ಚೀನಾದ ಕಿರು ವೀಡಿಯೋ ಅಪ್ಲಿಕೇಶನ್ ಟಿಕ್‌ಟಾಕ್ ಅನ್ನು ನಿಷೇಧಿಸಿದ ನಂತರ ಭಾರತ ಸರ್ಕಾರವು ಮೂಲ ಕಂಪನಿ ಬೈಟ್‌ಡಾನ್ಸ್‌ನ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿದೆ. ತೆರಿಗೆ ವಂಚನೆ ಆರೋಪದ ಮೇಲೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಕಾರಣದಿಂದಾಗಿ, ಭಾರತ ಸರ್ಕಾರವು ಭಾರತದಲ್ಲಿ ಬೈಟ್‌ಡ್ಯಾನ್ಸ್‌ನ ಬ್ಯಾಂಕ್ ಖಾತೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ.
ತನ್ನ ಕಾರ್ಯಾಚರಣೆ ಮೇಲೆ ಪರಿಣಾಮ ಬೀರಬಹುದು ಎಂಬ ಕಾರಣಕ್ಕಾಗಿ ಈ ಕ್ರಮವನ್ನು ವಿರೋಧಿಸಿ ಬೈಟ್‌ಡ್ಯಾನ್ಸ್ ಮುಂಬೈ ಹೈಕೋರ್ಟ್ ಮೊರೆ ಹೋಗಿದೆ.

ಕಳೆದ ವರ್ಷ ಚೀನಾದೊಂದಿಗಿನ ಗಡಿ ಸಂಘರ್ಷದ ಬಳಿಕ ಬೈಟ್‌ಡ್ಯಾನ್ಸ್ ಒಡೆತನದ ಟಿಕ್‌ಟಾಕ್ ಅನ್ನು ಭಾರತದಲ್ಲಿ ನಿಷೇಧಿಸಲಾಯಿತು. ಇದಾದ ಬಳಿಕ ಕಂಪನಿಯು ಉದ್ಯೋಗಿಗಳನ್ನು ಕಡಿತಗೊಳಿಸಿತ್ತು. ಇನ್ನೂ ಕಂಪನಿಯಲ್ಲಿ ಸುಮಾರು 1,300 ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ.
ಬೈಟ್‌ಡ್ಯಾನ್ಸ್ ಕಂಪನಿಯು ಆನ್‌ಲೈನ್ ಜಾಹಿರಾತಿಗೆ ಸಂಬಂಧಿಸಿದಂತೆ ವ್ಯವಹಾರದಲ್ಲಿ ಮಾರ್ಚ್ 2021ರಲ್ಲಿ ತೆರಿಗೆ ವಂಚನೆ ಮಾಡಿರುವುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಹೀಗಾಗಿ ಬೈಟ್‌ಡ್ಯಾನ್ಸ್ ಭಾರತದಲ್ಲಿ ಸಿಟಿಬ್ಯಾಂಕ್ ಮತ್ತು ಎಚ್‌ಎಸ್‌ಬಿಸಿ ಬ್ಯಾಂಕ್‌ಗಳಲ್ಲಿ ಹೊಂದಿರುವ ಖಾತೆಗಳನ್ನು ಮಾರ್ಚ್ ಮಧ್ಯಭಾಗದಿಂದ ನಿರ್ಬಂಧಿಸಲಾಗಿದೆ.
ಎರಡು ಬ್ಯಾಂಕ್ ಖಾತೆಗಳು ಅಷ್ಟೇ ಅಲ್ಲದೆ ತೆರಿಗೆ ಗುರುತಿನ ಸಂಖ್ಯೆ ಹೊಂದಿರುವ ಇತರ ಬ್ಯಾಂಕ್ ಖಾತೆಗಳಿಂದಲೂ ಹಣ ವಾಪಸ್ ಪಡೆಯಲು ಕಂಪನಿಗೆ ಅವಕಾಶ ನೀಡಬಾರದು ಎಂದು ಸಿಟಿಬ್ಯಾಂಕ್ ಮತ್ತು ಎಚ್‌ಎಸ್‌ಬಿಸಿ ಬ್ಯಾಂಕ್‌ಗಳಿಗೆ ಅಧಿಕಾರಿಗಳು ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.
More From GoodReturns

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Bank Holidays: ಮಾರ್ಚ್ನಲ್ಲಿ ಬ್ಯಾಂಕ್‌ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Rate Today: ಬೆಳ್ಳಿ ದರಕ್ಕೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಬಿಸಿ! ಬೆಲೆ ಭಾರೀ ಏರಿಕೆ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

ಎಲ್ಲ ಹಣವನ್ನೂ ಒಂದೇ ಬ್ಯಾಂಕ್ನಲ್ಲಿ ಇಡ್ತಿದ್ದೀರಾ? ಒಂದು ತಪ್ಪು ನಿಮ್ಮ ಸಂಪೂರ್ಣ ಉಳಿತಾಯಕ್ಕೆ ಅಪಾಯ!

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications