ಭಾರತದ ಆರ್ಥಿಕ ಬೆಳವಣಿಗೆ ನಿಧಾನವಾಗಿದೆ ಹೊರತು ಕುಸಿದಿಲ್ಲ: ನಿರ್ಮಲಾ ಸೀತಾರಾಮನ್

ದೇಶದ ಆರ್ಥಿಕ ಬೆಳವಣಿಗೆಯ ಪ್ರಗತಿ ನಿಧಾನವಾಗಿದೆ ಹೊರತು ಭಾರತದ ಆರ್ಥಿಕತೆ ಕುಸಿದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ರಾಜ್ಯಸಭೆಗೆ ತಿಳಿಸಿದ್ದಾರೆ.

ದೇಶದ ಆರ್ಥಿಕ ಪರಿಸ್ಥಿತಿಗೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಪ್ರತಿ ಪಕ್ಷಗಳ ಆರೋಪಗಳಿಗೆ ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಮನ್, ದೇಶದಲ್ಲಿ ಆರ್ಥಿಕ ಹಿಂಜರಿತವಿಲ್ಲ, ಮುಂದೆಯೂ ಇರುವುದಿಲ್ಲ. ಬೇಕಿದ್ದರೆ ನಾವು ಕೈಗೊಂಡ ಕ್ರಮಗಳ ಬಗ್ಗೆ ದಾಖಲೆ ಮುಂದಿಡುವೆ ಎಂದಿದ್ದಾರೆ.

ಭಾರತದ ಆರ್ಥಿಕ ಬೆಳವಣಿಗೆ ನಿಧಾನವಾಗಿದೆ ಹೊರತು ಕುಸಿದಿಲ್ಲ: FM

ಭಾರತದ ಜಿಡಿಪಿ ಬೆಳವಣಿಗೆ ದರ 2009 ರಿಂದ 2014ರ ಅವಧಿಯಲ್ಲಿ 189.5 ಶತಕೋಟಿ ಡಾಲರ್ ಇದ್ದ ವಿದೇಶಿ ನೇರ ಹೂಡಿಕೆ 2019ರಲ್ಲಿ 283.9 ಶತಕೋಟಿ ಡಾಲರ್ ಆಗಿದೆ ಎಂದು ನಿರ್ಮಲಾ ಸೀತಾರಾಮನ್ ವಿವರಿಸಿದ್ದಾರೆ.

ಯುಪಿಎ-2ರ ಆಡಳಿತಾವಧಿಯಲ್ಲಿ ಶೇಕಡಾ 6.4ರಷ್ಟಿದ್ದ ಜಿಡಿಪಿ ದರವು ಎನ್‌ಡಿಎ ಮೊದಲ ಅವಧಿಯಲ್ಲಿ ಶೇಕಡಾ 7.5 ರಷ್ಟಾಗಿದೆ ಎಂದಿದ್ದಾರೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಅವಧಿಯ ಆರ್ಥಿಕ ವೃದ್ಧಿ ದರವನ್ನು ಸರ್ಕಾರ ಶುಕ್ರವಾರ ಬಿಡುಗಡೆ ಮಾಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+