೆ ಮುಂಬರುವ ಐಫೋನ್ 15 ಮತ್ತು ಐಫೋನ್ 15 ಪ್ಲಸ್ ಮಾದರಿಗಳನ್ನು ಟಾಟಾ ಗ್ರೂಪ್ ಭಾರತದಲ್ಲಿ ತಯಾರಿಸಬಹುದು. ಟಾಟಾ ಗ್ರೂಪ್ ಸಣ್ಣ ಆರ್ಡರ್‌ಗಳನ್ನು ಸ್ವೀಕರಿಸುತ್ತದೆ ಅಂದರೆ ಕಂಪನಿಯು ಐಫೋನ್ 15 ಮತ್ತು ಐಫೋನ್ 15 ಪ್ಲಸ್‌ಗಾಗಿ ಸಣ್ಣ ಆರ್ಡರ್‌ಗಳನ್ನು ಮಾತ್ರ ಪಡೆಯುತ್ತದೆ ಎಂದು ವರದಿ ಹೇಳಿತ್ತು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications