ಬೆಂಗಳೂರು: ಬೆಂಗಳೂರಿನಲ್ಲಿ ಡಿಸೆಂಬರ್ ತಿಂಗಳ ಆರಂಭದಿಂದಲೇ ಅಲ್ಲಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ವಿದ್ಯುತ್ ಪೂರೈಕೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ ಬೆಸ್ಕಾಂ ಇಲಾಖೆ ಇದೀಗ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಪವರ್ ಕಟ್ (Power Cut) ಇರಲಿದೆ ಎಂದು ಘೋಷಣೆ ಮಾಡಿತ್ತು. ಆದ್ರೆ ಇದೀಗ ಮತ್ತೆ ಬೆಂಗಳೂರಿನಲ್ಲಿ ಮುಂದಿನ 4 ದಿನ ಪವರ್ ಕಟ್ ಇರಲಿದೆ ಎಂದು ಪ್ರಕಟಿಸಿದೆ. ಹಾಗಿದ್ರೆ ಬೆಂಗಳೂರಿನಲ್ಲಿ ಎಲ್ಲೆಲ್ಲಾ 4 ದಿನ ಕರೆಂಟ್ ಇರಲ್ಲ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಇದೀಗ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಲಿಮಿಟೆಡ್ (KPTCL) ಪ್ರಮುಖ ಪ್ರಸರಣ ಲೈನ್‌ಗಳು ಮತ್ತು ಸಬ್‌ಸ್ಟೇಷನ್‌ಗಳಲ್ಲಿ ದುರಸ್ತಿ ಕಾರ್ಯ ಮತ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಂಡಿರುವ ಹಿನ್ನೆಲೆ ಬೆಂಗಳೂರು ದಕ್ಷಿಣ, ಪಶ್ಚಿಮ ಮತ್ತು ಉತ್ತರ ದ 80 ಕ್ಕೂ ಅಧಿಕ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ವರದಿಯಾಗಿದೆ. ಅಲ್ಲದೇ ಡಿಸೆಂಬರ್ 25 ರಿಂದ ಡಿಸೆಂಬರ್ 28 ರವರೆಗೂ ಬೆಂಗಳೂರಿನ ಹಲವು ಕಡೆಗಳಲ್ಲಿ ಪವರ್ ಕಟ್ ಇರಲಿದೆ ಎಂದು ಹೇಳಲಾಗಿದೆ.
4 ದಿನ ಇಲ್ಲೆಲ್ಲಾ ನೋ ಕರೆಂಟ್!
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಡಿಸೆಂಬರ್ 25 ರಿಂದ ಡಿಸೆಂಬರ್ 28, 2025ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ವರದಿಯಾಗಿದೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿದಿನ ವಿದ್ಯುತ್ ಕಡಿತಗೊಳ್ಳಲಿದೆ ಎಂದು ವರದಿಯಾಗಿದೆ. ವಿದ್ಯುತ್ ಪೂರೈಕೆಯನ್ನು ಮತ್ತಷ್ಟು ಗುಣಮಟ್ಟಗೊಳಿಸುವ ಉದ್ದೇಶದಿಂದ ಕಾರ್ಯಗಳನ್ನು ಕೈಗೊಳ್ಳಲು ಈ ಅಡಚಣೆ ಅಗತ್ಯ ಎಂದು ಬೆಸ್ಕಾಂ (BESCOM) ತಿಳಿಸಿದೆ.
