ಭಾರತದ ವೇಗವಾಗಿ ನಗರಗಳಲ್ಲಿ ಬೆಂಗಳೂರು (Bengaluru) ಕೂಡಾ ಒಂದು. ದಿನಬೆಳಗಾದ್ರೆ ಸಾಕು ದೂರದ ಊರುಗಳಿಂದ ಉದ್ಯೋಗ ಅರಸಿಕೊಂಡು ಬಂದು, ಬೆಂಗಳೂರಿನಲ್ಲಿ ಇಳಿಯುತ್ತಾರೆ. ಸಿಲಿಕಾನ್ ಸಿಟಿ, ಬೆಂದ ಕಾಳೂರು ಹೀಗೆ ಹಲವು ಹೆಸರುಗಳಿಂದ ಕರೆಯಲ್ಪಡುವ ಬೆಂಗಳೂರು ಸದ್ಯ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ದಿನ ಹೋದಂತೆ ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಮೆಟ್ರೋ, ಬಸ್, ರೈಲು, ವಿಮಾನ ಪ್ರಯಾಣಿಕರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಅದರಲ್ಲೂ ವಿಮಾನ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (Bengaluru 2nd Airport) ನಿರ್ಮಾಣಕ್ಕೆ ಮುಂದಾಗಿದೆ.

ಅಲ್ಲದೇ 2026-27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಯೋಜನೆಗೆ ಪ್ರಾಮುಖ್ಯತೆ ನೀಡಿದ್ದು, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಸಲಹೆ ಪಡೆದು ಕಾರ್ಯಸಾಧ್ಯತಾ ವರದಿ ತಯಾರಿಸುವಂತೆ ಘೋಷಣೆಯನ್ನೂ ಮಾಡಿದ್ದಾರೆ. ಈ ಯೋಜನೆ ಒಂದು ವೇಳೆ ಆರಂಭವಾದರೆ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆಯಾಗಲಿದೆ ಮತ್ತು ಪ್ರಯಾಣಿಕರ ಸೇವೆಯೂ ಉತ್ತಮವಾಗಲಿದೆ.
ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಯೋಜನೆ ಬಗ್ಗೆ ದಿನೇ ದಿನೇ ಚರ್ಚೆಗಳು ಹೆಚ್ಚಾಗುತ್ತಿದ್ದಂತೆ, ಸರ್ಕಾರ ಕೂಡಾ ನಿರಂತರ ಈ ಕುರಿತು ಕೆಲಸ ಮಾಡುತ್ತಲೇ ಇದೆ. ಇದೀಗ ಉದ್ಯಮಿ ಕಿರಣ್ ಮಜುಂದಾರ್ ಶಾ ಕೂಡಾ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳ, ಕೆಲವು ಸಲಹೆಗಳನ್ನು ನೀಡಿದ್ದಾರೆ.
ಬೆಂಗಳೂರು ಎರಡನೇ ಏರ್‌ಪೋರ್ಟ್‌ಗೆ ಕಿರಣ್ ಮಜುಂದಾರ್ ಶಾ ಸಲಹೆ:
ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣದ ರಾಜಕೀಯ ಬೇಡಿಕೆಗಳ ಆಧಾರಿತವಾಗಿ ಅಲ್ಲ, ಸಂಚಾರ ದಟ್ಟಣೆಯ ಮೇಳೆ ಸ್ಥಳ ಆಯ್ಕೆ ಮಾಡಿದರೆ ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೇ ದಕ್ಷಿಣ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿರುವುದರಿಂದ ಕನಕಪುರ ಉತ್ತಮ ಆಯ್ಕೆ ಎಂದು ಹೇಳಿದ್ದಾರೆ.
ಈಗಾಗಲೇ ಸರ್ಕಾರ ಕೂಡಾ ಬೆಂಗಳೂರಿನಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣಕ್ಕಾಗಿ ಮೂರು ಸ್ಥಳಗಳನ್ನು ಗುರುತಿಸಿದೆ. ಅದರಲ್ಲಿ ಒಂದು ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ, ಎರಡನೆಯದು ಕನಕಪುರ ರಸ್ತೆಯಲ್ಲಿರಯವ ಸೋಮನಹಳ್ಳಿ ಮತ್ತು ಮೂರನೆಯದು ಕುಣಿಗಲ್ ರಸ್ತೆಯಲ್ಲಿರುವ ನೆಲಮಂಗಲವಾಗಿದೆ. ಇದೇ ಪ್ರಕಾರ ಇದೀಗ ಉದ್ಯಮಿ ಮಜುಂದಾರ್ ಶಾ ಕೂಡಾ ಕನಕಪುರ ಸೂಕ್ತ ಸ್ಥಳವೆಂದು ಅಭಿಪ್ರಾಯಪಟ್ಟಿದ್ದಾರೆ.
ಪ್ರಸ್ತುತ, ದೇಶದಲ್ಲೇ ಮೂರನೇ ಅತಿದೊಡ್ಡ ವಿಮಾನ ನಿಲ್ದಾಣವೆಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಗುರುತಿಸಿಕೊಂಡಿದೆ. ಅದರಲ್ಲೂ 2025 ರಲ್ಲಿ ದಾಖಲೆ ಮಟ್ಟದಲ್ಲಿ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಈ ನಿಲ್ದಾಣ 2030 ರ ವೇಳೆಗೆ ಸುಮಾರು 80-90 ಮಿಲಿಯನ್ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯಕ್ಕೆ ವಿಸ್ತರಣೆಯಾಗಲಿದೆ ಎಂದು ಹೇಳಲಾಗಿದೆ.
ಇನ್ನು ಈ ಮಧ್ಯೆ ಬೆಂಗಳೂರಿನಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆ ಬಗ್ಗೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು, 2033 ರ ಒಳಗೆ ಎರಡನೇ ವಿಮಾನ ನಿಲ್ದಾಣವನ್ನು ಕಾರ್ಯರೂಪಕ್ಕೆ ತರುವ ಗುರಿಯನ್ನು ಸರ್ಕಾರ ಹೊಂದಿದೆ ಎನ್ನಲಾಗುತ್ತಿದೆ.


Click it and Unblock the Notifications