ರಾಜ್ಯದಲ್ಲಿ ಕಳೆದ ತಿಂಗಳಿಡೀ ಮೋಡ ಕವಿದ ವಾತಾವರಣ, ಮಳೆ (Rain) ವಾತಾವರಣವೇ ಇತ್ತು. ಆದ್ರೆ ಇದೀಗ ನಿಜವಾದ ಚಳಿಗಾಲ (Winter) ರಾಜ್ಯದಲ್ಲಿ ಆರಂಭವಾಗಿದೆ ಅಂತಾನೇ ಹೇಳಬಹುದು. ಬೆಂಗಳೂರಿನಲ್ಲಂತೂ ಈ ತಿಂಗಳ ಆರಂಭದಿಂದಲೂ ವಿಪರೀತ ಚಳಿ ಇದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಇನ್ನೂ ಚಳಿ ಆರಂಭವಾಗಿರಲಿಲ್ಲ. ಆದ್ರೆ ಇದೀಗ ಕರಾವಳಿ ಜಿಲ್ಲೆಗಳಲ್ಲೂ ಚಳಿ ಹೆಚ್ಚಾಗಿದೆ. ರಾಜ್ಯದಲ್ಲಿ ಕೆಲವು ದಿನಗಳಿಂದ ಶುಷ್ಕ ವಾತಾವರಣ ಇತ್ತು. ಆದರೆ ಇದೀಗ ಮೈಕೊರೆಯುವಂತೆ ಚಳಿ ಆರಂಭವಾಗಿದೆ.

ಇದೀಗ ಮಳೆ ಅಲರ್ಟ್ ನೀಡುತ್ತಿದ್ದ ಭಾರತೀಯ ಹವಾಮಾನ ಇಲಾಖೆ, ರಾಜ್ಯದಲ್ಲಿ ತೀವ್ರ ಶೀತಗಾಳಿ ಬೀಸಲಿದೆ ಎಂದು ಎಚ್ಚರಿಕೆ ನೀಡಿದೆ. ಸದ್ಯ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಶೀತಗಾಳಿ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮುಂದಿನ ಎರಡು ವಾರಗಳಲ್ಲಿ ತಾಪಮಾನವು 7 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆಯಾಗಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಈ ಶೀತ ಗಾಳಿಗಳು ಸಸ್ಯಗಳ ಮೇಲೆ ಪರಿಣಾಮ ಬೀರುವುದಲ್ಲದೇ, ಜನರ ಆರೋಗ್ಯದ ಮೇಲೂ ಪರಿಣಾಮ ಬೀರಲಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಈ ಜಿಲ್ಲೆಗಳಲ್ಲಿ ಶೀತಗಾಳಿ!
ಮುಂದಿನ 3 ದಿನಗಳಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ವಿಜಯಪುರ, ಬೆಳಗಾವಿ, ಬೀದರ್ ಕಲಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಶೀತ ಗಳಿ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಅಲ್ಲದೇ ನಂತರ ಕನಿಷ್ಠ ತಾಪಮಾನ ಇರಬಹುದು ಎನ್ನಲಾಗಿದೆ.
ಈ ಜಿಲ್ಲೆಗಳಲ್ಲಿ ಒಣಹವೆ!
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಕೋಲಾರ, ರಾಮನಗರ, ಶಿವಮೊಗ್ಗ, ಕೊಡಗು, ಮೈಸೂರು, ವಿಜಯನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ಮಂಡ್ಯ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿಯೂ ಒಣ ಹವೆ ಇರಲಿದೆ ಎಂದು ಸೂಚನೆ ನೀಡಲಾಘಿದೆ, ಆದರೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಜೊತೆಗೆ ಚಳಿ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನ ಹವಾಮಾನ:
ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಚಳಿ ಇದೆ. ಇದೀಗ ಕೆಲವು ದಿನಗಳವರೆಗೆ ಚಳಿ ಮುಂದುವರೆಯಲಿದ್ದು, ಇಂದೂ ಕೂಡಾ ಮಂಜು ಮುಸುಕಿದ ವಾತಾವರಣ ಇರಲಿದೆ ಎನ್ನಲಾಗಿದೆ. ಅಲ್ಲದೇ ದಿನ ಹೋದಂತೆ ಚಳಿಯ ಪ್ರಮಾಣವೂ ಹೆಚ್ಚಾಗಲಿದೆ. ಗಾಳಿಯ ವೇಗ ಪ್ರತೀ ಗಂಟೆಗೆ 11 ಕಿ.ಮೀ ವೇಗ ಇರಲಿದೆ ಎಂದು ವರದಿಯಾಗಿದೆ. ಹಾಗೇ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸದ್ಯ ಮಳೆ ಸೂಚನೆ ಎಲ್ಲೂ ಇರದ ಕಾರಣ, ಚಳಿ ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೇ ಆ ಸಂದರ್ಭದಲ್ಲಿ ಜನರು ಆರೋಗ್ಯದ ಬಗ್ಗೆ ಜಾಗೃತೆ ವಹಿಸುವುದು ಬಹಳ ಮುಖ್ಯ.


Click it and Unblock the Notifications