ಸದ್ಯದ 66 kV ಸರ್ಜಾಪುರ-ಅತ್ತಿಬೆಲೆ ಸಿಂಗಲ್-ಸರ್ಕ್ಯೂಟ್ ವಿದ್ಯುತ್ ಮಾರ್ಗವನ್ನು ಹೈ-ಟೆಂಪರೇಚರ್ ಲೋ-ಸ್ಯಾಗ್ (HTLS) ಕಂಡಕ್ಟರ್‌ಗಳಿಂದ ಬದಲಾವಣೆ ಮಾಡಲಾಗುತ್ತಿದೆ. ಈ ಆಧುನಿಕ ಕಂಡಕ್ಟರ್‌ಗಳು ಹೆಚ್ಚು ವಿದ್ಯುತ್ ಸಾಗಿಸಬಲ್ಲವು ಮತ್ತು ಉತ್ತಮ ಸೇವೆಯನ್ನು ನೀಡುತ್ತದೆ. ಇದಲ್ಲದೆ, ಬೆಸ್ಕಾಂ 220/66/11 kV ಸರ್ಜಾಪುರ ಕೇಂದ್ರದಿಂದ HTLS ಕಂಡಕ್ಟರ್‌ಗಳನ್ನು ಬಳಸಿ ಎರಡನೇ ಸರ್ಕ್ಯೂಟ್ ಅನ್ನು ಸೇರಿಸಲಿದೆ. ಈ ಕಾರ್ಯವು ವಿದ್ಯುತ್ ಪೂರೈಕೆಯ ಗುಣಮಟ್ಟವನ್ನು ಸುಧಾರಿಸಲು ಮತ್ತು ಆ ಪ್ರದೇಶದಲ್ಲಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವ ಉದ್ದೇಶವನ್ನು ಹೊಂದಿದೆ.
ಈ ನಿರ್ವಹಣಾ ಕಾರ್ಯ ಕೈಗೊಂಡಿರುವ ಹಿನ್ನೆಲೆ, ಕೆಳಗೆ ನೀಡಲಾದ ಪ್ರದೇಶಗಳಲ್ಲಿ ಪವರ್ ಕಟ್ ಉಂಟಾಗಲಿದೆ ಎಂದು ವರದಿಯಾಗಿದೆ. 66/11 kV ಅತ್ತಿಬೆಲೆ ವಲಯದಲ್ಲೂ ಪವರ್ ಕಟ್ ಉಂಟಾಗಲಿದ್ದು, ಯಾದವನಹಳ್ಳಿ, ಇಚಂಗೂರು, ವಡ್ಡರಪಾಳ್ಯ, ಅತ್ತಿಬೆಲೆ ಕೈಗಾರಿಕಾ ಪ್ರದೇಶ, ಬಾಲಗರಣಹಳ್ಳಿ, ಮಂಚನಹಳ್ಳಿ, ಅತ್ತಿಬೆಲೆ ಪಟ್ಟಣ, ಮಾಯಸಂದ್ರ, ದಾಸನಪುರ, ಬಳ್ಳೂರು, ಕಬ್ಲಿಪುರ, ಚಿಕ್ಕನಹಳ್ಳಿ, ಇಂದಿಲಬೆಲೆ, ಹಾರೋಹಳ್ಳಿ ಹಾಗೂ ಸಮೀಪದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ವರದಿಯಾಗಿದೆ.
66/11 kV ಆನೇಕಲ್ ವಲಯದ ಪ್ರದೇಶಗಳಲ್ಲೂ ಪವರ್ ಕಟ್ ಆಗಲಿದೆ ಎಂದು ಹೇಳಲಾಗಿದ್ದು, ಆನೇಕಲ್ ಪಟ್ಟಣ, ಕವಲುಹೊಸಹಳ್ಳಿ, ಗೌರೇನಹಳ್ಳಿ, ಹಲ್ದೇನಹಳ್ಳಿ, ಹೊಂಪಲಗಟ್ಟ, ಚೂಡೇನಹಳ್ಳಿ, ಹೊನ್ನಕಲಶಪುರ, ಕರ್ಪೂರು, ಬ್ಯಾಗಡದೇನಹಳ್ಳಿ, ಕಡಾ ಅಗ್ರಹಾರ, ಚಿಕ್ಕಹಾಗಡೆ, ದೊಡ್ಡಹಾಗಡೆ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ವರದಿಯಾಗಿದೆ.


Click it and Unblock the Notifications